ಮಹಾಂತೇಶ್ ಬೀಳಗಿ ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ತಂಗಿ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Edited By:

Updated on: Nov 26, 2025 | 12:17 PM

ಹಿರಿಯ ಐಎಎಸ್ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಅಕಾಲಿಕ ನಿಧನರಾಗಿದ್ದಾರೆ. ಕಲಬುರಗಿಯಿಂದ ರಾಮದುರ್ಗಕ್ಕೆ ತಲುಪಿದ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಕುಟುಂಬಸ್ಥರು ಮತ್ತು ಸಂಬಂಧಿಕರು ಪಡೆದಿದ್ದಾರೆ. ಅವರ ತಂಗಿ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಳಗಾವಿ, ನವೆಂಬರ್​​ 26: ಕಾರು ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಲಬುರಗಿಯಿಂದ ರಾಮದುರ್ಗಕ್ಕೆ ಅವರ ಪಾರ್ಥಿವ ಶರೀರವನ್ನು ತರಲಾಗಿದ್ದು, ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಹಾಂತೇಶ್ ಬೀಳಗಿ ಅವರ ತಂಗಿ ಅಣ್ಣನನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಎದ್ದುಬಾರೋ ಅಣ್ಣ ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಕಲಬುರಗಿಯ ಜೇವರ್ಗಿ ಬಳಿ ಕಾರಿಗೆ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ನಡೆದಿತ್ತು. ಘಟನೆಯಲ್ಲಿ ಮಹಾಂತೇಶ ಬೀಳಗಿ ಸೇರಿ ಮೂವರು ನಿನ್ನೆ ಮೃತಪಟ್ಟಿದ್ದರೆ ಇವತ್ತು ಮತ್ತೊಬ್ಬ ಗಾಯಾಳು ಅಸುನೀಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 26, 2025 12:06 PM