ಶಾಸಕದ್ವಯರ ಅಭಿನಂದನಾ ಕಾರ್ಯಕ್ರಮದಲ್ಲಿ ಪುಷ್ಪವೃಷ್ಟಿಗೆ ಶಾಲಾ ಮಕ್ಕಳ ಬಳಕೆ; ಶಿಕ್ಷಕರ ವಿರುದ್ಧ ಸಾರ್ವಜನಿಕರ ಆಕ್ರೋಶ
ಕಾಗವಾಡ ಹಾಗೂ ಅಥಣಿ ಶಾಸಕರನ್ನು ಮೆಚ್ವಿಸಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಕರೆಯಿಸಿ ಪುಷ್ಪವೃಷ್ಟಿ ಮಾಡಿಸಿದ್ದಾರೆ. ಸುಮಾರು 80ಕ್ಕೂ ಅಧಿಕ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಆಗಮಿಸಿ ಶಾಸಕದ್ವಯರಿಗೆ ಪುಷ್ಪವೃಷ್ಟಿ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿದೆ.
ಚಿಕ್ಕೋಡಿ, ಆ.09: ಆಡಳಿತಾರೂಢ ಕಾಂಗ್ರೆಸ್ ಶಾಸಕದ್ವಯರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಆಗಸ್ಟ್ 6ರಂದು ಕಾರ್ಯಕ್ರಮಕ್ಕಾಗಿ ಶಾಲಾ ಮಕ್ಕಳು ಕೆಲಸ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಶಾಸಕರಾಗಿ ಆಯ್ಕೆಯಾದ ಹಿನ್ನೆಲೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ, ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ರಾಜಕೀಯ ಕಾರ್ಯಕ್ರಮಕ್ಕೆ ಹಾಗೂ ಚುನಾವಣಾ ಪ್ರಚಾರಕ್ಕೆ ಶಾಲಾ ಮಕ್ಕಳನ್ನು ಬಳಸುವಂತಿಲ್ಲ ಎಂಬ ನಿಯಮ ಇದ್ದರೂ ಯಾವುದಕ್ಕೂ ಡೋಂಟ್ ಕೇರ್ ಅನ್ನದೆ ಕಾಗವಾಡ ಹಾಗೂ ಅಥಣಿ ಶಾಸಕರನ್ನು ಮೆಚ್ವಿಸಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಕರೆಯಿಸಿ ಪುಷ್ಪವೃಷ್ಟಿ ಮಾಡಿಸಿದ್ದಾರೆ. ಸುಮಾರು 80ಕ್ಕೂ ಅಧಿಕ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಆಗಮಿಸಿ ಶಾಸಕದ್ವಯರಿಗೆ ಪುಷ್ಪವೃಷ್ಟಿ ಮಾಡಿದ್ದಾರೆ. ಭಾನುವಾರ ಶಾಲೆಗೆ ರಜೆ ಇದ್ದರೂ ಸಮವಸ್ತ್ರ ಧರಿಸಿ ಬರುವಂತೆ ಶಿಕ್ಷಕರು ಸೂಚಿಸಿದ್ದರಂತೆ. ಮಕ್ಕಳನ್ನು ರಸ್ತೆ ಬದಿ ನಿಲ್ಲಿಸಿ ಶಾಸಕರಿಗೆ ಪುಷ್ಪವೃಷ್ಟಿ ಮಾಡಿಸಿರುವ ವಿಡಿಯೋ ವೈರಲ್ ಆಗಿದೆ. ಸದ್ಯ ಸರ್ಕಾರಿ ಶಾಲೆಯ ಶಿಕ್ಷಕರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: ಬೆಳಗಾವಿ: 7 ವರ್ಷಗಳು ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ತಾಯಿ, ಮಕ್ಕಳ ಆಸ್ಪತ್ರೆ; 1 ಆಸ್ಪತ್ರೆ ಕಟ್ಟಲು ಏಳು ವರ್ಷ ಬೇಕಾ