Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರೀ ಅನಾಹುತ, 4 ಗಂಟೆ ಕಾಲ ರೈಲುಗಳ ಸಂಚಾರ ಸ್ಥಗಿತ

ಬೆಳಗಾವಿ ಗೂಡ್ಸ್ ರೈಲು ಅಪಘಾತ: ಗೂಡ್ಸ್ ರೈಲೊಂದು ಬೆಳಗಾವಿ ರೈಲ್ವೆ ನಿಲ್ದಾಣದ ಸಮೀದಲ್ಲಿ ಹಳಿ ತಪ್ಪಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು. ಸರಕು ಸಾಗಣೆ ರೈಲಿನ ಅಪಘಾತದ ಪರಿಣಾಮ ರಾಣಿ ಚೆನ್ನಮ್ಮ ರೈಲು ಕೂಡ ಅಪಘಾತವಾಗುವ ಸಾಧ್ಯತೆ ಇದ್ದು, ಅಧಿಕಾರಿಗಳ ಸಮಯಪ್ರಜ್ಞೆಯಿಂದ ಸಂಭಾವ್ಯ ಭಾರೀ ದುರಂತ ತಪ್ಪಿದೆ.

ಬೆಳಗಾವಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರೀ ಅನಾಹುತ, 4 ಗಂಟೆ ಕಾಲ ರೈಲುಗಳ ಸಂಚಾರ ಸ್ಥಗಿತ
ಸಾಂದರ್ಭಿಕ ಚಿತ್ರ
Follow us
Sahadev Mane
| Updated By: Ganapathi Sharma

Updated on:Apr 15, 2025 | 10:42 AM

ಬೆಳಗಾವಿ, ಏಪ್ರಿಲ್ 15: ಬೆಳಗಾವಿ (Belagavi) ರೈಲ್ವೆ ನಿಲ್ದಾಣದಿಂದ ಅರ್ಧ ಕಿಲೋ ಮೀಟರ್ ದೂರದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದ (Goods train derail) ಕಾರಣ ಸುಮಾರು 4 ಗಂಟೆಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು. ಅಪಘಾತ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ ಅದೇ ಮಾರ್ಗವಾಗಿ ರಾಣಿ ಚೆನ್ನಮ್ಮ ರೈಲು ಸಂಚರಿಸುವುದರಲ್ಲಿತ್ತು. ಅಧಿಕಾರಿಗಳ ಸಮಯಪ್ರಜ್ಞೆಯಿಂದ ರಾಣಿ ಚೆನ್ನಮ್ಮ ರೈಲು (Rani Chennamma Train) ನಿಲುಗಡೆಗೊಳಿಸಲಾಯಿತು. ಇದರಿಂದಾಗಿ ಸಂಭಾವ್ಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಗೂಡ್ಸ್ ರೈಲು ಎರಡು ಗಂಟೆಗಳ ಕಾಲ ವಿಳಂಬವಾಗಿ ಚಲಿಸುತ್ತಿತ್ತು. ಹೀಗಾಗಿ, ಅದಾದ ಬೆನ್ನಲ್ಲೇ ರಾಣಿ ಚೆನ್ನಮ್ಮ ರೈಲು ಆಗಮಿಸುತ್ತಿತ್ತು. ಬೆಳಗ್ಗೆ 8 ಗಂಟೆಗೆ ರಾಣಿ ಚೆನ್ನಮ್ಮ (ಬೆಂಗಳೂರು-ಕೊಲ್ಹಾಪುರ ರೈಲು) ಸಂಚರಿಸಬೇಕಿತ್ತು. ರೈಲು ಬರುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು, ರೈಲನ್ನು ಬೆಳಗಾವಿಯಿಂದ 8 ಕಿ.ಮೀ. ದೂರದಲ್ಲಿರುವ ದೇಸೂರ ನಿಲ್ದಾಣದಲ್ಲಿ ನಿಲುಗಡೆ ಮಾಡಿಸಿದರು.

ರೈಲು ಸಂಚಾರದಲ್ಲಿ ವ್ಯತ್ಯಯ

ಗೂಡ್ಸ್ ರೈಲು ಹಳಿ ತಪ್ಪಿದ ಹಿನ್ನೆಲೆ 5 ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೆಂಗಳೂರು-ಕೊಲ್ಹಾಪುರ ರಾಣಿ ಚೆನ್ನಮ್ಮ ರೈಲು, ಮುಂಬೈ-ಹುಬ್ಬಳ್ಳಿ-ದಾದರ್ ಎಕ್ಸ್​ಪ್ರೆಸ್​ ರೈಲು, ಮುಂಬೈ-ಬೆಂಗಳೂರು ಚಾಲುಕ್ಯ ಎಕ್ಸ್​ಪ್ರೆಸ್​ ರೈಲು, ಗೋವಾ-ಮಿರಜ್ ಪ್ಯಾಸೆಂಜರ್ ರೈಲು ಹಾಗೂ ಬೆಳಗಾವಿ – ಬೆಂಗಳೂರು – ಮೈಸೂರು ಸಂಚಾರದಲ್ಲಿ ವ್ಯತ್ಯಯವಾಗಿದೆ. ಸುಮಾರು ನಾಲ್ಕು ಗಂಟೆಗಳ ಕಾಲ ರೈಲುಗಳ ಸಂಚಾರ ಸ್ಥಗಿತವಾಗುತ್ತಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ
Image
ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ
Image
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
Image
ಸಂವಿಧಾನಕ್ಕೆ ಅಪಚಾರ ಆರೋಪ: ಸಚಿವ ಕೆಎನ್​ ರಾಜಣ್ಣ ವಿರುದ್ಧ ದಾಖಲಾಯ್ತು ದೂರು
Image
ಹುಬ್ಬಳ್ಳಿ ಎನ್‌ಕೌಂಟರ್‌ ಕೇಸ್​: ಪಿಎಸ್​ಐ ಅನ್ನಪೂರ್ಣಗೆ ಮೆಚ್ಚುಗೆಯ ಮಹಾಪೂರ

ಗೂಡ್ಸ್ ರೈಲು ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಹಳಿ ತಪ್ಪಿ ಮೂರು ಬೋಗಿಗಳು ಪಕ್ಕಕ್ಕೆ ಜರುಗಿವೆ. ಸ್ಥಳಕ್ಕೆ ರೈಲ್ವೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಸಂಬಳ ನೀಡದಿದ್ದಕ್ಕೆ ಬೇಸತ್ತು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ

ಸದ್ಯ ಹಳಿ ತೆರವು ಕಾರ್ಯ ಪ್ರಗತಿಯಲ್ಲಿದ್ದು, ತ್ವರಿತ ಗತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೆಲವೇ ಕ್ಷಣಗಳಲ್ಲಿ ರೈಲು ಸಂಚಾರ ಸಹಜ ಸ್ಥಿತಿಗೆ ಮರಳಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಒಮ್ಮೆ ಹಳಿ ತೆರವು ಕಾರ್ಯ ಪೂರ್ಣಗೊಂಡ ಕೂಡಲೇ ಬೆಂಗಳೂರು-ಕೊಲ್ಹಾಪುರ ರಾಣಿ ಚೆನ್ನಮ್ಮ ರೈಲು, ಮುಂಬೈ-ಹುಬ್ಬಳ್ಳಿ-ದಾದರ್ ಎಕ್ಸ್​ಪ್ರೆಸ್​ ರೈಲು, ಮುಂಬೈ-ಬೆಂಗಳೂರು ಚಾಲುಕ್ಯ ಎಕ್ಸ್​ಪ್ರೆಸ್​ ರೈಲು, ಗೋವಾ-ಮಿರಜ್ ಪ್ಯಾಸೆಂಜರ್ ರೈಲು ಹಾಗೂ ಬೆಳಗಾವಿ – ಬೆಂಗಳೂರು – ಮೈಸೂರು ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಉಳಿದಂತೆ, ರೈಲು ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲೆ ಎಂದೂ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:26 am, Tue, 15 April 25

ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ