ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನಾನು ಈಗಾಗಲೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ನನಗೆ 80 ವಯಸ್ಸಾಗ್ತಿದೆ ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 31, 2023 | 9:27 AM

ಬೆಳಗಾವಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನಾನು ಈಗಾಗಲೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ನನಗೆ 80 ವಯಸ್ಸಾಗ್ತಿದೆ ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ( BS Yediyurappa) ಹೇಳಿದ್ದಾರೆ. ಪಕ್ಷ ಕಟ್ಟಲು ರಾಜ್ಯದ ಉದ್ದಗಲಕ್ಕೂ ನಾನು ಪ್ರವಾಸ ಮಾಡುತ್ತೇನೆ. ಪುತ್ರ ಬಿ.ವೈ.ರಾಘವೇಂದ್ರ (BY Raghavendra) ಶಿವಮೊಗ್ಗ (Shivamogga) ಸಂಸದ ಇದ್ದಾರೆ ಎಂದರು.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿ.ವೈ.ವಿಜಯೇಂದ್ರ ಕೂಡ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಪುತ್ರ ವಿಜಯೇಂದ್ರ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುತ್ತಾರೆ. ವಿಜಯೇಂದ್ರ ಜೊತೆ ನಾನು ಓಡಾಡುತ್ತಿದ್ದೇನೆ. ನಾನೇನು ರಾಜಕೀಯ ನಿವೃತ್ತಿ ಪಡೆದಿಲ್ಲ. ದೇವರು ಶಕ್ತಿ ನೀಡಿದರೇ ಮುಂದಿನ ಚುನಾವಣೆಯಲ್ಲೂ ಓಡಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕದ ಅಮ್ಮ ಭವಾನಿ ರೇವಣ್ಣ​​: ಸೋಶಿಯಲ್​ ಮೀಡಿಯಾದಲ್ಲಿ ಕಾರ್ಯಕರ್ತರ ಫೈಟ್​​

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನಿಸುವೆ. ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ. ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಪ್ರಧಾನಮಂತ್ರಿ ಆಗಿದ್ದಾಗ ನನ್ನನ್ನು ಕೇಂದ್ರಕ್ಕೆ ಆಹ್ವಾನಿಸಿದ್ದರು. ಪಕ್ಷ ರಾಜ್ಯದಲ್ಲಿ ನನಗೆ ಎಲ್ಲ ಸ್ಥಾನಮಾನ, ಅಧಿಕಾರ, ಗೌರವ ನೀಡಿದೆ. ಋಣ ತೀರಿಸುವ ಜವಾಬ್ದಾರಿ ನನ್ನದು, ರಾಜ್ಯಾದ್ಯಂತ ಸಂಚರಿಸುತ್ತೇನೆ ಎಂದು ತಿಳಿಸಿದರು.

ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿ ನಡೆದಿರುವ ವಿಚಾರವಾಗಿ ಮಾತನಾಡಿದ ಅವರು ಸರ್ಕಾರ ರಚಿಸುವ ಪಕ್ಷಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳವಾಗಿರುತ್ತೆ. ಗೆಲ್ಲುವ ಹಾಗೂ ಸರ್ಕಾರ ರಚಿಸುವ ಪಕ್ಷಕ್ಕೆ ಆಕಾಂಕ್ಷಿಗಳ ಸಂಖ್ಯೆ ಬಹಳಷ್ಟು ಇರುತ್ತದೆ. ನಾವೆಲ್ಲರೂ ಚರ್ಚಿಸಿ ಯೋಗ್ಯ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಒಂದಲ್ಲ, 2 ಸರ್ವೆ ಮಾಡಿಸಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತೇವೆ. ಟಿಕೆಟ್ ವಿಚಾರದಲ್ಲಿ ನಾವು ಯಾವುದೇ ಕಾಂಪ್ರಮೈಸ್ ಆಗಲ್ಲ. ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಫೆ.3 ರಿಂದ ಕಾಂಗ್ರೆಸ್​​ನಿಂದ ವಿಧಾನಸಭಾ ಕ್ಷೇತ್ರವಾರು ಪ್ರಜಾಧ್ವನಿ ಯಾತ್ರೆ

ಕೇಂದ್ರ ಸಚಿವ ಅಮಿತ್ ಶಾ ನಮಗೆ ಮಾರ್ಗದರ್ಶನ ಮಾಡಿದ್ದಾರೆ. ಬರುವ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು 140 ಸ್ಥಾನ ಗೆಲ್ಲುತ್ತೇವೆ. ಮುಂದಿನ ಸಿಎಂ ನಾನೇ ಆಗುತ್ತೇನೆ ಅಂತಾ ತಿರುಕನ ಕನಸು ಕಾಣ್ತಿದ್ದಾರೆ. ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ, ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದುಲು ಇಲ್ಲಿ ಕ್ಲಿಕ್ ಮಾಡಿ

Published On - 1:58 pm, Sun, 29 January 23

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​