ಬೆಳಗಾವಿ: ಸೇವಾ ಭದ್ರತೆ ಹಾಗೂ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಯುತ್ತಿದೆ. ಇಂದೂ ಮತ್ತೆ ಬೆಳಗಾವಿ ಸುವರ್ಣ ಗಾರ್ಡನ್ನಲ್ಲಿ ಪ್ರತಿಭಟನೆ ನಡೆಯಲಿದೆ. ಆದ್ರೆ ಸುವರ್ಣ ಗಾರ್ಡನ್ ಟೆಂಟ್‌ನಲ್ಲಿ ನಿನ್ನೆ ಪ್ರತಿಭಟನೆ ನಡೆಸಿದ್ದ ಅತಿಥಿ ಉಪನ್ಯಾಸಕರ ಪೈಕಿ ಓರ್ವ ಅತಿಥಿ ಉಪನ್ಯಾಸಕಿ ಅಸ್ವಸ್ಥಗೊಂಡ ಘಟನೆ ನಡೆದಿದೆ.
ಸಚಿವ ಅಶ್ವತ್ಥ್ ನಾರಾಯಣ್‌ರಿಂದ ನಿನ್ನೆ ಸಂಜೆ ಸೂಕ್ತ ಭರವಸೆ ಸಿಗದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಕೂಡ ಪ್ರತಿಭಟನೆ ಮುಂದುವರೆದಿತ್ತು. ಈ ವೇಳೆ ಪ್ರತಿಭಟನಾ ನಿರತ ಚೈತ್ರಾ ಮಂಜುನಾಥ ಅಸ್ವಸ್ಥಗೊಂಡಿದ್ರು. ಸದ್ಯ ಪೊಲೀಸ್ ಸಿಬ್ಬಂದಿ ಉಪನ್ಯಾಸಕಿಯನ್ನು ಆ್ಯಂಬುಲೆನ್ಸ್ ನಲ್ಲಿ ಬಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ವಾಪಸ್ ಕಳಿಸಿದ್ದಾರೆ.