ದಲಿತ ಮುಖ್ಯಮಂತ್ರಿ ಬಗ್ಗೆ ನಿರ್ಧರಿಸುವುದು ನಾನಲ್ಲ, ಹೈಕಮಾಂಡ್: ಸಿಎಂ ಬಿ.ಎಸ್.ಯಡಿಯೂರಪ್ಪ

ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಜಿಲ್ಲೆಗೆ ಆಗಮಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಡಿಸಿಎಂ ಲಕ್ಷ್ಮಣ ಸವದಿ, ಕಂದಾಯ ಸಚಿವರಾದ ಆರ್.ಅಶೋಕ್ ಮತ್ತು ಇನ್ನಿತರ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ದಲಿತ ಮುಖ್ಯಮಂತ್ರಿ ಬಗ್ಗೆ ನಿರ್ಧರಿಸುವುದು ನಾನಲ್ಲ, ಹೈಕಮಾಂಡ್: ಸಿಎಂ ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: sandhya thejappa

Updated on:Jul 25, 2021 | 4:41 PM

ಬೆಳಗಾವಿ: ಹೈಕಮಾಂಡ್‌ನಿಂದ ಸಂಜೆ ವೇಳೆಗೆ ಸಂದೇಶ ಬರುತ್ತದೆ. ಹೈಕಮಾಂಡ್‌ನಿಂದ ಸಂದೇಶ ಬಂದರೆ ನಿಮಗೂ ಗೊತ್ತಾಗುತ್ತದೆ. ದಲಿತ ಮುಖ್ಯಮಂತ್ರಿ ಬಗ್ಗೆ ನಿರ್ಧರಿಸುವುದು ನಾನಲ್ಲ, ಹೈಕಮಾಂಡ್. ಆ ಸಂದೇಶ ನೋಡಿಕೊಂಡು ಸೂಕ್ತ ತೀರ್ಮಾನ ಮಾಡುತ್ತೇನೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಮೇಲೆ ನನಗೆ ವಿಶ್ವಾಸವಿದೆ ಎಂದು ಸಿಎಂ ಬದಲಾವಣೆ ವಿಚಾರವಾಗಿ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yediyurappa) ಹೇಳಿಕೆ ನೀಡಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಜಿಲ್ಲೆಗೆ ಆಗಮಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಡಿಸಿಎಂ ಲಕ್ಷ್ಮಣ ಸವದಿ, ಕಂದಾಯ ಸಚಿವರಾದ ಆರ್.ಅಶೋಕ್ ಮತ್ತು ಇನ್ನಿತರ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಬಳಿಕ ಮಳೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬೆಳಗಾವಿಯ ಮಳೆ ಹಾನಿ ಪ್ರದೇಶವನ್ನು ಪರಿಶೀಲಿಸಿ, ನೆರೆ ಸಂತ್ರಸ್ತರನ್ನು ಇಂದು ಭೇಟಿಯಾಗುತ್ತೇನೆ. ದೇವರ ದಯೆಯಿಂದ ನಿನ್ನೆ, ಇಂದು ಮಳೆ ಕಡಿಮೆಯಾಗಿದೆ. ಇನ್ನೆರಡು ದಿನ ಮಳೆ ಇಲ್ಲದಿದ್ದರೆ ಎಲ್ಲ ಸರಿಯಾಗುತ್ತದೆ. ಮಹಾರಾಷ್ಟ್ರದಲ್ಲಿಯೂ ಮಳೆ ಕಡಿಮೆಯಾಗಿರುವುದು ಶುಭಸೂಚಕ ಎಂದು ತಿಳಿಸಿದ್ದಾರೆ.

ಸಂಕೇಶ್ವರದತ್ತ ತೆರಳಿದ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದು, ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ, ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರವಾಹ ಪ್ರದೇಶಗಳನ್ನು ಸದ್ಯ ಬಿಎಸ್​ವೈ ವಿಕ್ಷಿಸುತ್ತಿದ್ದು, ಡಿಸಿಎಂ ಲಕ್ಷ್ಮಣ ಸವದಿ, ಡಿಸಿಎಂ ಗೋವಿಂದ ಕಾರಜೋಳ, ಕಂದಾಯ ಸಚಿವರಾದ ಆರ್.ಅಶೋಕ್ ಸಾಥ್​ ನೀಡಿದ್ದಾರೆ.

ಸಂಕೇಶ್ವರ ಪಟ್ಟಣದ ಕಾಳಜಿ ಕೇಂದ್ರಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ಹಿರಣ್ಯಕೇಶಿ ನದಿ ಪ್ರವಾಹದಿಂದ ಊರು ಮುಳುಗಡೆಯಾಗಿ 204 ಜನರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿರುವ ಈ ಕಾಳಜಿ ಕೇಂದ್ರಕ್ಕೆ ಶಿಪ್ಟ್ ಆಗಿದ್ದಾರೆ.ಇಲ್ಲಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರೆ ಸಂತ್ರಸ್ತರ ಕಷ್ಟ ನಷ್ಟಗಳನ್ನು ವಿಚಾರಿಸಿದ್ದಾರೆ.

ಕಳೆದ ಮೂರ್ನಾಲ್ಕು ದಿನದಿಂದ ಧಾರಕಾರ ಮಳೆಯಾಗಿದೆ. ಅನೇಕ ಮನೆಗಳಿಗೆ ನೀರು ಬಂದು ಸಂಕಷ್ಟಕ್ಕೆ ಒಳಗಾಗಿದ್ದಾರೆ. ವಾಸಿಸಲು ಸಾಧ್ಯ ಇಲ್ಲ ಎನ್ನುವವರನ್ನು ಕಾಳಜಿ ಕೇಂದ್ರದಲ್ಲಿ ನೆಲೆಸಲು ವ್ಯವಸ್ಥೆ ಮಾಡಿದ್ದೇವೆ. ನೀರಿನಲ್ಲಿ ಮುಳುಗಡೆಯಾದವರಿಗೆ ಬೇರೆ ಕಡೆ ಮನೆ ಕಟ್ಟಿಕೊಡಲು ವ್ಯವಸ್ಥೆ ಮಾಡಿದ್ದೇವೆ. ನಿಮಗಾಗಿ ಐವತ್ತು ಎಕರೆ ಜಮೀನು ತೆಗೆದುಕೊಂಡಿದ್ದೇವೆ ನೀವು ಒಪ್ಪಿಗೆಕೊಟ್ಟರೆ ಮನೆ ಕಟ್ಟಿ ಕೊಡುತ್ತೇವೆ. ಮಳೆ ನಿಂತ ಮೇಲೆ ಅಧಿಕಾರಿಗಳು ಮನೆ ಮನೆಗೆ ಹೋಗಿ ಸರ್ವೆ ಮಾಡಿ ನಿಮಗೆ ಪರಿಹಾರ ಕೊಡುತ್ತಾರೆ. ಅಲ್ಲದೇ ಮಳೆಯಿಂದ ಉಂಟಾದ ನಷ್ಟಕ್ಕೆ ಸೂಕ್ತ ಪರಿಹಾರ ನೀಡುತ್ತೇವೆ ಎಂದು ನೆರೆ ಸಂತ್ರಸ್ತರಿಗೆ ಸಂಕೇಶ್ವರ ಪಟ್ಟಣದಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಮುಳುಗಡೆಯಾಗಿರುವ ರಾಷ್ಟ್ರೀಯ ಹೆದ್ದಾರಿ-4 ರ ವೀಕ್ಷಣೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಯಮಗರಣಿ ಗ್ರಾಮದ ಬಳಿ, ಕಳೆದ ಮೂರು ದಿನಗಳಿಂದ ಮಳೆ ಸುರಿದಿದ್ದು, ವೇದಗಂಗಾ ನದಿ ನೀರು ರಸ್ತೆ ಮೇಲೆ ಬಂದು ಮಹಾರಾಷ್ಟ್ರ ಕರ್ನಾಟಕ ನಡುವಿನ‌ ಸಂಪರ್ಕ ಕಟ್ ಆಗಿತ್ತು. ಇದರಿಂದಾಗಿ ಕಬ್ಬಿನ ಬೆಳೆ ಮುಳಗಡೆಯಾಗಿತ್ತು. ಹೀಗಾಗಿ ಮುಳುಗಿದ ಬೆಳೆ ಮತ್ತು ರಾಷ್ಟ್ರೀಯ ಹೆದ್ದಾರಿ-4ಅನ್ನು ಸಿಎಂ ಬಿಎಸ್​​ವೈ ವೀಕ್ಷಣೆ ಮಾಡಿದ್ದಾರೆ. ಅಲ್ಲದೆ ನೀರಾವರಿ, ಕೃಷಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದು, ಮುಳುಗಡೆಯಾದ ಪ್ರದೇಶದ ಮ್ಯಾಪ್ ವೀಕ್ಷಿಸಿದ್ದಾರೆ.

ಕೇವಲ ಒಂದಿಬ್ಬರು ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದ ಸಿಎಂ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರಣಿ ಗ್ರಾಮದ ಕೇಂದ್ರಕ್ಕೆ ಸಿಎಂ ಭೇಟಿ ನೀಡಿದ್ದು, ಕೇವಲ ಒಂದಿಬ್ಬರು ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದ್ದಾರೆ. ಉಳಿದವರು ಸಮಸ್ಯೆ ಹೇಳುತ್ತಿದ್ದಂತೆ. ಆಯಿತು ಬಗೆಹರಿಸೋಣ ಎಂದು ಸ್ಥಳದಿಂದ ಸಿಎಂ ಬಿಎಸ್‌ವೈ ತೆರಳಿದ್ದಾರೆ. ಈ ವೇಳೆ 2019ರ ನೆರೆ ಪರಿಹಾರವನ್ನು ಇನ್ನೂ ನೀಡಿಲ್ಲವೆಂದು ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಪ್ಪಾಣಿ ಗಂಜಿ ಕೇಂದ್ರದಲ್ಲಿ ಸಿಎಂ ವಾಹನಕ್ಕೆ ಅಡ್ಡ ಹಾಕಲು ಮುಂದಾದ ನಿರಾಶ್ರಿತರು ಕಾಳಜಿ ಕೇಂದ್ರದಲ್ಲಿ ಸೂಕ್ತ ವ್ಯವಸ್ಥೆ ಇಲ್ಲದ್ದಕ್ಕೆ, ನಿಪ್ಪಾಣಿ ಕಾಳಜಿ ಕೇಂದ್ರದ ಬಳಿ ಸಿಎಂ ವಾಹನ ತಡೆಗೆ ನಿರಾಶ್ರಿತರು ಯತ್ನಿಸಿದ್ದಾರೆ. ಕಾಳಜಿ ಕೇಂದ್ರದಲ್ಲಿ ಸೂಕ್ತವಾಗಿ ಊಟ ಸಿಗುತ್ತಿಲ್ಲ ಎಂದು ಆಕ್ರೋಶ. ಈ ಸಂದರ್ಭದಲ್ಲಿ ಸಿಎಂ ಕಾರಿಗೆ ಅಡ್ಡ ಬಂದವರನ್ನು ಪೊಲೀಸರು ಬದಿಗೆ ಸರಿಸಿದ್ದು, ಬಳಿಕ ಕಾಳಜಿ ಕೇಂದ್ರದಿಂದ ಸಿಎಂ ಯಡಿಯೂರಪ್ಪ ತೆರಳಿದ್ದಾರೆ.

ತರಾತುರಿಯಲ್ಲಿ ಬೆಳಗಾವಿ ಜಿಲ್ಲಾ ಪ್ರವಾಹ ಪರಿಸ್ಥಿತಿ ವೀಕ್ಷಣೆ ಜಿಲ್ಲೆಯ ಐದು ಕಡೆಗಳಲ್ಲಿ ತರಾತುರಿಯಲ್ಲೇ ಪ್ರವಾಹಪೀಡಿತ ಸ್ಥಳವನ್ನು ಸಿಎಂ ವೀಕ್ಷಣೆ ಮಾಡಿ ಮುಗಿಸಿದ್ದು, ಸಿಎಂ ಬಂದ್ರೂ ಹೋದ್ರೂ, ಯಾವುದೇ ಪ್ರಯೋಜನ ಆಗಲಿಲ್ಲ ಎಂದು ನೆರೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ಸಿಎಂ ಬಿ.ಎಸ್.ಯಡಿಯೂರಪ್ಪ, ನಿಪ್ಪಾಣಿ ಕಾಳಜಿ ಕೇಂದ್ರದಿಂದ ತೆರಳಿದ್ದು, ಬೆಳಗಾವಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಸಿಎಂ ಬಿಎಸ್‌ವೈ ಕ್ಷೇತ್ರಕ್ಕೆ ಬಂದಿದ್ದರೂ ಸ್ಥಳಕ್ಕಾಗಮಿಸಿದ ಶಾಸಕಿ ಶಶಿಕಲಾ ಜೊಲ್ಲೆ ನಿಪ್ಪಾಣಿ ಕ್ಷೇತ್ರದಲ್ಲಿ ಸಿಎಂ ಬಿಎಸ್‌ವೈ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.ಆದರೆ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಸ್ಥಳಕ್ಕೆ ಭೇಟಿ ನೀಡಿಲ್ಲ. ಅಲ್ಲದೇ 3 ದಿನದಿಂದ ಕ್ಷೇತ್ರದ ಜನರು ಸಂಕಷ್ಟಕ್ಕೆ ಸಿಲುಕಿದ್ದರೂ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:  BS Yediyurappa: ಬೆಳಗಾವಿ ಜಿಲ್ಲೆಯಲ್ಲಿಂದು ನೆರೆ ಹಾನಿ ವೀಕ್ಷಿಸಲಿರುವ ಸಿಎಂ, ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ಭಾರಿ ಮಳೆಗೆ ಬೆಳಗಾವಿ, ಉತ್ತರ ಕನ್ನಡ, ಮಲೆನಾಡಲ್ಲಿ ಹೆಚ್ಚು ಅನಾಹುತ; ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ

Published On - 10:41 am, Sun, 25 July 21