ಜ.2ರಿಂದ 7ರವರೆಗೆ ಸಿರಿ ಧಾನ್ಯ, ಸಾವಯವ ಮೇಳದ ಅಂತಾರಾಷ್ಟ್ರೀಯ ಪೂರ್ವಭಾವಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ
ಸುವರ್ಣಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಸಿರಿ ಧಾನ್ಯ & ಸಾವಯವ ಅಂತಾರಾಷ್ಟ್ರೀಯ ಮೇಳದ ಪೂರ್ವಭಾವಿ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಮಾರುಕಟ್ಟೆಯಲ್ಲಿ ಸಿರಿ ಧಾನ್ಯಕ್ಕೆ ಹೆಚ್ಚಿನ ಬೇಡಿಕೆ ಇದೆ. ಸಿರಿಧಾನ್ಯ ಬೆಳೆಯುವ ರಾಜ್ಯಗಳಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. 1ನೇ ಸ್ಥಾನಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡಬೇಕು ಎಂದಿದ್ದಾರೆ.

ಬೆಳಗಾವಿ, ಡಿಸೆಂಬರ್ 14: ಮಾರುಕಟ್ಟೆಯಲ್ಲಿ ಸಿರಿ ಧಾನ್ಯಕ್ಕೆ ಹೆಚ್ಚಿನ ಬೇಡಿಕೆ ಇದೆ. ಕಳೆದ 20 ವರ್ಷಗಳಿಂದ ಸಾವಯವಕ್ಕೆ ಹೆಚ್ಚಿನ ಒತ್ತು ಕೊಡುತ್ತಿದ್ದೇವೆ. ಸಿರಿಧಾನ್ಯ ಬೆಳೆಯುವ ರಾಜ್ಯಗಳಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. 1ನೇ ಸ್ಥಾನಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಸುವರ್ಣಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಿರಿ ಧಾನ್ಯ ಮತ್ತು ಸಾವಯವ ಮೇಳದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಿರಿ ಧಾನ್ಯ, ಸಾವಯವ ಮೇಳದ ಅಂತಾರಾಷ್ಟ್ರೀಯ ಪೂರ್ವಭಾವಿ ಕಾರ್ಯಕ್ರಮ ಜ.2ರಿಂದ ಜ.7ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸಿರಿ ಧಾನ್ಯ ಅಂತಾರಾಷ್ಟ್ರೀಯ ದಿನದ ಅಂಗವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕೊವಿಡ್ ಇದ್ದ ಕಾರಣ ಕಳೆದ ಎರಡು ವರ್ಷಗಳಿಂದ ಕಾರ್ಯಕ್ರಮ ನಡೆಸಿಲ್ಲ. ಮಳೆ ಕಡಿಮೆ ಇರುವ ಪ್ರದೇಶದಲ್ಲಿ ಸಿರಿ ಧಾನ್ಯಗಳನ್ನು ಹೆಚ್ಚು ಬೆಳೆಯುತ್ತಾರೆ. ಸಿರಿ ಧಾನ್ಯದಲ್ಲಿ ಕಾರ್ಬೋಹೈಡ್ರೇಟ್ ಕಡಿಮೆ, ಲವಣಾಂಶಗಳು ಹೆಚ್ಚಿದೆ. ನಾರಿನ ಅಂಶ ಹೆಚ್ಚಿರುವುದರಿಂದ ವೈದ್ಯರು ಆರೋಗ್ಯಕ್ಕೆ ಉತ್ತಮ ಅಂತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಮುಸಲ್ಮಾನರೇ, ವಿವಾದತ್ಮಕ ಹೇಳಿಕೆ ನೀಡಿದ ಈಶ್ವರಪ್ಪ!
ಅಂತಾರಾಷ್ಟ್ರೀಯ ಮೇಳದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಸಚಿವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಾಲಾ ಮಕ್ಕಳೊಂದಿಗೆ ಫೋಟೋಗೆ ಪೋಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಸುವರ್ಣ ಸೌಧದ ಸುವರ್ಣ ಸೌಧದ ಪಶ್ಚಿಮ ದ್ವಾರದ ಎದುರು ಶಾಲಾ ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಸಿಎಂಗೆ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಈಶ್ವರ ಖಂಡ್ರೆ ಸಾಥ್ ನೀಡಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ತಂತ್ರ: ‘ಕೈ’ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಏನು?
ಕೆಲವು ಸಚಿವರು ಗೈರು ಹಾಜರಾಗಿದ್ದಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ. ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್, ಶರಣು ಪ್ರಕಾಶ್ ಪಾಟೀಲ್, ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ, ಶರಣಬಸಪ್ಪ ದರ್ಶನಾಪುರ್ ಸೇರಿದಂತೆ ಕೆಲ ಸಚಿವರ ಗೈರು ಹಾಜರಾಗಿದ್ದರು. ಹಾಗಾಗಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.