Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ನಿಷೇಧ ವಾಪಸ್; ಸಿಎಂ ಹೇಳಿಕೆಗೆ ಪೇಜಾವರ ಶ್ರೀಗಳು ಅಸಮಾಧಾನ

ಹಿಜಾಬ್ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ(Siddaramaiah)ನವರ ಹೇಳಿಕೆ ವಿಚಾರ ‘ಕರ್ನಾಟಕದ ಎಲ್ಲರ ಮುಖ್ಯಮಂತ್ರಿ ಅವರು ಆಗಿದ್ದಾರೆ ಹೊರತು ಯಾವುದೇ ಒಂದು ಪಂಗಡದ ಸಿಎಂ ಅಲ್ಲ. ಇಂತಹ ನಡುವಳಿಕೆ ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ ಎಂದು ವಿಶ್ವ ಪ್ರಸನ್ನ ತೀರ್ಥ ಪೇಜಾವರ ಶ್ರೀಗಳು ಸಿಎಂ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು

ಹಿಜಾಬ್ ನಿಷೇಧ ವಾಪಸ್; ಸಿಎಂ ಹೇಳಿಕೆಗೆ ಪೇಜಾವರ ಶ್ರೀಗಳು ಅಸಮಾಧಾನ
ವಿಶ್ವ ಪ್ರಸನ್ನ ತೀರ್ಥ ಪೇಜಾವರ ಶ್ರೀಗಳು
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 23, 2023 | 4:29 PM

ಬೆಳಗಾವಿ, ಡಿ.23: ಹಿಜಾಬ್ ವಾಪಾಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ(Siddaramaiah)ನವರ ಹೇಳಿಕೆ ವಿಚಾರ ‘ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವುದರಿಂದ ಸಮಾಜದಲ್ಲಿ ದೊಡ್ಡ ಕ್ಷೋಭೆ(ಅಲ್ಲೋಲ-ಕಲ್ಲೋಲ) ಉಂಟಾಗುತ್ತದೆ ಎಂದು ವಿಶ್ವ ಪ್ರಸನ್ನ ತೀರ್ಥ ಪೇಜಾವರ ಶ್ರೀಗಳು(Vishwa Prasanna Theertha Swamij) ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಕಾನೂನು ಮಾಡಲಿ ಅದು ಸಮಾಜದಲ್ಲಿ ಒಂದು ಪಂಗಡವನ್ನ ಗುರಿಯಾಗಿರಿಸಿಕೊಂಡು ಮಾಡುವುದು ಸರಿಯಲ್ಲ ಎಂದು  ಹೇಳಿದರು.

ಯಾವುದೇ ಒಂದು ಪಂಗಡದ ಸಿಎಂ ಅವರಲ್ಲ

ಕರ್ನಾಟಕದ ಎಲ್ಲರ ಮುಖ್ಯಮಂತ್ರಿ ಅವರು ಆಗಿದ್ದಾರೆ ಹೊರತು ಯಾವುದೇ ಒಂದು ಪಂಗಡದ ಸಿಎಂ ಅಲ್ಲ. ಇಂತಹ ನಡುವಳಿಕೆ ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ. ಮೊನ್ನೆ ಪರೀಕ್ಷೆ ಬರೆಯುವಾಗ ಹಿಂದೂಗಳಾದವರು ಕಾಲುಂಗರ, ತಾಳಿ ತಗೆಯಬೇಕು ಒಂದು ಕಡೆ ಹೀಗೆ, ಮತ್ತೊಂದು ಪಂಗಡದವರಿಗೆ ಮುಸುಕು ದಾರಿಗಳು ಆಗಿ ಹೋಗಬಹುದು ಎನ್ನುತ್ತಾರೆ. ಇದನ್ನ ಯಾರು ಮಾಡಬಾರದು, ಇವರಂತೂ ಖಂಡಿತವಾಗಿ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:Hijab Row: ಕರ್ನಾಟಕದಲ್ಲಿ ಹಿಜಾಬ್ ನಿಷೇಧ ವಾಪಸ್, ಸಿದ್ದರಾಮಯ್ಯ ಸ್ಪಷ್ಟನೆ

ಕೊಟ್ಟ ಮಾತಿನಂತೆ ಹಿಜಾಬ್​ ನಿಷೇಧ ಆದೇಶ ವಾಪಸ್ ಪಡೆದಿದ್ದೇವೆ- ಕಾಂಗ್ರೆಸ್ ಶಾಸಕಿ ಖನೀಜ್ ಫಾತಿಮಾ

ಕಲಬುರಗಿ: ಹಿಜಾಬ್​ ನಿಷೇಧ ಆದೇಶ ವಾಪಸ್​​ ಬಗ್ಗೆ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್​ ಶಾಸಕಿ ಖನೀಜ್​ ಫಾತಿಮಾ ‘ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್​ಗೆ ನಿರ್ಬಂಧ ಹೇರಲಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂಪಡೆಯುವುದಾಗಿ ಹೇಳಿದ್ದೆವು. ಕೊಟ್ಟ ಮಾತಿನಂತೆ ಹಿಜಾಬ್​ ನಿಷೇಧ ಆದೇಶ ವಾಪಸ್ ಪಡೆದಿದ್ದೇವೆ ಎಂದು ಹೇಳಿದರು. ಇನ್ಮುಂದೆ ಎಲ್ಲಿ ಬೇಕಾದರೂ ಹಿಜಾಬ್ ಹಾಕೊಂಡು ಹೋಗಬಹುದು, ಸಿದ್ದರಾಮಯ್ಯ, ಖರ್ಗೆ, ಸೋನಿಯಾ, ರಾಹುಲ್​ಗೆ ಧನ್ಯವಾದ ತಿಳಿಸುವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Sat, 23 December 23

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್