ಬೆಳಗಾವಿಯಲ್ಲಿ ಒಂದೂವರೆ ವರ್ಷದೊಳಗೆ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣ: ಗೋವಿಂದ ಕಾರಜೋಳ

ಬೆಳಗಾವಿ: ಸೆಪ್ಟಂಬರ್ 3ರಂದು ಮಹಾನಗರ ಪಾಲಿಕೆ ಚುನಾವಣೆ (Municipal Corporation Election) ನಡೆಯುತ್ತಿದ್ದು, ಪ್ರಚಾರ ಜೋರಾಗಿ ನಡೆಯುತ್ತಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ (Govind Karjol), ಬೆಳಗಾವಿ ಮಹಾನಗರ ಪಾಲಿಕೆಗೆ 58 ವಾರ್ಡ್​ಗಳ ಪೈಕಿ 56 ವಾರ್ಡ್​ಗಳಲ್ಲಿ ಸ್ಪರ್ಧೆ ನಡೆಯುತ್ತಿದೆ. ಒಂದೂವರೆ ವರ್ಷದೊಳಗಾಗಿ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳಿಸುತ್ತೇವೆ. ರಾಜ್ಯದಲ್ಲಿ ಬೆಂಗಳೂರು ಬಿಟ್ಟರೇ ಬೆಳಗಾವಿ ನಗರಕ್ಕೆ ಮಹತ್ವ ಇದೆ. ಚುನಾವಣೆ ನಂತರ ಮುಖ್ಯಮಂತ್ರಿ ಕರೆದುಕೊಂಡು ಚೆನ್ನಮ್ಮ ವಿವಿ ಹೊಸ […]

ಬೆಳಗಾವಿಯಲ್ಲಿ ಒಂದೂವರೆ ವರ್ಷದೊಳಗೆ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣ: ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
Follow us
TV9 Web
| Updated By: sandhya thejappa

Updated on:Aug 30, 2021 | 11:50 AM

ಬೆಳಗಾವಿ: ಸೆಪ್ಟಂಬರ್ 3ರಂದು ಮಹಾನಗರ ಪಾಲಿಕೆ ಚುನಾವಣೆ (Municipal Corporation Election) ನಡೆಯುತ್ತಿದ್ದು, ಪ್ರಚಾರ ಜೋರಾಗಿ ನಡೆಯುತ್ತಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ (Govind Karjol), ಬೆಳಗಾವಿ ಮಹಾನಗರ ಪಾಲಿಕೆಗೆ 58 ವಾರ್ಡ್​ಗಳ ಪೈಕಿ 56 ವಾರ್ಡ್​ಗಳಲ್ಲಿ ಸ್ಪರ್ಧೆ ನಡೆಯುತ್ತಿದೆ. ಒಂದೂವರೆ ವರ್ಷದೊಳಗಾಗಿ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳಿಸುತ್ತೇವೆ. ರಾಜ್ಯದಲ್ಲಿ ಬೆಂಗಳೂರು ಬಿಟ್ಟರೇ ಬೆಳಗಾವಿ ನಗರಕ್ಕೆ ಮಹತ್ವ ಇದೆ. ಚುನಾವಣೆ ನಂತರ ಮುಖ್ಯಮಂತ್ರಿ ಕರೆದುಕೊಂಡು ಚೆನ್ನಮ್ಮ ವಿವಿ ಹೊಸ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಗೋವಿಂದ ಕಾರಜೋಳ, ನಗರದಲ್ಲಿ ಮನೆ ಇಲ್ಲದವರಿಗೆ ಮನೆ ಕೊಡುವ ವ್ಯವಸ್ಥೆ ಮಾಡುತ್ತೇವೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಡೀ ವಿಶ್ವ ಮೆಚ್ಚುವಂತ ಕೆಲಸ ಮಾಡಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಳ್ಳೆಯ ಕೆಲಸ ಆರಂಭಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು. ಬಿಜೆಪಿಯಿಂದ ಉಚಿತ ಶವ ಸಂಸ್ಕಾರಕ್ಕೆ ವ್ಯವಸ್ಥೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲವರು ಶವಸಂಸ್ಕಾರಕ್ಕೆ ಹಣಕ್ಕೆ ಕೈವೊಡ್ಡಿದ್ದಾರೆ. ಅವರಿಗೆ ಅನುಕೂಲ ಆಗಲಿ ಅಂತಾ ಪ್ರಣಾಳಿಕೆಯಲ್ಲಿ ಹೇಳಿದ್ದಾರೆ. ಇದರಿಂದ ಸಾರ್ವಜನಿಕರ ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ. ನಮ್ಮವರು ಅಚಾತುರ್ಯದಿಂದ ಮಾಡಿದ್ದರೆ, ಜನರ ಮನಸ್ಸಿಗೆ ನೋವಾಗಿದ್ದರೆ ವಿಷಾಧಿಸುತ್ತೇನೆ ಅಂತ ಹೇಳಿದರು.

ಡಿ.ಕೆ.ಶಿವಕುಮಾರ್ ಪಕ್ಷ ಈ ದೇಶದಲ್ಲಿ ಅರವತ್ತು ವರ್ಷ ಆಡಳಿತ ಮಾಡಿದೆ. ಎನೂ ಸಾಧನೆ ಮಾಡಿದೆ ಅಂತಾ ಹೇಳು ಮಾರಾಯಾ ಎಂದು ಕಾರಜೋಳ ಹೇಳಿಕೆ ನೀಡಿದ್ದಾರೆ. ಸುರೇಶ್ ಅಂಗಡಿ ಸಾವು ಕೊವಿಡ್ನಿಂದ ಆಗಿರುವುದು ಎಲ್ಲರಿಗೂ ಗೊತ್ತಿದೆ. ಕೊವಿಡ್ ನಿಯಮ ಎಲ್ಲರಿಗೂ ಒಂದೇ ಇದರಲ್ಲಿ ರಾಜಕಾರಣ ಮಾಡಬಾರದು. ಪೆಟ್ರೋಲ್, ಡಿಸೇಲ್ ಸ್ವಲ್ಪ ಹೆಚ್ಚಾಗಿದೆ ಮುಂದಿನ ದಿನಗಳಲ್ಲಿ ಕಡಿಮೆಯಾಗುತ್ತೆ. ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಅವ್ಯವಹಾರ ಆಗಿದ್ದರೆ ಡಿಕೆಶಿ ದಾಖಲೆ ಬಿಡುಗಡೆ ಮಾಡಲಿ ಅಂದರು.

ಮಹಾನಗರ ಪಾಲಿಕೆ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಬೆಳಗಾವಿಯ ಎಲ್ಲಾ ವಾರ್ಡ್​ಗಳಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಇದೆ. ರಾಜ್ಯ, ಕೇಂದ್ರ ಸರ್ಕಾರದ ಯೋಜನೆ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ಸಂಸದೆ ಮಂಗಳಾ ಅಂಗಡಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿವೆ. ಮಹಾನಗರ ಪಾಲಿಕೆ ಬಿಜೆಪಿ ಪಾಲಾಗುತ್ತೆ ಎಂಬ ಭರವಸೆ ಇದೆ ಅಂತ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಶಾಲೆ ಯಾವಾಗ ಆರಂಭ ಮಾಡುತ್ತೀರಾ? ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ಗೆ ಬಾಲಕನ ಪ್ರಶ್ನೆ; ವಿಡಿಯೋ ವೈರಲ್

ಸೂರ್ಯಕಾಂತಿ ಬೀಜಗಳ ಸೇವನೆಯ ಆರೋಗ್ಯ ಪ್ರಯೋಜನಗಳು; ಮಧುಮೇಹ ಸಮಸ್ಯೆ ನಿಯಂತ್ರಣಕ್ಕೆ ಉತ್ತಮ ಮಾರ್ಗ

(Govind Karjol said the Smart City project will be completed within a year and a half)

Published On - 11:50 am, Mon, 30 August 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ