AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಡಿಫರೆಂಟ್ ಆಗಿ ಶಿವಾಜಿ ಪ್ರತಿಮೆ ಉದ್ಘಾಟಿಸಲು ಹೆಬ್ಬಾಳ್ಕರ್ ತಯಾರಿ, ಲೇಸರ್- ಕ್ರ್ಯಾಕರ್ ಶೋ ಮೂಲಕ ಜಾರಕಿಹೊಳಿಗೆ ಠಕ್ಕರ್

ರಾಜಹಂಸಗಡ ಕೋಟೆಯಲ್ಲಿನ ಶಿವಾಜಿ ಮೂರ್ತಿ ಲೋಕಾರ್ಪಣೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ವಾರ್​ ಜೋರಾಗಿದ್ದು, ಇಂದು(ಮಾ.5) ಮತ್ತೊಮ್ಮೆ ಲಕ್ಷ್ಮೀ ಹೆಬ್ಬಾಳ್ಕರ್ ಶಿವಾಜಿ ಪ್ರತಿಮೆ ಉದ್ಘಾಟಿಸಲಿದ್ದಾರೆ.

ಇಂದು ಡಿಫರೆಂಟ್ ಆಗಿ ಶಿವಾಜಿ ಪ್ರತಿಮೆ ಉದ್ಘಾಟಿಸಲು ಹೆಬ್ಬಾಳ್ಕರ್ ತಯಾರಿ,  ಲೇಸರ್- ಕ್ರ್ಯಾಕರ್ ಶೋ ಮೂಲಕ ಜಾರಕಿಹೊಳಿಗೆ ಠಕ್ಕರ್
ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 05, 2023 | 8:28 AM

Share

ಬೆಳಗಾವಿ: ರಾಜಹಂಸಗಡ ಕೋಟೆಯಲ್ಲಿನ ಶಿವಾಜಿ ಮೂರ್ತಿ ಲೋಕಾರ್ಪಣೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ನಡುವಿನ ಯುದ್ಧ ಅಂತ್ಯಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಮೊನ್ನೆಯಷ್ಟೇ ಸಿಎಂ ಬೊಮ್ಮಾಯಿಂದ ಲೋಕಾರ್ಪಣೆಗೊಂಡಿದ್ದ ಶಿವಾಜಿ ಮೂರ್ತಿ, ಇಂದು ಮತ್ತೊಮ್ಮೆ ಲೋಕಾರ್ಪಣೆ ಆಗಲಿದೆ. ಹೌದು ರಾಜಹಂಸಗಡದಲ್ಲಿ ಮತ್ತೊಮ್ಮೆ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಸಿದ್ಧತೆ ನಡೆದಿದ್ದು, ಇಂದು(ಮಾ.5) ಶಿವಾಜಿ ಪ್ರತಿಮೆ ಉದ್ಘಾಟಿಸಲು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ‘ಕೈ’ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಯಾರಿ ನಡೆಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಗೆ 2 ತಿಂಗಳು ಬಾಕಿ ಇರುವಾಗಲೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್​ ಜಾರಕಿಹೊಳಿ ವರ್ಸಸ್ ಲಕ್ಷ್ಮೀ ಹೆಬ್ಬಾಳ್ಕರ್ ಫೈಟ್ ತಾರಕಕ್ಕೇರಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೊಮ್ಮೆ ಗೆಲ್ಲಲು ಹೆಬ್ಬಾಳ್ಕರ್ ಮರಾಠಿಗರ ಓಲೈಕೆಗೆ ನಿಂತ್ರೆ, ಇತ್ತ ರಮೇಶ್ ಜಾರಕಿಹೊಳಿ ಕೂಡ ಹೆಬ್ಬಾಳ್ಕರ್ ಸೋಲಿಸಲು ಮರಾಠಿಗರನ್ನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಬೆಳಗಾವಿ ತಾಲೂಕಿನ ರಾಜಹಂಸಗಡ ಕೋಟೆಯ ಮೇಲೆ 36 ಅಡಿ ಎತ್ತರದ ಶಿವಾಜಿ ಮೂರ್ತಿ ತಲೆ ಎತ್ತಿ ನಿಂತಿದೆ. ಸರ್ಕಾರಿ ಅನುದಾನದಲ್ಲಿ ಸಿದ್ದಗೊಂಡ ಶಿವಾಜಿ ಪ್ರತಿಮೆಯ ಲೋಕಾರ್ಪಣೆ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಕ್ರೆಡಿಟ್ ವಾರ್ ಮುಂದುವರೆದಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣಕ್ಕೆ 11 ಕೋಟಿ ರೂ. ಬಿಡುಗಡೆ ಮಾಡಿದ್ದು ನಾನು: ಗಾಲಿ ಜನಾರ್ಧನ ರೆಡ್ಡಿ, ಕೆಆರ್ ಪಿಪಿ ಅಧ್ಯಕ್ಷ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ತೊಡೆ ತೊಟ್ಟಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೊನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನ ರಾಜಹಂಸಗಡ ಕೋಟೆಗೆ ಕರೆ ತಂದು ಮುಖ್ಯಮಂತ್ರಿ ಕೈಯಲ್ಲೆ ಶಿವಾಜಿ ಮೂರ್ತಿ ಲೋಕಾರ್ಪಣೆಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಕೋಟೆ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನವನ್ನ ನೀಡುತ್ತಿವಿ ಎಂದು ಮುಖ್ಯಮಂತ್ರಿಗಳ ಬಾಯಿಂದಲೇ ಹೇಳಿಸುವ ಮೂಲಕ ಮರಾಠ ವೋಟ್ ಬ್ಯಾಂಕ್​ಗೆ ಕೈ ಹಾಕಿದ್ದಾರೆ. ಇತ್ತ ಲಕ್ಷ್ಮಿ ಹೆಬ್ಬಾಳ್ಕರ್ ಸಹ ರಮೇಶ್ ಜಾರಕಿಹೊಳಿ ಮತ್ತು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಇಂದು(ಮಾ.5) ಅದ್ದೂರಿಯಾಗಿ ಮತ್ತೊಮ್ಮೆ ಶಿವಾಜಿ ಮೂರ್ತಿ ಲೋಕಾರ್ಪಣೆ ಮೂಲಕ ಶಕ್ತಿಪ್ರದರ್ಶನಕ್ಕೆ ಹೆಬ್ಬಾಳ್ಕರ್ ಮುಂದಾಗಿದ್ದಾರೆ. ಜೊತೆಗೆ ಇದಕ್ಕಾಗಿಯೇ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಿಂದ 25 ಸಾವಿರ ಜನರನ್ನ ಸೇರಿಸಲು ಪ್ಲಾನ್ ಮಾಡಿಕೊಂಡಿದ್ದಾರೆ.

ಕೇವಲ ಜನರನ್ನ ಮಾತ್ರ ಸೇರಿಸದೇ ಪಕ್ಷದ ವರಿಷ್ಠರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಖ್ಯಾತ ಹಿಂದಿ ಚಿತ್ರನಟ ರಿತೇಶ್ ದೇಶಮುಖ ಅವರಿಗೂ ಆಹ್ವಾನ ನೀಡಿದ್ದಾರೆ. ಇನ್ನೂ ವಿಶೇಷ ಆಹ್ವಾನಿತರಾಗಿ ಶಿವಾಜಿ ವಂಶಸ್ಥರು ಆಗಮಿಸಲಿದ್ದು, ಇವರೆಲ್ಲರ ಸಮ್ಮುಖದಲ್ಲಿ ಮತ್ತೊಮ್ಮೆ ಶಿವಾಜಿ ಮೂರ್ತಿ ಅದ್ದೂರಿಯಾಗಿ ಲೋಕಾರ್ಪಣೆಗೊಳಿಸುವ ಮೂಲಕ ರಮೇಶ ಜಾರಕಿಹೊಳಿಗೆ ಟಕ್ಕರ್ ನೀಡಲು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮುಂದಾಗಿದ್ದಾರೆ. ಈ ಮೂಲಕ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಮರಾಠ ವೋಟ್ ಬ್ಯಾಂಕ್ ಗಟ್ಟಿಗೊಳಿಸಿಕೊಳ್ಳುವ ತಂತ್ರ ಹೆಣೆದಿದ್ದಾರೆ. ಇಂದು ಬೆಳಗ್ಗೆ 9 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ಆರಂಭವಾಗಲಿವೆ. ಪಲ್ಲಕ್ಕಿ ಉತ್ಸವ, ಸಾಂಪ್ರದಾಯಿಕ ಧಾರ್ಮಿಕ ಪೂಜೆಗಳು 10 ಗಂಟೆಗೆ ದೇವಸ್ಥಾನ ಪ್ರವೇಶವಾಗಲಿದೆ. 10.30ರಿಂದ ಧ್ವಜಾರೋಹಣ, ಉತ್ಸವ ಮೂರ್ತಿ ಪೂಜಾ, ಡೋಲ್ ತಾಶಾದೊಂದಿಗೆ ಮೂರ್ತಿ ಉದ್ಘಾಟನೆಯಾಗಲಿದೆ. ಸಂಜೆವರೆಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ.

ಇದನ್ನೂ ಓದಿ:Poster war: ಬೆಳಗಾವಿಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ; ಕ್ರೆಡಿಟ್ ತೆಗೆದುಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬ್ಯಾನರ್ ಪೈಪೋಟಿ!

ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ, ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಕಿತ್ತಾಟ ಶುರುವಾಗಿದ್ದು, ಸರ್ಕಾರದ ಕಾರ್ಯಕ್ರಮದ ದಿನವೇ ಹೆಬ್ಬಾಳ್ಕರ್ ಬ್ಯಾನರ್​ಗೆ ಕೀಡಿಗೇಡಿಗಳು ಬ್ಲೇಡ್ ಹಾಕಿದ್ರು. ಈಗ ಸಂಜಯ್ ಪಾಟೀಲ್, ನಾಗೇಶ್ ಮನ್ನೋಳ್ಕರ್ ಬ್ಯಾನರ್​ಗಳಿಗೆ ಕೀಡಿಗೇಡಿಗಳು ಬ್ಲೇಡ್ ಹಾಕಿದ್ದಾರೆ. ಇದೆಲ್ಲದರ ನಡುವೆ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಕಿತ್ತಾಟ ಮುಂದೆ ಎಲ್ಲಿಗೆ ಹೋಗಿ ನಿಲ್ಲುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:21 am, Sun, 5 March 23

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ