Karnataka Rain: ಕರ್ನಾಟಕದಲ್ಲಿ ಮುಂದುವರೆದ ಮಳೆ ಆರ್ಭಟ: ಬೆಳಗಾವಿ, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲೆಯಾದ್ಯಂತ ವರುಣಾರ್ಭಟ ಹಿನ್ನೆಲೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಕೆಲ ಪಟ್ಟಣ, ಹಳ್ಳಿಗಳಲ್ಲಿ ಕರೆಂಟ್​ ಇಲ್ಲದೇ ಜನರು ಪರದಾಡುವಂತ್ತಾಗಿದೆ. 15 ದಿನಗಳಲ್ಲಿ 650 ವಿದ್ಯುತ್ ಕಂಬಗಳು ಮಳೆಯಿಂದಾಗಿ ಧರೆಗುರುಳಿವೆ.

Karnataka Rain: ಕರ್ನಾಟಕದಲ್ಲಿ ಮುಂದುವರೆದ ಮಳೆ ಆರ್ಭಟ: ಬೆಳಗಾವಿ, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
TV9kannada Web Team

| Edited By: Apurva Kumar Balegere

Jul 15, 2022 | 11:29 AM

ಬೆಳಗಾವಿ: ಬೆಳಗಾವಿ ಮತ್ತು ಖಾನಾಪುರ ತಾಲೂಕಿನಾದ್ಯಂತ ಭಾರೀ ಮಳೆ (Heavy Rain) ಹಿನ್ನೆಲೆ ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವ್ಯಾಪಕವಾಗಿ ಮಳೆಯ ಅಬ್ಬರ ಮುಂದುವರೆದಿದ್ದು, ಬೆಳಗಾವಿ ನಗರ, ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ(ಜು.16) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಶೃಂಗೇರಿ ತಾಲೂಕಿನ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬಿಇಓ ರಾಘವೇಂದ್ರ ಆದೇಶ ಹೊರಡಿಸಿದ್ದಾರೆ. ಮೂಡಿಗೆರೆ, ಕೊಪ್ಪ ತಾಲೂಕಿನ ಶಾಲೆಗಳಿಗೂ ರಜೆ ನೀಡಲಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳ್ಳೂರು ಸಮೀಪ ಮಳೆಯಿಂದಾಗಿ ಮರಗಳು ಕುಸಿದು ಬಿದ್ದಿವೆ. ಕಾಲೇಜುಗಳಿಗೆ ಬರಲಾರದೇ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಬಿರುಗಾಳಿ ಸಹಿತ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತ ಉಂಟಾಗಿದೆ.

ಇದನ್ನೂ ಓದಿ:  Shiradi Ghat: ಶಿರಾಡಿಘಾಟ್​ ಹೆದ್ದಾರಿಯಲ್ಲಿ ಭೂ ಕುಸಿತ: ರಾತ್ರಿವೇಳೆ ಭಾರಿ ವಾಹನ ಸಂಚಾರ ನಿಷೇಧ

ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ

ಹಾಸನ: ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಸಕಲೇಶಪುರ, ಆಲೂರು, ಅರಕಲಗೂಡು, ಬೇಲೂರಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೇಮಾವತಿ ಜಲಾಶಯಕ್ಕೆ 41420 ಕ್ಯೂಸೆಕ್ ಒಳಹರಿವಿದ್ದು, ಜಲಾಶಯದಿಂದ 38000 ಕ್ಯೂಸೆಕ್ ನೀರು ಹೊರಹರಿವಿದೆ. ಹೇಮಾವತಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2922 ಅಡಿ. ಇಂದು ಜಲಾಶಯದಲ್ಲಿನ ನೀರಿನ ಮಟ್ಟ 2920.40 ಅಡಿ. ಜಲಾಶಯದ ನೀರಿನ ‌ಸಂಗ್ರಹ ಪ್ರಮಾಣ 37.103 ಟಿಎಂಸಿ. ಇಂದು ಜಲಾಶಯದಲ್ಲಿರುವ ನೀರಿನ ಪ್ರಮಾಣ 35.557 ಟಿಎಂಸಿ.

ಇದನ್ನೂ ಓದಿ: Charmadi Ghat ಚಾರ್ಮಾಡಿ ಘಾಟ್​ನಲ್ಲಿ ಲಘು ಭೂಕುಸಿತ; ನಿರಂತರ ಕಾರ್ಯದಲ್ಲಿ ತೊಡಗಿರುವ ಜೆಸಿಬಿಗಳು

ಮಳೆಯಿಂದಾಗಿ ಧರೆಗುರುಳಿದ 650 ವಿದ್ಯುತ್ ಕಂಬಗಳು:

ಕೊಡಗು: ಜಿಲ್ಲೆಯಾದ್ಯಂತ ವರುಣಾರ್ಭಟ ಹಿನ್ನೆಲೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಕೆಲ ಪಟ್ಟಣ, ಹಳ್ಳಿಗಳಲ್ಲಿ ಕರೆಂಟ್​ ಇಲ್ಲದೇ ಜನರು ಪರದಾಡುವಂತ್ತಾಗಿದೆ. 15 ದಿನಗಳಲ್ಲಿ 650 ವಿದ್ಯುತ್ ಕಂಬಗಳು ಮಳೆಯಿಂದಾಗಿ ಧರೆಗುರುಳಿವೆ. ಇನ್ನೂ ಅಂಗನವಾಡಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಾರೀ ಮಳೆಗೆ ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಿದ್ಯುತ್ ಇಲ್ಲದೆ ಗ್ರಾಮೀಣ ಕೊಡಗು ಭಾಗದಲ್ಲಿ ಜನರು ಪರದಾಡುತ್ತಿದ್ದಾರೆ. ವಿದ್ಯುತ್ ವ್ಯವಸ್ಥೆ ಮರುಸ್ಥಾಪನೆಗೆ ಚೆಸ್ಕಾಂ ಹರಸಾಹಸ ಪಡುತ್ತಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada