AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ವಿಡಿಯೋ ತೋರಿಸಿ ಕಿರುಕುಳ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ಕಾಂಗ್ರೆಸ್​ ನಾಯಕಿ ನವ್ಯಶ್ರೀ

ಪೊಲೀಸ್ ವಿಚಾರಣೆಗೆ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ರಾವ್ ಆಗಮಿಸಿದರು. ಅಧಿಕಾರಿ ರಾಜಕುಮಾರ ಟಾಕಳೆ ನೀಡಿದ ದೂರಿನನ್ವಯ ಮೊದಲು ವಿಚಾರಣೆ ನಡೆಯಲಿದೆ. ಪಿಎಸ್‌ಐ ಮಂಜುನಾಥ ಭಜಂತ್ರಿಯಿಂದ ನವ್ಯಶ್ರೀ ವಿಚಾರಣೆ ಮಾಡಲಿದ್ದಾರೆ.

ಖಾಸಗಿ ವಿಡಿಯೋ ತೋರಿಸಿ ಕಿರುಕುಳ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ಕಾಂಗ್ರೆಸ್​ ನಾಯಕಿ ನವ್ಯಶ್ರೀ
ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ
TV9 Web
| Edited By: |

Updated on:Jul 25, 2022 | 1:31 PM

Share

ಬೆಳಗಾವಿ: ಖಾಸಗಿ ವಿಡಿಯೋ ತೋರಿಸಿ ಕಿರುಕುಳ ಪ್ರಕರಣ ಸಂಬಂಧ ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ ವಿರುದ್ಧ ಜಿಲ್ಲೆಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಲಾಗಿತ್ತು. ಸದ್ಯ ಪೊಲೀಸ್ ವಿಚಾರಣೆಗೆ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ರಾವ್ ಆಗಮಿಸಿದರು. ಅಧಿಕಾರಿ ರಾಜಕುಮಾರ ಟಾಕಳೆ ನೀಡಿದ ದೂರಿನನ್ವಯ ಮೊದಲು ವಿಚಾರಣೆ ನಡೆಯಲಿದೆ. ಪಿಎಸ್‌ಐ ಮಂಜುನಾಥ ಭಜಂತ್ರಿಯಿಂದ ನವ್ಯಶ್ರೀ ವಿಚಾರಣೆ ಮಾಡಲಿದ್ದಾರೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಹನಿ ಟ್ರ್ಯಾಪ್, ಜೀವಬೆದರಿಕೆ ಕೇಸ್ ದಾಖಲಿಸಿದ್ದರು. ನವ್ಯಶ್ರೀ ನೀಡಿದ ಅತ್ಯಾಚಾರ ಪ್ರಕರಣದ ವಿಚಾರಣೆ ಕೂಡ ಇಂದು ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮೊದಲು ರಾಜಕುಮಾರ ಕೇಸ್ ವಿಚಾರಣೆ ನಂತರ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿ ಮೆಡಿಕಲ್ ಟೆಸ್ಟ್​​ ಮಾಡಿಸಲಿದ್ದಾರೆ. ಮೆಡಿಕಲ್ ನಂತರ ನವ್ಯಶ್ರೀ ನೀಡಿದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಪಿಎಂಸಿ ಪೊಲೀಸರು ಕೈಗೆತ್ತಿಕೊಳ್ಳಲಿದ್ದಾರೆ.

ಇದನ್ನೂ ಓದಿ: Belagavi News: ಖಾಸಗಿ ವಿಡಿಯೋ ತೋರಿಸಿ ಕಿರುಕುಳ ಪ್ರಕರಣ, ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ ವಿರುದ್ಧ ದೂರು

ಪ್ರಕರಣ ಏನು?

ಕಾಂಗ್ರೆಸ್ ಯುವ ನಾಯಕಿ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರರಾವ್ ವಿರುದ್ದ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಹನಿ ಟ್ರ್ಯಾಪ್, ಜೀವಬೆದರಿಕೆ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆಯಿಂದ ದೂರು ನೀಡಿದ್ದಾರೆ.  ನವ್ಯಶ್ರೀ ಮತ್ತು ಆಕೆಯ ಆಪ್ತ ತಿಲಕ್ ಇಬ್ಬರ ಮೇಲೆ ಸೆಕ್ಷನ್ 384, 448, 504, 506, 34ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. 384 – ಸುಲಿಗೆ, 448 – ಮನೆಗೆ ಅತಿಕ್ರಮ ಪ್ರವೇಶ, 504 – ಶಾಂತಿಭಂಗಗೊಳಿಸುವ ಉದ್ದೇಶದ ನಿಂದನೆ, 506 – ಬೆದರಿಕೆ, 34 – ಕ್ರಿಮಿನಲ್ ಉದ್ದೇಶ, ಸಕ್ಷೆನ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ತನ್ನಗೆ ತನ್ನ ಕುಟುಂಬಕ್ಕೆ ನವ್ಯಶ್ರೀಯಿಂದ ರಕ್ಷಣೆ ನೀಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದು, ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ತಡರಾತ್ರಿ ದೂರು ದಾಖಲಾಗಿದೆ.

ರಾಜಕುಮಾರ್ ಟಾಕಳೆ ನನ್ನ ಗಂಡ: ನವ್ಯಶ್ರೀ

ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಖಾಸಗಿ ವಿಡಿಯೋ ಹಾಕಿದ್ದಾರೆ. ಈ ಬಗ್ಗೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ದೂರು ಕೊಡುತ್ತೇನೆ ಎಂದು ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ ಹೇಳಿಕೆ ನೀಡಿದರು. ಕಳೆದ 15 ದಿನಗಳಿಂದ ನಾನು ಭಾರತದಲ್ಲಿ ಇರಲಿಲ್ಲ. ರಾಜಕುಮಾರ್ ಟಾಕಳೆ ನನ್ನ ಗಂಡ. ರಾಜಕುಮಾರ್ ಟಾಕಳೆರನ್ನ ನಾನು ಮದುವೆಯಾಗಿದ್ದೇನೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ದಾಖಲೆಗಳನ್ನ ಕೊಡ್ತೀನಿ. ಇಡೀ ರಾಜ್ಯದಲ್ಲಿ ನನ್ನ ಬಗ್ಗೆ ಯಾವುದೇ ದೂರು ಇಲ್ಲ. ರಾಜಕಾರಣದಲ್ಲಿ ಮುಂದೆ ಬರ್ತಿನಿ ಎಂದು ಈ ರೀತಿ ಮಾಡಿದ್ದಾರೆ ಎಂದು ನಗರದಲ್ಲಿ ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ ಹೇಳಿದರು.

Published On - 6:49 am, Mon, 25 July 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!