AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Security Breach: ಲೋಕಸಭಾ ಕಲಾಪದಲ್ಲಿ ಭದ್ರತಾ ಲೋಪ ಬೆನ್ನಲ್ಲೇ ಬೆಳೆಗಾವಿ ಸುವರ್ಣಸೌಧದಲ್ಲೂ ಹೈಅಲರ್ಟ್

Lok Sabha Security Breach: ಲೋಕಸಭಾ ಸದನದೊಳಗೆ ಇಬ್ಬರು ನುಗ್ಗಿ ಬಂದು ಕೆಲ ಕಾಲ ಆತಂಕ ಮೂಡಿಸಿದ್ದಾರೆ. ಇದರಿಂದ ಇತ್ತ ಬೆಳಗಾವಿಯಲ್ಲೂ ಸಹ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಖುದ್ದು ಸ್ಪೀಕರ್ ಪೊಲೀಸ್, ಡಿಸಿ ಹಾಗೂ ಮಾರ್ಷಲ್​ಗಳಿಂದ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಯಾವುದೇ ರೀತಿಯಾಗಿ ಭದ್ರತಾ ಲೋಪವಾಗದಂತೆ ನಿಗಾ ವಹಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ.

Lok Sabha Security Breach: ಲೋಕಸಭಾ ಕಲಾಪದಲ್ಲಿ ಭದ್ರತಾ ಲೋಪ ಬೆನ್ನಲ್ಲೇ ಬೆಳೆಗಾವಿ ಸುವರ್ಣಸೌಧದಲ್ಲೂ ಹೈಅಲರ್ಟ್
ಸುವರ್ಣ ಸೌಧ
TV9 Web
| Edited By: |

Updated on:Dec 13, 2023 | 3:06 PM

Share

ಬೆಳಗಾವಿ, (ಡಿಸೆಂಬರ್ 13): ಲೋಕಸಭಾ ಕಲಾಪದ ವೇಳೆ ಭಾರೀ ಭದ್ರತಾ (Lok Sabha Security Breach) ಲೋಪವಾಗಿದೆ. ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ಏಕಾಏಕಿ ಸದನದೊಳಗೆ ನುಗ್ಗಿ ಬಂದಿದ್ದಾರೆ. ಅಲ್ಲದೇ ಕಲರ್‌ ಸ್ಮೋಕ್ ಹರಡಿ ಆತಂಕ ಮೂಡಿಸಿದ್ದಾರೆ. ಇದರ ಬೆನ್ನಲ್ಲೇ ಇತ್ತ ಬೆಳಗಾವಿಯ ಸುವರ್ಣಸೌಧದಲ್ಲೂ(Belagavi Suvarna Soudha)  ಸಹ ಭದ್ರತಾ ಪರಿಶೀಲನೆ ನಡೆಸಲಾಗಿದೆ. ಖುದ್ದು ಸ್ಪೀಕರ್ ಯುಟಿ ಖಾದರ್ ಅವರು ಸುವರ್ಣಸೌಧದ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಬೆಳಗಾವಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸುವರ್ಣ ಸೌಧದ ಮಾರ್ಷಲ್​ಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಸಭಾಂಗಣದ ಸುತ್ತ ರೌಂಡ್ ಹಾಕಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದು, ಶಾಸಕರು, ಸಚಿವರ ಆಪ್ತ ಸಹಾಯಕರು(ಪಿಎ) ಎಂದು ಹೇಳಿಕೊಂಡು ಬರುವವರ ಬಗ್ಗೆ ನಿಗಾ ವಹಿಸುವಂತೆ ಭದ್ರತಾ ಸಿಬ್ಬಂದಿ, ಅಧಿಕಾರಿಗಳಿಗೆ ಸ್ಪೀಕರ್ ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಎರಡು ದಶಕದ ಹಿಂದೆ ಸಂಸತ್‌ ಮೇಲೆ ನಡೆದ ಭಯೋತ್ಪಾದನಾ ದಾಳಿ ದಿನವೇ ಮತ್ತೆ ಭದ್ರತಾ ಲೋಪ 

ಸ್ಪೀಕರ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಮಾರ್ಷಲ್​ಗಳು. ವಿಧಾನಸಭೆ ಸಭಾಂಗಣ ಪ್ರವೇಶಿಸುವ ಪತ್ರಕರ್ತರು, ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿ ಪಾಸ್ ಮಾದರಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ.

ಲೋಕಸಭೆಯ ಒಳಗೆ ನುಗ್ಗಿದ ಇಬ್ಬರ ಸದ್ಯಕ್ಕೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಸದನದೊಳಗೆ ನುಗ್ಗಿದವರನ್ನು ಸಾಗರ್ ಶರ್ಮಾ ಹಾಗೂ ಮೈಸೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಮನೋರಂಜನ್ ಎಂದು ಗುರುತಿಸಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಪಾಸ್ ಪಡೆದುಕೊಂಡು ಲೋಕಸಭೆ ಒಳಗೆ ಪ್ರವೇಶಿಸಿದ್ದರು ಎಂದು ತಿಳಿದುಬಂದಿದ್ದು, ಈ ಬಗ್ಗೆ ಸೂಕ್ತ ನಡೆಸುವಂತೆ ಲೋಕಸಭಾ ಸ್ಪೀಕರ್ ಒಂ ಬಿರ್ಲಾ ಸೂಚಿಸಿದ್ದಾರೆ.

Published On - 2:52 pm, Wed, 13 December 23

Follow Us
TV9 Web
TV9 Web

TV9 Kannada

Read More
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ