ಬೆಳಗಾವಿ: ಗುರುವಾರ (ಡಿಸೆಂಬರ್ 23) ಬೆಳಗಾವಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಕೆಎಲ್ಎಸ್ ಗೋಗಟೆ ಸಂಸ್ಥೆ ಉದ್ಯೋಗ ಮೇಳ ಆಯೋಜಿಸಿದೆ. ಉದ್ಯೋಗ ಮೇಳವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. 5,600 ಯುವಕರು ನೋಂದಣಿ ಮಾಡಿಕೊಂಡಿದ್ದಾರೆ. ಇಂಜಿನಿಯರ್ಸ್, ಡಿಪ್ಲೊಮಾ ಹೋಲ್ಡರ್ಸ್ಗಾಗಿ ಮೇಳ ಆಯೋಜನೆ ಮಾಡಲಾಗಿದೆ. 78 ಕಂಪನಿ ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಲಿವೆ ಎಂದು ಐಟಿ-ಬಿಟಿ ಖಾತೆ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಹೇಳಿದ್ದಾರೆ.
ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಬಗ್ಗೆ ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. ಭಾವನೆ ವ್ಯಕ್ತಪಡಿಸಲು ಕನ್ನಡ ಸಂಘಟನೆಗಳಿಂದ ಬಂದ್ ಕರೆ ನೀಡಲಾಗಿದೆ. ಬಂದ್ ಮಾಡುವ ಅವಶ್ಯಕತೆಯಿಲ್ಲ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ನಮ್ಮ ಸರ್ಕಾರ ನಾಡಿನ ಕಾನೂನಿನ ಪರವಾಗಿದೆ. ಕನ್ನಡಿಗರ ವಿಶ್ವಾಸಕ್ಕೆ ಧಕ್ಕೆ ಬರುವಂತೆ ನಡೆದುಕೊಳ್ಳುವುದಿಲ್ಲ. ಸರ್ಕಾರ ಜನಪರವಾಗಿದೆ, ಜನರಿಗಾಗಿ ಕೆಲಸ ಮಾಡುತ್ತದೆ. ಸರ್ಕಾರ ನಾಡಿನ ಸಂಸ್ಕೃತಿ, ಸೌಹಾರ್ದತೆಯ ಪರವಾಗಿದೆ. ಇದರ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.
ಕಾಗವಾಡದಲ್ಲಿ ಶಿವಸೇನೆ ಪುಂಡರು ಮತ್ತೆ ಕನ್ನಡ ಬಾವುಟ ಸುಟ್ಟ ವಿಚಾರವಾಗಿ ಅಶ್ವತ್ಥ್ ನಾರಾಯಣ ಮಾತನಾಡಿದ್ದಾರೆ. ಯಾರೂ ಕೂಡಾ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಬಾರದು. ಎಲ್ಲಾ ಭಾಷೆಗಳು ಬೆಳೆಯಲು ಅವಕಾಶವಿದೆ. ಮರಾಠಿಗರು ನಮ್ಮವರು, ಕನ್ನಡಿಗರು ನಮ್ಮವರು. ಕಾನೂನು ಕಾಪಾಡಬೇಕು, ಸೌಹಾರ್ದತೆ ಕಾಪಾಡಬೇಕು. ಒಂದು ವೇಳೆ ಯಾರೇ ಧಕ್ಕೆ ತಂದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಯಾರೇ ಕುಮ್ಮಕ್ಕು ನೀಡಿದ್ರೆ ಕ್ರಮ ಆಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸುವರ್ಣಸೌಧದ ಆವರಣದಲ್ಲಿ ಚೆನ್ನಮ್ಮ, ರಾಯಣ್ಣನ ಮೂರ್ತಿ ಸ್ಥಾಪನೆ: ಬಸವರಾಜ ಬೊಮ್ಮಾಯಿ ಘೋಷಣೆ
ಇದನ್ನೂ ಓದಿ: ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ, ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟ ಶಿವಸೇನೆ ಪುಂಡರು
Published On - 7:57 pm, Wed, 22 December 21