ಜಾರಕಿಹೊಳಿ ಬ್ರದರ್ಸ್ ಹಿರಿಯ ಸಹೋದರಿ ನಿಧನ: ಅಂತ್ಯಕ್ರಿಯೆಗೆ ಸತೀಶ್ ಗೈರು

ಗೋಕಾಕ್​​​ ನಗರದ ಆಸ್ಪತ್ರೆಯಲ್ಲಿ ಜಾರಕಿಹೊಳಿ ಹಿರಿಯ ಸಹೋದರಿ ಲಗಮವ್ವ ಕೊನೆಯುಸಿರೆಳದಿದ್ದಾರೆ.  ಗೋಕಾಕ್​​ ನಗರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಲಗಮವ್ವ, ಪತಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

ಜಾರಕಿಹೊಳಿ ಬ್ರದರ್ಸ್ ಹಿರಿಯ ಸಹೋದರಿ ನಿಧನ: ಅಂತ್ಯಕ್ರಿಯೆಗೆ ಸತೀಶ್ ಗೈರು
ಜಾರಕಿಹೋಳಿ ಸಹೋದರರ ಹಿರಿಯ ಸಹೋದರಿ ನಿಧನ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 02, 2023 | 12:56 PM

ಬೆಳಗಾವಿ: ಜಾರಕಿಹೊಳಿ ಸಹೋದರರ ಹಿರಿಯ ಸಹೋದರಿ ಲಗಮವ್ವ(67) ತೀವ್ರ ಹೃದಯಾಘಾತದಿಂದ ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇನ್ನು ಇವರು ಗೋಕಾಕ ನಗರಸಭೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಪತಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಕೆಲವೇ ಹೊತ್ತಿನಲ್ಲಿ ಗೋಕಾಕ ನಗರದ ಕುಂಬಾರ ಗಲ್ಲಿಯ ರುದ್ರಭೂಮಿಯಲ್ಲಿ ಲಗಮವ್ವ ಅವರ ಅಂತ್ಯಕ್ರಿಯೆ ನೆರವೇರಲಿದೆ. ಇಂದು(ಜೂ.2) ಸಚಿವ ಸಂಪುಟ ಸಭೆ ಇರುವುದರಿಂದ ಸತೀಶ್ ಜಾರಕಿಹೊಳಿ ಸಹೋದರಿಯ ಅಂತ್ಯಕ್ರಿಯೆಗೆ ಗೈರಾಗಲಿದ್ದಾರೆ. ಇನ್ನು ಸಹೋದರಿ ಅಕಾಲಿಕ‌ ನಿಧನಕ್ಕೆ ಸಚಿವ ಸತೀಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸರಳತೆ, ಸೌಜನ್ಯತೆಯ ಆಗರವಾಗಿದ್ದ ಸಹೋದರಿ ಬಾಲ್ಯದಿಂದಲೂ ಪ್ರೋತ್ಸಾಹಿಸಿ ಮುನ್ನಡೆಸಿದ್ದಾರೆ. ಅವರ ಮಾರ್ಗದರ್ಶನ ನನ್ನ ರಾಜಕೀಯ ಬೆಳವಣಿಗೆಯಲ್ಲಿ ಪ್ರಧಾನ ಪಾತ್ರವಹಿಸಿದೆ. ನನ್ನ ತಾಯಿ ಸ್ವರೂಪಳಾಗಿದ್ದ ಸಹೋದರಿ ಕಳೆದುಕೊಂಡು ತೀವ್ರ ಆಘಾತವಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ  ಸಂತಾಪ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:46 pm, Fri, 2 June 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ