ಬೆಳಗಾವಿ: ಕೈ ಕೊಟ್ಟ ಮುಂಗಾರು, ನೀರಿಗಾಗಿ ಬೀದಿಗಿಳಿದು ರೈತರ ಹೋರಾಟ

ಕೈ ಕೊಟ್ಟ ಮುಂಗಾರು ಮಳೆಗೆ ರೈತರು ಕಂಗೆಟ್ಟು ಹೋಗಿದ್ದು, ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಹೌದು, ರಾಯಬಾಗ - ಕೇರೂರು - ನನದಿವಾಡಿ ಮಾರ್ಗದ ಜಿಎಲ್‌ಬಿಸಿ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಹಶಿಲ್ದಾರ್ ಕಚೇರಿ ಎದುರು ರಾಜ್ಯ ರೈತ ಸಂಘಗಳು ಪ್ರತಿಭಟನೆ ನಡೆಸಿವೆ.

ಬೆಳಗಾವಿ: ಕೈ ಕೊಟ್ಟ ಮುಂಗಾರು, ನೀರಿಗಾಗಿ ಬೀದಿಗಿಳಿದು ರೈತರ ಹೋರಾಟ
ನೀರಿಗಾಗಿ ಬೀದಿಗಿಳಿದ ಜಿಲ್ಲೆಯ ರೈತರು
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 23, 2023 | 5:32 PM

ಬೆಳಗಾವಿ, ಆ.23: ರಾಜ್ಯದಲ್ಲಿ ಈ ಬಾರಿ ಅಂದುಕೊಳ್ಳುವಷ್ಟು ಮುಂಗಾರು ಮಳೆಯಾಗಿಲ್ಲ. ಇದರಿಂದ ಮಳೆಯ ನೀರನ್ನೇ ನಂಬಿಕೊಂಡಿದ್ದ ಜನರಿಗೆ ಬರಸಿಡಿಲು ಬಡಿದಂತಾಗಿದೆ. ಅದಕ್ಕೊಸ್ಕರ ಇದೀಗ ರೈತರು ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಹೌದು, ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಹಶಿಲ್ದಾರ್ ಕಚೇರಿ ಎದುರು ರಾಜ್ಯ ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕಳೆದ 20 ವರ್ಷಗಳಿಂದ ಹೋರಾಟ ಮಾಡಿದರೂ ಕಾಲುವೆಗೆ ನೀರು ಬಿಡುತ್ತಿಲ್ಲ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.

ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ಒಣಗುತ್ತಿರುವ ರೈತರ ಬೆಳೆಗಳು

ಇನ್ನು ಇದೀಗ ನೀರಿನ ಕೊರತೆ ಇಥೇಚ್ಚವಾಗಿ ತಲೆದೂರಿದ್ದು, ಕಾಲುವೆಗೆ ನೀರು ಬಿಡುಗಡೆ ಮಾಡದ ಹಿನ್ನೆಲೆ ಹಲವು ಗ್ರಾಮಗಳ ರೈತರಿಗೆ ಸಮಸ್ಯೆ ಎದುರಾಗಿದೆ. ಹೌದು, ಜಿಲ್ಲೆಯ ಕೇರೂರು, ಕೆಂಪಟ್ಟಿ, ನಂದಿಕುರಳಿ, ಹಣಬರಟ್ಟಿ, ಅರಬ್ಯಾನವಾಡಿ, ರೂಪಿನಾಳ, ಕಾಡಾಪುರ, ನನದಿವಾಡಿ ಸೇರಿ ಹಲವು ಗ್ರಾಮಗಳಲ್ಲಿ ಬೆಳೆ ಹಾನಿ ಆತಂಕ ಎದುರಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಕೊರತೆ ಮಳೆ ವರ್ಷವನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ, ತಮಿಳುನಾಡು ಜಲಾಶಯಗಳಲ್ಲಿ ಸಾಕಷ್ಟು ನೀರಿದೆ: ಡಿವಿ ಸದಾನಂದ ಗೌಡ, ಕೇಂದ್ರ ಸಚಿವ

2 ದಿನಗಳಲ್ಲಿ ನೀರು ಬಿಡುಗಡೆ ಮಾಡದಿದ್ರೆ ಜಿಎಲ್‌ಬಿಸಿ ಕಾಲುವೆ ವ್ಯಾಪ್ತಿಯ ಗ್ರಾಮಗಳನ್ನು ಬಂದ್ ಮಾಡುವ ಎಚ್ಚರಿಕೆ

ಇನ್ನು ಈ ಕುರಿತು ಮಾತನಾಡಿದ ಚಿಕ್ಕೋಡಿ ತಾಲೂಕು ರೈತ ಮುಖಂಡ ಮಂಜುನಾಥ ಪರಗೌಡ ‘ ಕಾಲುವೆಗೆ ಎಷ್ಟು ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಬೇಕೋ ಅಷ್ಟು ಪ್ರಮಾಣದಲ್ಲಿ ಬಿಡುಗಡೆ ಮಾಡುತ್ತಿಲ್ಲ. ರಾಯಬಾಗ ಕ್ಷೇತ್ರದಲ್ಲಿ ಹುಲ್ಯಾಳ ಕೆರೆ ತುಂಬಿಕೊಳ್ಳುತ್ತಾರೆ. ಆದ್ರೆ, ಮುಂದೆ ನೀರು ಬರುತ್ತಿಲ್ಲ. ಜಿಎಲ್‌ಬಿಸಿ ಕಾಲುವೆಗೆ 500 ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ರೆ, ಸಮಸ್ಯೆ ಆಗಲ್ಲ. ಎರಡು ದಿನಗಳಲ್ಲಿ ನೀರು ಬಿಡುಗಡೆ ಮಾಡುತ್ತೇವೆಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಎರಡು ದಿನಗಳಲ್ಲಿ ನೀರು ಬಿಡುಗಡೆ ಮಾಡದಿದ್ರೆ ಕೇರೂರು ಕಾಡಾಪುರ ನನದಿವಾಡಿ ಗ್ರಾಮ ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ