ಮೃಣಾಲ್ ಹೆಬ್ಬಾಳ್ಕರ್​ ಪರ ನಿರಂಜನ ಹಿರೇಮಠ ಪ್ರಚಾರ: ನೇಹಾ ಪೋಷಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

Neha Hiremath Murder Case: ಕಳೆದ ತಿಂಗಳು ಗುರುವಾರ (ಏ.18) ರಂದು ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿತ್ತು. ಇದೀಗ ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಮೃಣಾಳ ಹೆಬ್ಬಾಳ್ಕರ್​ ಪ್ರಚಾರ ಮಾಡಿದ್ದಾರೆ.

ಮೃಣಾಲ್ ಹೆಬ್ಬಾಳ್ಕರ್​ ಪರ ನಿರಂಜನ ಹಿರೇಮಠ ಪ್ರಚಾರ: ನೇಹಾ ಪೋಷಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಭೇಟಿಯಾದ ನೇಹಾ ಪೋಷಕರು​
Follow us
Sahadev Mane
| Updated By: ವಿವೇಕ ಬಿರಾದಾರ

Updated on:May 03, 2024 | 3:56 PM

ಬೆಳಗಾವಿ, ಮೇ 03: ಹುಬ್ಬಳ್ಳಿಯ ನೇಹಾ ಹಿರೇಮಠ (Neha Hiremath) ಕೊಲೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇದೀಗ ನೇಹಾ ಹಿರಮೇಠ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ (Niranjan Hiremath) ಅವರು ಗುರುವಾರ (ಮೇ.02) ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಅವರನ್ನು ಬೆಳಗಾವಿಯಲ್ಲಿ ಭೇಟಿಯಾದರು. ಬಳಿಕ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಮೃಣಾಲ್​ ಹೆಬ್ಬಾಳ್ಕರ್​ ಪರ ಪ್ರಚಾರ ಮಾಡಿದರು. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ನೇಹಾ ತಂದೆ ನಿರಂಜನ ಹಿರೇಮಠ ತಮ್ಮ ಮನೆಗೆ ಭೇಟಿ ನೀಡಿದ್ದ ಫೋಟೋಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಕೆಲವರು ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಾವು ಸಂಭವಿಸಿದ ಮನೆಯವರನ್ನು ತಮ್ಮ ಮನೆಗೆ ಕರೆಸಿಕೊಂಡು ಚುನಾವಣಾ ಪ್ರಚಾರ ಮಾಡುವುದಾ? ಯಾಕೆ ಮೇಡಂ ಕಮೆಂಟ್ ಬಾಕ್ಸ್ ಆಫ್ ಮಾಡಿದ್ದೀರಿ ಅಂತ” ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ಟ್ಯಾಗ್​ ಮಾಡಿ ಪ್ರಶ್ನಿಸಿದ್ದಾರೆ.

ಮೃಣಾಳ ಪರ ನಿರಂಜನ ಪ್ರಚಾರ

ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ ಗುರುವಾರ ಲಕ್ಷ್ಮೀ ಹೆಬ್ಬಾಳ್ಕರ್​ ಮನೆಗೆ ಭೇಟಿ ನೀಡಿ, ಕೆಲವೊತ್ತು ಮಾತುಕತೆ ನಡೆಸಿದರು. ಬಳಿಕ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಮೃಣಾಲ್​ ಹೆಬ್ಬಾಳ್ಕರ್​ ಪರ ಪ್ರಚಾರ ಮಾಡಿದರು. ಪ್ರಚಾರ ಭಾಷಣದಲ್ಲಿ ನಿರಂಜನ ಹಿರೇಮಠ “ಮೃಣಾಲ್ ಹೆಬ್ಬಾಳ್ಕರ್​ ಅವರಿಗೆ ಮತ ಹಾಕಿ” ಎಂದು ಮತಯಾಚಿಸಿದರು.

ಇದನ್ನೂ ಓದಿ: ಫಯಾಜ್​ಗೆ ಗಲ್ಲು ಶಿಕ್ಷೆಯಾಗಬೇಕೆಂದು ಅಮಿತ್​ ಶಾಗೆ ಮನವಿ ಸಲ್ಲಿಸಿದ ನೇಹಾ ಪೋಷಕರು

ನೇಹಾ ಹಿರೇಮಠ ಕೊಲೆ

ನೇಹಾ ಹಿರೇಮಠ ಎಂಬ ಎಂಸಿಎ ವಿದ್ಯಾರ್ಥಿನಿ ಕಳೆದ ತಿಂಗಳು ಗುರುವಾರ (ಏ.18) ರಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜಿಗೆ ಪರೀಕ್ಷೆ ಬರೆಯಲು ಬಂದಿದ್ದರು. ಪರೀಕ್ಷೆ ಬರೆದು ಮನೆಗೆ ಹೋಗುವಾಗ ಫಯಾಜ್​ ಎಂಬುವನು ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಅವರನ್ನು 14 ಬಾರಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದನು. ಆರೋಪಿ ಫಯಾಜ್​ ನೇಹಾ ಹಿರೇಮಠರನ್ನು ಕೊಲೆ ಮಾಡಿ ಪರಾರಿಯಾಗಿದ್ದನು. ಕೂಡಲೆ ಕಾಲೇಜು ಆವರಣದಲ್ಲಿದ್ದ ವಿದ್ಯಾರ್ಥಿಗಳು ನೇಹಾರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಿದರು. ಅಷ್ಟೊತ್ತಿಗಾಗಲೆ ನೇಹಾ ಹಿರೇಮಠ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಲವ್​ ಜಿಹಾದ್​ ಎಂದ ಬಿಜೆಪಿ, ಹಿಂದೂ ಪರ ಸಂಘಟನೆಗಳು

ವಿಚಾರ ತಿಳಿದು ಕಾರ್ಯಪ್ರವೃತ್ತರಾದ ವಿದ್ಯಾನಗರ ಪೊಲೀಸರು, ಆರೋಪಿ ಫಯಾಜ್​ನನ್ನು ಕೆಲವೆ ಗಂಟೆಗಳಲ್ಲಿ ಬಂಧಿಸಿದರು. ಇನ್ನು ನೇಹಾ ಹಿರೇಮಠ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಫಯಾಜ್​ ನೇಹಾ ಹಿರೇಮಠರನ್ನು ಕೊಲೆ ಮಾಡಿದ್ದಾನೆ. ಇದು ಲವ್​ ಜಿಹಾದ್​ ಅಂತ ಹಿಂದೂ ಸಂಘಟನೆಗಳು, ಬಿಜೆಪಿ ಮತ್ತು ಎಬಿವಿಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಿದ್ದವು.

ಕೆರಳಿಸಿದ ಸಿಎಂ, ಡಿಸಿಎಂ ಹೇಳಿಕೆ

ಈ ಮಧ್ಯೆ ನೇಹಾ ಹಿರೇಮಠ ಮತ್ತು ಫಯಾಜ್​ ಒಟ್ಟಿಗೆ ಇರುವ ಭಾವಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ ಇದು ವೈಯಕ್ತಿಕ ಕಾರಣಕ್ಕೆ ಆದ ಕೊಲೆ ಎಂದು ಹೇಳಿಕೆ ನೀಡಿದ್ದರು. ಈ ವಿಚಾರ ಇನ್ನಷ್ಟು ಕೆರಳುವಂತೆ ಮಾಡಿತು. ಪ್ರಕರಣ ತನಿಖೆಯಲ್ಲಿರುವಾಗಲೇ ಸಿಎಂ, ಡಿಸಿಎಂ ಮತ್ತು ಗೃಹ ಸಚಿವರ ಹೇಳಿಕೆ ಖಂಡನೀಯ ಅಂತ ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ, ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಹರಿಹಾಯ್ದವು. ಇದರಿಂದ ಪ್ರಕರಣ ನಿಧಾನವಾಗಿ ರಾಜಕೀಯದತ್ತ ವಾಲಲು ಶುರುವಾಯಿತು.

ನೇಹಾ ಹತ್ಯೆಯಲ್ಲಿ ರಾಜಕೀಯ

ನೇಹಾ ಹಿರೇಮಠ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದು ಒಂದಡೆಯಾದರೆ, ಮತ್ತೊಂದೆಡೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಜನರ ಜೀವಕ್ಕೆ ಗ್ಯಾರಂಟಿ ಇಲ್ಲದಂತಾಗಿತ್ತು. ಸರಣಿ ಹತ್ಯೆಗಳು ಮತ್ತು ದೇಶದ್ರೋಹದ ಘೋಷಣೆಗಳು ಮೊಳಗುತ್ತಿವೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಇದಕ್ಕೆ ಕಾಂಗ್ರೆಸ್​ ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿದೆ ಅಂತ ವಾಗ್ದಾಳಿ ಮಾಡಿತ್ತು.

ನೇಹಾ ಮನೆಗೆ ನಾಯಕರ, ಸ್ವಾಮೀಜಿಗಳ ದೌಡು

ನೇಹಾ ಹಿರೇಮಠ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ಅಮಿತ್​ ಶಾ, ಶಾಸಕ ಬಸನಗೌಡ ಪಾಟೀಲ ಯತ್ನಾಳ್​, ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪ ಪ್ರಮೋದ ಮುತಾಲಿಕ್​ ಭೇಟಿ ನೀಡಿದ್ದರು. ಈ ವೇಳೆ ನೇಹಾ ತಂದೆ ನಿರಂಜನ ಹಿರೇಮಠ ಅವರಿಗೆ ಸಾಂತ್ವನ ಹೇಳಿದರು. ಹಾಗೇ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ, ಹುಬ್ಬಳ್ಳಿಯ ಮೂರುಸಾವಿರ ಮಠ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡಿದ್ದರು. ನೇಹಾ ಕುಟಂಬಕ್ಕೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದರು.

ನ್ಯಾಯಕ್ಕಾಗಿ ಚಲನಚಿತ್ರ ಮಂದಿಯ ಕೂಗು

ನೇಹಾ ಹಿರೇಮಠ ಅವರ ಕೊಲೆಯನ್ನು ಕನ್ನಡ ಚಲನಚಿತ್ರ ನಟರು ಕೂಡ ಖಂಡಿಸಿದ್ದಾರೆ. ನೇಹಾ ಹಿರೇಮಠ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಈ ಪ್ರಕರಣ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕೆಂದು ಹಲವು ನಟರು ಟ್ವೀಟ್​ ಮಾಡಿದ್ದರು. ನಟ ದರ್ಶನ, ದೃವ ಸರ್ಜಾ, ಶಿವರಾಜಕುಮಾರ್ ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದರು. ಇನ್ನು ಒಳ್ಳೆ ಹುಡುಗ ಪ್ರಥಮ ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:15 pm, Fri, 3 May 24

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್