AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ ದಾಳಿ

ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಬೆಳಗಾವಿಯ ಮಾಧವ ನಗರದ ಯಶ್ ಹಾಸ್ಪಿಟಲ್ ಮೇಲೆ ಬೆಳಗಾವಿ ಉಪವಿಭಾಗಾಧಿಕಾರಿ, ಆರೋಗ್ಯ ಇಲಾಖೆ ಜಂಟಿ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಈ ವೇಳೆ, ರೋಗಿಗಳ ನೋಂದಣಿ ಪುಸ್ತಕ, ಗರ್ಭಿಣಿಯರ ಸ್ಕ್ಯಾನಿಂಗ್ ಪತ್ತೆಯಾಗಿದ್ದು, ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ.

ಬೆಳಗಾವಿ: ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ ದಾಳಿ
ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಯಶ್ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ ದಾಳಿ
ಸಹದೇವ್​ ಮಾನೆ
| Edited By: Rakesh Nayak Manchi|

Updated on: Nov 03, 2023 | 12:01 PM

Share

ಬೆಳಗಾವಿ, ನ.3: ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಬೆಳಗಾವಿಯ (Belagavi) ಮಾಧವ ನಗರದ ಯಶ್ ಹಾಸ್ಪಿಟಲ್ ಮೇಲೆ ಬೆಳಗಾವಿ ಉಪವಿಭಾಗಾಧಿಕಾರಿ, ಆರೋಗ್ಯ ಇಲಾಖೆ ಜಂಟಿ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಈ ವೇಳೆ, ರೋಗಿಗಳ ನೋಂದಣಿ ಪುಸ್ತಕ, ಗರ್ಭಿಣಿಯರ ಸ್ಕ್ಯಾನಿಂಗ್ ಪತ್ತೆಯಾಗಿದ್ದು, ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ.

ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆಹಚ್ಚುವ ಕಾಯ್ದೆ ಉಲ್ಲಂಘನೆಯಡಿ ಬೆಳಗಾವಿ ಉಪವಿಭಾಗಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ಕೈಗೊಂಡು ಕಾನೂನು ಬಾಹಿರವಾಗಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಯಶ್ ಹಾಸ್ಪಿಟಲ್ ಮೇಲೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಬಿಜೆಪಿ ನಾಯಕರಲ್ಲಿ ಹಿಂದೆ ವೈಮನಸ್ಸುಗಳಿದ್ದವು ಎನ್ನುವ ಶಶಿಕಲಾ ಜೊಲ್ಲೆ ಲೋಕಸಭಾ ಚುನಾವಣೆ ಸಾಮೂಹಿಕ ಹೋರಾಟ ನಡೆಸುತ್ತೇವೆ ಅನ್ನುತ್ತಾರೆ!

ದಾಳಿ ವೇಳೆ ಹೆಣ್ಣು ಭ್ರೂಣ ಪತ್ತೆ ಹಚ್ಚುವುದು ಪತ್ತೆ‌ಯಾಗಿದೆ. ರೋಗಿಗಳ ನೋಂದಣಿ ಪುಸ್ತಕ, ಗರ್ಭಿಣಿಯರ ಸ್ಕ್ಯಾನಿಂಗ್, ಸರ್ಕಾರದ ಹಲವು ನಿಯಮಾವಳಿಗಳ ಉಲ್ಲಂಘನೆ ನ್ಯೂನತೆಯಡಿ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದ್ದು, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಷೀನ್, ಸ್ಕ್ಯಾನಿಂಗ್ ಮಾಡುವ ರೂಮ್ ಜಪ್ತಿ ಮಾಡಿದ್ದಾರೆ.

ನಿಯಮ ಉಲ್ಲಂಘನೆ ಹಿನ್ನೆಲೆ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಆಸ್ಪತ್ರೆಗೆ ನೋಟಿಸ್​ನಲ್ಲಿ ತಿಳಿಸಲಾಗಿದೆ. ಬೆಳಗಾವಿ ಎಸಿ ಶ್ರವಣಕುಮಾರ, ಪ್ರೊಬ್ರೆಷನರಿ ಐಎಎಸ್‌ ಶುಭಂ ಶುಕ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ‌.ವಿಶ್ವನಾಥ ಎಂ.ಭೋವಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More