ಬೆಳಗಾವಿ: ಜಿಲ್ಲೆಯಲ್ಲಿ ಇಂದು ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ (Rain). ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿಸುತ್ತಿದೆ. ಮಳೆಗೆ ಪ್ರಮುಖ ರಸ್ತೆಗಳಲ್ಲಿ (Roads) ನೀರು ನಿಂತಿದ್ದು, ಸಂಚಾರಕ್ಕೆ ತೀರಾ ಸಮಸ್ಯೆಯಾಗಿದೆ. ಹಲವೆಡೆ ಮರಗಳು ಧರೆಗುರಳಿವೆ. ಜೊತೆಗೆ ವಿದ್ಯುತ್ ಸಂಪರ್ಕ ಕೂಡಾ ಸ್ಥಗಿತವಾಗಿದೆ. ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಕುಂದಾನಗರಿ ಜನರಿಗೆ ಮಳೆರಾಯ ತಂಪೆರೆದಿದೆ. ಭಾರಿ ಮಳೆಗೆ ಚೆನ್ನಮ್ಮ ವೃತ್ತದಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್, ಬ್ಯಾನರ್ಗಳು ಕಿತ್ತು ಹೋಗಿವೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು (ಶನಿವಾರ) ಮತ್ತು ನಾಳೆ (ಭಾನುವಾರ) ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕಳೆದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏ. 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದಿನಿಂದ ಏ. 10ರವರೆಗೆ ಮಳೆ ಮುಂದುವರೆಯಲಿದೆ. ತಮಿಳುನಾಡು, ಕೇರಳ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಏಪ್ರಿಲ್ 10ರವರೆಗೂ ಮಳೆಯಾಗಲಿದೆ. ಕರಾವಳಿ ಮಾತ್ರವಲ್ಲದೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ
ಟಾಮ್ ಹಾಲೆಂಡ್ ಮನೆಗೆ ಬಂತು ಎರಡು ಕೋಟಿ ರೂಪಾಯಿ ಮೌಲ್ಯದ ಎಲೆಕ್ಟ್ರಿಕ್ ಕಾರು
Published On - 3:58 pm, Sat, 9 April 22