ಹಿರೇಕೋಡಿಯಲ್ಲಿ ನೆರವೇರಿದ ಜೈನಮುನಿ ಮಹಾರಾಜರ ಅಂತ್ಯಸಂಸ್ಕಾರ, ಹತ್ಯೆ ಖಂಡಿಸಿ ನಾಳೆ ಮೌನ ಪ್ರತಿಭಟನೆ

ಹತ್ಯೆಯಾದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಅಂತ್ಯಸಂಸ್ಕಾರ ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಬಳಿ ನೆರವೇರಿತು.

ಹಿರೇಕೋಡಿಯಲ್ಲಿ ನೆರವೇರಿದ ಜೈನಮುನಿ ಮಹಾರಾಜರ ಅಂತ್ಯಸಂಸ್ಕಾರ, ಹತ್ಯೆ ಖಂಡಿಸಿ ನಾಳೆ ಮೌನ ಪ್ರತಿಭಟನೆ
ಹಿರೇಕೋಡಿ ಬಳಿ ಇರುವ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ನೆರವೇರಿದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಅಂತ್ಯಸಂಸ್ಕಾರ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: Rakesh Nayak Manchi

Updated on:Jul 09, 2023 | 3:11 PM

ಚಿಕ್ಕೋಡಿ: ಹತ್ಯೆಯಾದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ (Kamakumaranandi Maharaj) ಅಂತ್ಯಸಂಸ್ಕಾರ ಇಂದು ಭಕ್ತರ ಕಂಬನಿಯ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ಹಿರೇಕೋಡಿ ಬಳಿ ಇರುವ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ನೆರವೇರಿತು. ಜೈನಮುನಿಗಳ ಚಿತೆಗೆ ಕಾಮಕುಮಾರನಂದಿ ಮಹಾರಾಜರ ಪೂರ್ವಾಶ್ರಮದ ಅಣ್ಣನ ಮಗ ಭೀಮಗೊಂಡ ಉಗಾರೆ ಅವರು ಅಗ್ನಿಸ್ಪರ್ಶ ಮಾಡಿದರು. ಕಾಮಕುಮಾರನಂದಿ ಮಹಾರಾಜರ ಚಿತೆಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆ ಕೆಲ ಕ್ಷಣಗಳ ಕಾಲ ಜಿಟಿಜಿಟಿ ಮಳೆಯಾಗಿದೆ.

ನಾಳೆ ಬೆಳಗ್ಗೆ 8 ಗಂಟೆಗೆ ರಕ್ಷಾ ವಿಸರ್ಜನಕ್ಕೆ ಬರುವಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಹತ್ಯೆ ಖಂಡಿಸಿ ನಾಳೆ 10 ಗಂಟೆಗೆ ಚಿಕ್ಕೋಡಿಯ ಆರ್​ಡಿ ಕಾಲೇಜಿನಿಂದ ಮೌನ ಪ್ರತಿಭಟನಾ ಮೆರವಣಿಕೆ ಹಮ್ಮಿಕೊಳ್ಳಲಾಗಿದ್ದು, ಭಕ್ತರು ಆಗಮಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ಅಂತ್ಯಕ್ರಿಯೆ ಬಳಿಕ ಮಾಹಿತಿ ನೀಡಿದ ನಾಂದಣಿ ಮಠದ ಜಿನಸೇನ ಭಟ್ಟಾಚಾರ್ಯ ಸ್ವಾಮೀಜಿ, ಜಿನಶಾಸನದ ಅದ್ಭುತ ಸೂರ್ಯ ಅಸ್ತವಾಗಿದೆ. ನಾಳೆ ಬಳಗ್ಗೆ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಮ್ಮ ಧ್ವನಿ ಸರ್ಕಾರಕ್ಕೆ ಮುಟ್ಟಬೇಕು. ಜೈನ ಸಮಾಜ ಅಹಿಂಸಪ್ರಿಯ ಸಮಾಜ. ಮಹಾರಾಜರ ಮೇಲೆ ಆದ ಆಘಾತ ಮತ್ತೆ ಯಾರ ಮೇಲೂ ಆಗಬಾರದು. ಆರ್‌ಡಿ ಹೈಸ್ಕೂಲ್​ನಿಂದ ಮೌನಪ್ರತಿಭಟನೆ ಮೆರವಣಿಗೆ ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಮಾಡಲಿದ್ದೇವೆ. ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವ ಬಗ್ಗೆ ವಿಶ್ವಾಸವಿದೆ ಎಂದರು.

ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ‌‌

ಜೈನ ಮುನಿ ಹತ್ಯೆ ಖಂಡಿಸಿ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಹಲಗಾ ಗ್ರಾಮದ ಸಿದ್ದಸೇನ ಮಹಾರಾಜರ ನೇತೃತ್ವದಲ್ಲಿ ಪ್ರತಿಭಟನೆ‌‌ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆ ಬಂದ್ ಮಾಡಿ ಆಕ್ರೋಶ ಹೊರಹಾಕಲಾಗಿದೆ. ಪ್ರತಿಭಟನೆಯಲ್ಲಿ ಸಾವಿರಾರು ಜನರು, ಜೈನ ಸಮುದಾಯದ ಮುಖಂಡರು ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಸಂಜಯ್ ಪಾಟೀಲ್ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sun, 9 July 23

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ