ಜೈನಮುನಿ ಹತ್ಯೆ ಪ್ರಕರಣ; ಆರೋಪಿಗಳನ್ನು ಜುಲೈ 17ರ ವರೆಗೆ ಪೊಲೀಸ್ ವಶಕ್ಕೊಪ್ಪಿಸಿದ ನ್ಯಾಯಾಲಯ

ಜೈನಮುನಿ ಶವದ ಜತೆ ಡೈರಿ ತೆಗೆದುಕೊಂಡು ಹೋಗಿದ್ದ ಆರೋಪಿಗಳು, ಕಟಕಬಾವಿ ಬಳಿಯ ಕಬ್ಬಿನ ಗದ್ದೆ ತಂದಿದ್ದರು. ಬಳಿಕ ಮೃತದೇಹವನ್ನು ತುಂಡು ಮಾಡಿ ಕೊಳವೆಬಾವಿಗೆ ಹಾಕಿದ್ದರು. ನಂತರ ರಕ್ತಸಿಕ್ತ ಬಟ್ಟೆಗಳು, ಡೈರಿಯನ್ನು ಸುಟ್ಟು ಹಾಕಿದ್ದರು ಎಂದು ತಿಳಿದುಬಂದಿದೆ.

ಜೈನಮುನಿ ಹತ್ಯೆ ಪ್ರಕರಣ; ಆರೋಪಿಗಳನ್ನು ಜುಲೈ 17ರ ವರೆಗೆ ಪೊಲೀಸ್ ವಶಕ್ಕೊಪ್ಪಿಸಿದ ನ್ಯಾಯಾಲಯ
ಜೈನಮುನಿ ಕಾಮಕುಮಾರನಂದಿ ಮಹಾರಾಜ
Follow us
TV9 Web
| Updated By: Ganapathi Sharma

Updated on:Jul 11, 2023 | 2:59 PM

ಚಿಕ್ಕೋಡಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ (Acharya Shri 108 Kamkumarnandi Maharaj) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ (Chikkodi Additional Sessions Court) ಮಂಗಳವಾರ​ ಆದೇಶ ನೀಡಿದೆ. ಒಂದನೇ ಆರೋಪಿ ನಾರಾಯಣ ಮಾಳಿ, ಎರಡನೇ ಆರೋಪಿ ಹಸನ್ ​​ಸಾಬ್ ಅನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ.

ಜೈನಮುನಿಗಳ ಡೈರಿ ರಹಸ್ಯ ಬಯಲಿಗೆಳೆಯುತ್ತಾರಾ ಪೊಲೀಸರು?

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದ ಅರೋಪಿಗಳನ್ನು ಚಿಕ್ಕೋಡಿ ಠಾಣೆ ಪೊಲೀಸರು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್​, ಡಿವೈಎಸ್​ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಜೈನಮುನಿಗಳ ಡೈರಿಯನ್ನು ಆರೋಪಿಗಳು ಸುಟ್ಟು ಹಾಕಿದ್ದಾಗಿ ಪ್ರಾಥಮಿಕ ತನಿಖೆ ವೇಳೆ ಮಾಹಿತಿ ದೊರೆತಿದೆ. ಈ ಕುರಿತು ವಿಚಾರಣೆ ವೇಳೆ ಆರೋಪಿಗಳೇ ಪೊಲೀಸರ ಬಳಿ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಮುನಿಯನ್ನು ಕೊಲೆಗೈದು ಶವವನ್ನು ಗೋಣಿಚೀಲದಲ್ಲಿ ಕಟ್ಟಿ ಬೈಕ್​ನಲ್ಲಿ ಸಾಗಿಸಲಾಗಿತ್ತು. ಜೈನಮುನಿ ಶವದ ಜತೆ ಡೈರಿ ತೆಗೆದುಕೊಂಡು ಹೋಗಿದ್ದ ಆರೋಪಿಗಳು, ಕಟಕಬಾವಿ ಬಳಿಯ ಕಬ್ಬಿನ ಗದ್ದೆ ತಂದಿದ್ದರು. ಬಳಿಕ ಮೃತದೇಹವನ್ನು ತುಂಡು ಮಾಡಿ ಕೊಳವೆಬಾವಿಗೆ ಹಾಕಿದ್ದರು. ನಂತರ ರಕ್ತಸಿಕ್ತ ಬಟ್ಟೆಗಳು, ಡೈರಿಯನ್ನು ಸುಟ್ಟು ಹಾಕಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Jain Muni Murder: ಜೈನಮುನಿಗಳ ದೇಹ ತುಂಡು ತುಂಡಾಗಿ ಕತ್ತರಿಸಿ ಡೈರಿ ಸುಟ್ಟು ಹಾಕಿದ್ರು, ಎಫ್​ಐಆರ್​ನಲ್ಲಿ ದಾಖಲಾಗಿದೆ ಭಯಾನಕ ಸಂಗತಿ

ಪ್ರಕರಣ ಸಂಬಂಧ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿರುವ ಪೊಲೀಸರು, ಸಂಪೂರ್ಣ ಮಾಹಿತಿ ಕಲೆಹಾಕುತ್ತಿದ್ದಾರೆ. ಜುಲೈ 5ರಂದು ರಾತ್ರಿ ಜೈನಮುನಿಯನ್ನು ಹತ್ಯೆ ಮಾಡಲಾಗಿತ್ತು.

ಆಶ್ರಮಕ್ಕೆ ಬಿಜೆಪಿ ನಳಿನ್ ಕುಮಾರ್ ಕಟೀಲ್ ತಂಡ ಭೇಟಿ

ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತದಲ್ಲಿರುವ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಮಂಗಳವಾರ ಭೇಟಿ ನೀಡಿದೆ. ಪ್ರಕರಣದ ಸತ್ಯಾಸತ್ಯತೆ ಅರಿಯಲು ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ನಳಿನ್ ಕುಮಾರ್ ಅವರು ಆಶ್ರಮದಲ್ಲಿ ಮಾಹಿತಿ ಪಡೆದಿದ್ದಾರೆ. ಜೈನಮುನಿಗಳ ಸಹಾಯಕಿ ಕುಸುಮಾ ಬಳಿ ಮಾಹಿತಿ ಸಂಗ್ರಹಿದ್ದಾರೆ. ಇದೇ ವೇಳೆ, ಜೈನಮುನಿಗಳನ್ನು ನೆನೆದು ಕುಸುಮಾ ಕಣ್ಣೀರು ಹಾಕಿದ್ದಾರೆ.

ಜೈನಮುನಿಗಳ ಪೂರ್ವಾಶ್ರಮದ ಸಂಬಂಧಿಕರ ಜತೆಗೂ ಬಿಜೆಪಿಯ ತಂಡ ಚರ್ಚೆ ನಡೆಸಿದೆ. ಶಾಸಕರಾದ ಮಹೇಶ್ ಟೆಂಗಿನಕಾಯಿ, ಅಭಯ್ ಪಾಟೀಲ್ ನಳಿನ್ ಜತೆಗೆ ಇದ್ದರು.

– ಸದಾಶಿವ ಜಾಧವ್‌- ಚಿಕ್ಕೋಡಿ

ರಾಜ್ಯದ ಇನ್ನಷ್ಟುಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Tue, 11 July 23

News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ