ಚಿಕ್ಕೋಡಿ: ದುರ್ಗಾದೇವಿ ಮೂರ್ತಿ ವಿಸರ್ಜನೆ ಬಳಿಕ ಎರಡು ಕೋಮಿನ ನಡುವೆ ಗಲಾಟೆ, ಲಾಠಿ ಚಾರ್ಜ್​​

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ದಸರಾ ಹಬ್ಬದ ನಿಮಿತ್ತ ದುರ್ಗಾದೇವಿ ಮೂರ್ತಿಯನ್ನು ಕೂಡಿಸಿದ್ದರು. ಕಳೆದ ರಾತ್ರಿ ಮೂರ್ತಿಯನ್ನು ವಿಸರ್ಜನೆ ಮಾಡಿದ್ದಾರೆ. ವಿಸರ್ಜನೆ ಬಳಿಕ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದೆ. ಮುಂದೇನಾಯ್ತು ಈ ಸ್ಟೋರಿ ಓದಿ.

ಚಿಕ್ಕೋಡಿ: ದುರ್ಗಾದೇವಿ ಮೂರ್ತಿ ವಿಸರ್ಜನೆ ಬಳಿಕ ಎರಡು ಕೋಮಿನ ನಡುವೆ ಗಲಾಟೆ, ಲಾಠಿ ಚಾರ್ಜ್​​
ಎರಡು ಕೋಮಿನ ನಡುವೆ ಗಲಾಟೆ
Follow us
Sahadev Mane
| Updated By: ವಿವೇಕ ಬಿರಾದಾರ

Updated on: Oct 14, 2024 | 10:19 AM

ಚಿಕ್ಕೋಡಿ, ಅಕ್ಟೋಬರ್​ 14: ಕಳೆದ ರಾತ್ರಿ ದುರ್ಗಾದೇವಿ (Durgadevi) ಮೂರ್ತಿ ವಿಸರ್ಜನೆ ಬಳಿಕ ಎರಡು ಕೋಮಿನ ನಡುವೆ ಗಲಾಟೆ ನಡೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಗಲಾಟೆ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಲಘು ಲಾಠಿ ಚಾರ್ಜ್​ ಮಾಡಿ ಜನರನ್ನು ಚದುರಿಸಿದರು. ಗಲಾಟೆಯಲ್ಲಿ ಮೂವರಿಗೆ ಗಾಯವಾಗಿದ್ದು, ಎರಡು ಬೈಕ್ ಹಾಗೂ ಕಾರು ಜಖಂಗೊಂಡಿದೆ.

ದುರ್ಗಾದೇವಿ ಮೂರ್ತಿ ವಿಸರ್ಜನೆ ಮುಗಿಸಿಕೊಂಡು ಬರುವಾಗ ಅಮಿತ ನಾಯಿಕ ಹಾಗೂ ಪೈರೋಜ್ ಎಂಬುವವರ ಮಧ್ಯೆ ಗಲಾಟೆ ಶುರುವಾಗಿದೆ. ಈ ವೇಳೆ ಅಲ್ಲಿಯೇ ಇದ್ದ ಮಸೀದಿಯ ಮೈಕ್​ನಲ್ಲಿ ಅನ್ಯಕೋಮಿನ ಯುವಕರಿಂದ ನಮ್ಮವರ ಮೇಲೆ ಹಲ್ಲೆಯಾಗಿದೆ ಎಲ್ಲರೂ ಬನ್ನಿ ಎಂದು ಅನೌನ್ಸ್​ ಮಾಡಲಾಗಿದೆ.

ಇದನ್ನೂ ಓದಿ: ನಾನು ಸಿಎಂ ಆದ್ರೆ ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಗುಂಡು ಹಾಕ್ತೀನಿ: ಯತ್ನಾಳ್​

ಅನೌನ್ಸ್​ನಿಂದ ಪ್ರಚೋದನೆಗೊಂಡ ಹಿಂದೂ ಮತ್ತು ಮುಸ್ಲಿಂ ಜನರು ಕೂಡಲೆ ಮಸೀದಿ ಬಳಿ ಸೇರಿದ್ದಾರೆ. ಎರಡು ಗುಂಪಿನ ಜನ ಸೇರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ, ಜನರನ್ನು ಚದುರಿಸಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ಎರಡು ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್