Hampi Utsav 2023: ಜನವರಿ 27ರಿಂದ 3 ದಿನಗಳ ಕಾಲ ಹಂಪಿ ಉತ್ಸವ: ಜಿಲ್ಲಾಡಳಿತ ತೀರ್ಮಾನ

ಜನವರಿ 27ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

Hampi Utsav 2023: ಜನವರಿ 27ರಿಂದ 3 ದಿನಗಳ ಕಾಲ ಹಂಪಿ ಉತ್ಸವ: ಜಿಲ್ಲಾಡಳಿತ ತೀರ್ಮಾನ
ಹಂಪಿ ಕಲ್ಲಿನ ರಥ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 28, 2022 | 6:54 PM

ಬೆಳಗಾವಿ/ವಿಜಯನಗರ: ಇತಿಹಾಸದ ಪುಟಗಳಲ್ಲಿ ಸ್ವರ್ಣ ಅಕ್ಷರಗಳಿಂದಲೇ ಬರೆಯಲಾಗಿರುವ ವಿಜಯನಗರ ಸಾಮ್ರಾಜ್ಯ ಜಗತ್ಪ್ರಸಿದ್ಧಿ. ಹಂಪಿ ಉತ್ಸವನ್ನು (Hampi Utsav) ಪ್ರತಿವರ್ಷ ನಡೆಸಲಾಗುತ್ತದೆ. ಅದರಂತೆ ಈ ವರ್ಷ ಜನವರಿ 27ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಂಪಿ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಉದ್ಘಾಟಿಸಲಿದ್ದಾರೆ. ಈ ಸಂಬಂಧ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ (Shashikala Jolle)  ವಿಜಯನಗರ ಜಿಲ್ಲಾಡಳಿತದ ಜೊತೆ ಇಂದು (ಡಿ. 28) ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೈಸೂರು ದಸರಾ ಮಾದರಿಯಲ್ಲೇ ಹಂಪಿ, ಕಮಲಾಪುರ, ಹೊಸಪೇಟೆಯಲ್ಲಿ ದೀಪಾಲಂಕಾರ ಮಾಡುವ ಬಗ್ಗೆ ಚರ್ಚೆಯಾಗಿದೆ.

ಹಂಪಿ ಉತ್ಸವಕ್ಕೆ ಸ್ಥಳ ಪರಿಶೀಲಿಸಿದ್ದ ಜಿಲ್ಲಾಧಿಕಾರಿ

ಹಂಪಿ ಉತ್ಸವ ಹಿನ್ನೆಲೆ ಈಗಾಗಲೆ ಡಿಸೆಂಬರ್​ 1 ರಂದು ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್ ಟಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್ ಅವರು ಪ್ರತಿ ವರ್ಷ ಹಂಪಿ ಉತ್ಸವ ಆಯೋಜಿಸುವ ಪ್ರದೇಶಗಳನ್ನು ಪರಿಶೀಲಿಸಿದ್ದರು. ಜಲಕ್ರೀಡಾ ಪ್ರದೇಶ, ಮುಖ್ಯ ವೇದಿಕೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಇತರ ಸ್ಥಳಗಳನ್ನು ಪರಿಶೀಲಿಸಿದ್ದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಾಮಾನ್ಯ ಕಾರ್ಯಕ್ರಮಗಳಾದ ತುಂಗಾ ಆರತಿ, ಸಾಂಸ್ಕೃತಿಕ ಸಂಜೆ, ಹಂಪಿ ಬೈ ಸ್ಕೈ, ಹೆಲಿಕಾಪ್ಟರ್ ರೈಡ್, ಲೈಟ್ ಆ್ಯಂಡ್ ಸೌಂಡ್ ಶೋ, ಗ್ರಾಮೀಣ ಕ್ರೀಡೆಗಳ ಜೊತೆಗೆ ತುಂಗಭದ್ರಾ ನದಿಯಲ್ಲಿ ಜಲಕ್ರೀಡೆ ನಡೆಸಲು ಆಡಳಿತ ಮಂಡಳಿ ಮುಂದಾಗಿದೆ. ಹಿಂದಿನ ಆವೃತ್ತಿಗಳಲ್ಲಿ ಕಮಲಾಪುರ ಕೆರೆಯಲ್ಲಿ ಜಲಕ್ರೀಡೆ ನಡೆಯುತ್ತಿತ್ತು ಎಂದು ತಿಳಸಿದ್ದರು.

ಹಂಪಿ ಉತ್ಸವ ಇತಿಹಾಸ

1980ರಲ್ಲಿ ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರು ಮೊದಲ ಬಾರಿ ಆರಂಭಿಸಿದ ಈ ಹಂಪಿ ಉತ್ಸವ ರಾಜ್ಯ ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಅಂದಿನಿಂದ ಇಂದಿನವರೆಗೆ ಕೋವಿಡ್ ಸಂದರ್ಭವನ್ನು ಹೊರತುಪಡಿಸಿ ಅದ್ಧೂರಿ ಉತ್ಸವವನ್ನು ಆಚರಿಸುತ್ತಾ ಬರಲಾಗುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆ ಹಂಪಿಯ ತುಂಗಭದ್ರಾ ನದಿಯ ದಡದಲ್ಲಿ ಸಾಂಕೇತಿಕವಾಗಿ ಉತ್ಸವವನ್ನು ಆಚರಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Wed, 28 December 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್