Hindalga Central Jail: ಬ್ರಿಟಿಷರು ನಿರ್ಮಿಸಿದ ಬೆಳಗಾವಿ ಹಿಂಡಲಗಾ ಜೈಲಿಗೆ 100 ವರ್ಷ !!

ಸ್ವಾತಂತ್ರ್ಯ ಹೋರಾಟಗಾರರನ್ನು ಇರಿಸಲು 1923 ರಲ್ಲಿ ಬ್ರಿಟಿಷರು ನಿರ್ಮಿಸಿದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹವು ದೇಶದ ಅತಿದೊಡ್ಡ ಜೈಲುಗಳಲ್ಲಿ ಒಂದಾಗಿದೆ. 100 ವರ್ಷಗಳ ಹಳೆಯದಾದ ಈ ಜೈಲು ನಮ್ಮ ರಾಷ್ಟ್ರದ ಇತಿಹಾಸದ ಭಾಗವಾಗಿದೆ.

Hindalga Central Jail: ಬ್ರಿಟಿಷರು ನಿರ್ಮಿಸಿದ ಬೆಳಗಾವಿ ಹಿಂಡಲಗಾ ಜೈಲಿಗೆ 100 ವರ್ಷ !!
ಬೆಳಗಾವಿ ಹಿಂಡಲಗಾ ಜೈಲು
Follow us
ವಿವೇಕ ಬಿರಾದಾರ
|

Updated on:Jul 25, 2023 | 8:26 AM

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರರನ್ನು ಇರಿಸಲು 1923 ರಲ್ಲಿ ಬ್ರಿಟಿಷರು ನಿರ್ಮಿಸಿದ ಬೆಳಗಾವಿಯ (Belagavi) ಹಿಂಡಲಗಾ ಕೇಂದ್ರ ಕಾರಾಗೃಹವು (Hindalaga Central Jail) ದೇಶದ ಅತಿದೊಡ್ಡ ಜೈಲುಗಳಲ್ಲಿ ಒಂದಾಗಿದೆ. 100 ವರ್ಷಗಳ ಹಳೆಯದಾದ ಈ ಜೈಲು ನಮ್ಮ ರಾಷ್ಟ್ರದ ಇತಿಹಾಸದ ಭಾಗವಾಗಿದೆ. ಬೆಳಗಾವಿಯಿಂದ 6 ಕಿಮೀ ದೂರದಲ್ಲಿ. ಹಿಂಡಲಗಾ ಜೈಲನ್ನು ಸುಮಾರು 99 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದೆ. 99 ಎಕರೆಯಲ್ಲಿ 30 ಎಕರೆಯಷ್ಟು ಭೂಮಿಯನ್ನು ಕೃಷಿ ಮತ್ತು ಜಾನುವಾರುಗಳಿಗೆ ಮೇಯಿಸಲು ಮೀಸಲಿಡಲಾಗಿದೆ. ಇದು ಹಸಿರು ಸೆರೆಮನೆಯಾಗಿದ್ದು, ವಿಭಾಗಗಳ ನಡುವಿನ ತೆರೆದ ಸ್ಥಳಗಳಲ್ಲಿ ಹೇರಳವಾದ ಮರಗಳು ಮತ್ತು ಸಸ್ಯವರ್ಗವನ್ನು ಹೊಂದಿದೆ. ಈ ಪರಿಸರವನ್ನು ಕಾಪಾಡಿಕೊಳ್ಳಲು ಸಿಬ್ಬಂದಿ ಮತ್ತು ಕೈದಿಗಳ ಪ್ರರಿಶ್ರಮವಿದೆ.

ಜೈಲು ಎರಡು ದೊಡ್ಡ ಸಂಕೀರ್ಣಗಳನ್ನು ಒಳಗೊಂಡಿದೆ. ಒಂದು ಸಂಕೀರ್ಣವು ಪುರುಷ ಅಪರಾಧಿಗಳಿಗೆ ಬ್ಯಾರಕ್‌ಗಳನ್ನು ಹೊಂದಿದೆ. ಇನ್ನೊಂದು ವಿಚಾರಣಾಧೀನ ಕೈದಿಗಳಿಗೆ. ಅಪರಾಧಿಗಳ ಕೆಲಸಕ್ಕೆ  ನೇಕಾರಿಕೆ, ಮತ್ತು ಟೈಲರಿಂಗ್ ಸೌಲಭ್ಯವಿದೆ. ಅಂಡರ್ ಟ್ರಯಲ್ ವಿಭಾಗದಲ್ಲಿ ಸೆಲ್‌ಗಳು ಮತ್ತು ಬ್ಯಾರಕ್‌ಗಳಿವೆ. ಇಲ್ಲಿ ಗ್ರಂಥಾಲಯ, ಮರಗೆಲಸ ವಿಭಾಗ, ಟೈಲರಿಂಗ್ ಇದೆ.  ಹೆಚ್ಚಿನ ಭದ್ರತೆಯ ಕೈದಿಗಳಿಗಾಗಿ ಕೆಲವು ವಿಶೇಷ ಕೋಣೆಗಳು ಸಹ ಇವೆ.

ಈ ಜೈಲಿನಲ್ಲಿ ಸುಮಾರು 1,200 ಕೈದಿಗಳನ್ನು ಇರಿಸಬಹುದಾಗಿದೆ. ಇದಲ್ಲದೆ, ಮರಣದಂಡನೆ (Death Sentence) ಶಿಕ್ಷೆಗೊಳಗಾದ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಕರ್ನಾಟಕದ ಏಕೈಕ ಜೈಲು ಇದಾಗಿದೆ. ಆದರೆ, ಕಳೆದ ನಾಲ್ಕು ದಶಕಗಳಲ್ಲಿ ಈ ಜೈಲಿನಲ್ಲಿ ಯಾರಿಹೂ ಮರಣದಂಡನೆ ವಿಧಿಸಿಲ್ಲ.

ಇದನ್ನೂ ಓದಿ: Threat to Nitin Gadkari: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದು ಬೆಳಗಾವಿ ಹಿಂಡಲಗಾ ಜೈಲಿನ ಕೈದಿ

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ಬ್ರಿಟಿಷರು ಸ್ವಾತಂತ್ರ್ಯ ಹೋರಾಟಗಾರರು ಮತ್ತು ಇತರ ಅಪರಾಧಿಗಳಿಗೆ ಸುರಕ್ಷಿತ ಜೈಲು ನಿರ್ಮಿಸಬೇಕಾಯಿತು. ಮಹಾತ್ಮಾ ಗಾಂಧೀಜಿಯವರ ಅಸಹಕಾರ ಚಳುವಳಿ ಮತ್ತು ದಂಡಿ ಮಾರ್ಚ್ ಚಳುವಳಿಯ ಸಂದರ್ಭದಲ್ಲಿ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷ್ ಸರ್ಕಾರಿ ಕಚೇರಿಗಳ ಮೇಲೆ ದಾಳಿ ಮಾಡಿದರು.

ಪಿಕೆಟಿಂಗ್ ಮತ್ತು ರೈಲ್ವೆ ಹಳಿಗಳನ್ನು ಕಿತ್ತು ಪ್ರತಿಭಟಿಸಿದರು. ಆ ಅವಧಿಯಲ್ಲಿ ಮೈಲಾರ ಮಹಾದೇವಪ್ಪ, ಅಂದಾನಪ್ಪ ದೊಡ್ಡಮೇಟಿ, ಮಹಾದೇವ ದೇಸಾಯಿ, ಅಡವಿ ಬಸಪ್ಪ, ಅಣ್ಣು ಗುರೂಜಿ, ವೆಂಕೋಸ ಭಾಂಡಗೆ, ಹಳದಾಳ್ ಕೊಟ್ರಪ್ಪ, ತಮ್ಮಾಜಿ ಮಿರಜಕರ, ವಾಲಿ ಚನ್ನಬಸಪ್ಪ ಸೇರಿದಂತೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರನ್ನು ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿತ್ತು.

ಇನ್ನು ಈ ಜೈಲಿನಲ್ಲಿ ಸ್ವಾತಂತ್ರ್ಯ ವೀರ್​ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ಕೂಡ 100 ದಿನಗಳ ಕಾಲ ಇರಿಸಲಾಗಿತ್ತು. ಏಪ್ರಿಲ್ 4, 1950 ರಿಂದ ಜುಲೈ 13, 1950 ರವರೆಗೆ. ಅನೇಕ ಸ್ಥಳೀಯರು ಜೈಲಿನ ಮುಂದೆ ಸಾವರ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಲು ಒತ್ತಾಯಿಸುತ್ತಿದ್ದಾರೆ.

ಜೈಲಿನ ಮೂರು ಸ್ಥಳಗಳಲ್ಲಿ ಗಲ್ಲುಶಿಕ್ಷೆ ವಿಧಿಸಬಹುದಾಗಿದೆ. ಜೈಲಿನಲ್ಲಿ ಗಲ್ಲಿಗೇರಿದ ಕೊನೆಯ ವ್ಯಕ್ತಿ ಗೋಕಾಕ್‌ನ ಹನುಮಪ್ಪ ಮರಿಯಾಲ್ – ನವೆಂಬರ್ 9, 1983. ಅದಕ್ಕೂ ಮೊದಲು, ಆರು ಜನರನ್ನು 1976 ರಲ್ಲಿ ಮತ್ತು ಐವರನ್ನು 1978 ರಲ್ಲಿ ಗಲ್ಲಿಗೇರಿಸಲಾಯಿತು. ಹಿಂಡಲಗಾ ಜೈಲಿನಲ್ಲಿ ನಾಲ್ವರು ವೀರಪ್ಪನ್ ಗ್ಯಾಂಗ್ ಸದಸ್ಯರು ಸೇರಿದಂತೆ ಮರಣದಂಡನೆ ಶಿಕ್ಷೆಗೆ ಒಳಗಾದ ಹಲವಾರು ಅಪರಾಧಿಗಳು ಇದ್ದಾರೆ. ಸರಣಿ ಅತ್ಯಾಚಾರಿ ಮತ್ತು ಹಂತಕ ಉಮೇಶ್ ರೆಡ್ಡಿ ಸೇರಿದಂತೆ ಕುಖ್ಯಾತ ರೌಡಿಗಳು ಮತ್ತು ಶಂಕಿತ ಸಿಮಿ ಕಾರ್ಯಕರ್ತರು ಸಹ ಇದೇ ಜೈಲಿನಲ್ಲಿದ್ದಾರೆ.

ಜೈಲಿನಲ್ಲಿರುವ 27 ಕೈದಿಗಳು ಮರಣದಂಡನೆಗೆ ಗುರಿಯಾಗಿದ್ದಾರೆ ಎಂದು ಜೈಲು ಮೂಲಗಳು ತಿಳಿಸಿವೆ. ಇವರ ಕ್ಷಮಾಪಣಾ ಅರ್ಜಿಗಳು ಇನ್ನೂ ನ್ಯಾಯಾಲಯದ ಮುಂದೆ ಮತ್ತು ಕೆಲವು ರಾಷ್ಟ್ರಪತಿಗಳ ಮುಂದೆ ಇವೆ. ಕನ್ನಡ ಚಲನಚಿತ್ರ ‘ಮಿಂಚಿನ ಓಟ’ ಮತ್ತು ಹಿಂದಿ ಚಲನಚಿತ್ರ ‘ಮೊಹ್ರಾ’ ಸೇರಿದಂತೆ ಹಲವಾರು ಚಲನಚಿತ್ರಗಳನ್ನು ಹಿಂಡಲಗಾ ಜೈಲಿನಲ್ಲಿ ಚಿತ್ರೀಕರಿಸಲಾಗಿದೆ.

ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಹಿಂಡಲಗಾ ಜೈಲಿನಲ್ಲಿದ್ದ. ಆತ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದನು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:25 am, Tue, 25 July 23

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ