ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ; ಆಸ್ಪತ್ರೆಗೆ ದಾಖಲು

| Updated By: ಕಿರಣ್ ಹನುಮಂತ್​ ಮಾದಾರ್

Updated on: May 30, 2024 | 3:23 PM

ಇದೇ ಮೇ.22 ರಂದು ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದ ಜಾತ್ರೆಯ ಪ್ರಸಾದ ಸೇವಿಸಿ 46 ಜನ ಭಕ್ತರು ಅಸ್ವಸ್ಥಗೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ.

ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ
Follow us on

ಬೆಳಗಾವಿ, ಮೇ.30: ಜಾತ್ರೆಯಲ್ಲಿ ಪ್ರಸಾದ(Prasadam) ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಡೆದಿದೆ. 30 ಜನರಿಗೆ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ, 10 ಜನರಿಗೆ ಕೆರೂರಿನ ಅಂಗವಾಡಿಯಲ್ಲಿ ಹಾಗೂ 10 ಜನರಿಗೆ ಯಕ್ಸಂಬಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಹಿನ್ನಲೆ ವೈದ್ಯಕೀಯ ತಂಡ ಗ್ರಾಮದಲ್ಲೇ ಬಿಡು ಬಿಟ್ಟಿದೆ.

ಘಟನೆ ವಿವರ

ಕೆರೂರು ಗ್ರಾಮದ ಬಾಳುಮಾಮಾ ಜಾತ್ರೆಯಲ್ಲಿ ಸಾವಿರಾರು ಜನ ನಿನ್ನೆ(ಮೇ.29) ಪ್ರಸಾದ ಸೇವಿಸಿದ್ದರು. ಸಂಜೆ ಊಟ ಮಾಡಿದ ಬಳಿಕ ವಾಂತಿ-ಭೇದಿ ಶುರುವಾಗಿದೆ. ಇದು ತಿಳಿಯದೇ ಮಧ್ಯಾಹ್ನ ಉಳಿದಿದ್ದ ಅಡುಗೆಯನ್ನು 200ಕ್ಕೂ ಹೆಚ್ಚು ಜನ ರಾತ್ರಿಯೂ ಸೇವಿಸಿದ್ದರು ಎನ್ನಲಾಗಿದೆ. ಇನ್ನು ಅಸ್ವಸ್ಥರಾದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯಕೀಯ ತಂಡ ಗ್ರಾಮದಲ್ಲೇ ಬಿಡುಬಿಟ್ಟಿದೆ.

ಇದನ್ನೂ ಓದಿ:ಕೇರಳ: ಸ್ಥಳೀಯ ರೆಸ್ಟೋರೆಂಟ್‌ನಿಂದ ಆಹಾರ ಸೇವಿಸಿದ ಮಹಿಳೆ ಸಾವು,178 ಮಂದಿ ಅಸ್ವಸ್ಥ

ಇದೇ ಮೇ.22 ರಂದು ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದ ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿತ್ತು. ಪ್ರಸಾದ, ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದವರಲ್ಲಿ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದರು.

ಬಳಿಕ ಅಸ್ವಸ್ಥಗೊಂಡವರನ್ನು ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಾಲೂಕು ವೈದ್ಯರು ಅಹಿತಕರ ಘಟನೆ ಆಗದಂತೆ ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ