ಬೆಳಗಾವಿ: ಜಾರಕಿಹೊಳಿ ಸಹೋದರರ ಹಿರಿಯ ಸಹೋದರಿ ಲಗಮವ್ವ(67) ತೀವ್ರ ಹೃದಯಾಘಾತದಿಂದ ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇನ್ನು ಇವರು ಗೋಕಾಕ ನಗರಸಭೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಪತಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಕೆಲವೇ ಹೊತ್ತಿನಲ್ಲಿ ಗೋಕಾಕ ನಗರದ ಕುಂಬಾರ ಗಲ್ಲಿಯ ರುದ್ರಭೂಮಿಯಲ್ಲಿ ಲಗಮವ್ವ ಅವರ ಅಂತ್ಯಕ್ರಿಯೆ ನೆರವೇರಲಿದೆ. ಇಂದು(ಜೂ.2) ಸಚಿವ ಸಂಪುಟ ಸಭೆ ಇರುವುದರಿಂದ ಸತೀಶ್ ಜಾರಕಿಹೊಳಿ ಸಹೋದರಿಯ ಅಂತ್ಯಕ್ರಿಯೆಗೆ ಗೈರಾಗಲಿದ್ದಾರೆ. ಇನ್ನು ಸಹೋದರಿ ಅಕಾಲಿಕ ನಿಧನಕ್ಕೆ ಸಚಿವ ಸತೀಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸರಳತೆ, ಸೌಜನ್ಯತೆಯ ಆಗರವಾಗಿದ್ದ ಸಹೋದರಿ ಬಾಲ್ಯದಿಂದಲೂ ಪ್ರೋತ್ಸಾಹಿಸಿ ಮುನ್ನಡೆಸಿದ್ದಾರೆ. ಅವರ ಮಾರ್ಗದರ್ಶನ ನನ್ನ ರಾಜಕೀಯ ಬೆಳವಣಿಗೆಯಲ್ಲಿ ಪ್ರಧಾನ ಪಾತ್ರವಹಿಸಿದೆ. ನನ್ನ ತಾಯಿ ಸ್ವರೂಪಳಾಗಿದ್ದ ಸಹೋದರಿ ಕಳೆದುಕೊಂಡು ತೀವ್ರ ಆಘಾತವಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:46 pm, Fri, 2 June 23