
ಬೆಳಗಾವಿ: ಉಪಚುನಾವಣೆಗೆ ಕೇವಲ ಎರಡೇ ದಿನ ಬಾಕಿ ಇದ್ದು, ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಗೋಕಾಕ್ ಕ್ಷೇತ್ರದ ಉಪಚುನಾವಣೆ ಸಂಬಂಧ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೆಚ್.ಡಿ.ದೇವೇಗೌಡ ಮತ್ತು ಹೆಚ್. ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಆಗಮಿಸಿದ್ದರು. ಇದೇ ವೇಳೆ ಬೆಂಗಳೂರಿಗೆ ಹೋಗುತ್ತಿದ್ದ ಕುಮಾರಸ್ವಾಮಿ ಕೆಲ ಕಾಲ ತಂದೆ ಜೊತೆ ಮಾತುಕತೆ ನಡೆಸಿದ್ದಾರೆ. ಇಂದು ಗೋಕಾಕ್ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಪರ ದೇವೇಗೌಡರು ಪ್ರಚಾರ ನಡೆಸಲಿದ್ದಾರೆ.
Published On - 11:14 am, Mon, 2 December 19