ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ, ಬೀದಿ-ಬದಿಗಳಲ್ಲಿ ರಾರಾಜಿಸಿದ ನಮ್ಮ ಕನ್ನಡ ಬಾವುಟ

Kannada Rajyotsava 2023: ಇದೇ ಮೊದಲ ಬಾರಿಗೆ ಚನ್ನಮ್ಮ ವೃತ್ತದಲ್ಲಿ ಎಲ್‌ಇಡಿ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಹತ್ತು ಗಂಟೆಗೆ ರಾಜ್ಯೋತ್ಸವ ಮೆರವಣಿಗೆ ಆರಂಭವಾಗಲಿದೆ. ಸಂಜೆ ವರೆಗೂ ಮೆರವಣಿಗೆಯಲ್ಲಿ ಐದು ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಬೃಹತ್ ಮೆರವಣಿಗೆಯಲ್ಲಿ ನೂರಕ್ಕೂ ಅಧಿಕ ರೂಪಕಗಳು ಭಾಗಿಯಾಗಲಿವೆ. ಚನ್ನಮ್ಮ ವೃತ್ತದಿಂದ ಶನಿವಾರ ಕೂಟದ ವರೆಗೆ ಮೆರವಣಿಗೆ ನಡೆಯಲಿದೆ. ಉತ್ತರ ಕರ್ನಾಟಕ ಹಲವು ಜಿಲ್ಲೆಗಳ ಯುವಕರು ಭಾಗಿಯಾಗಲಿದ್ದಾರೆ. 

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ, ಬೀದಿ-ಬದಿಗಳಲ್ಲಿ ರಾರಾಜಿಸಿದ ನಮ್ಮ ಕನ್ನಡ ಬಾವುಟ
ಬೆಳಗಾವಿ
Follow us
Sahadev Mane
| Updated By: ಆಯೇಷಾ ಬಾನು

Updated on: Nov 01, 2023 | 10:10 AM

ಬೆಳಗಾವಿ, ನ.01: ಇಂದು ಇಡೀ ಕರುನಾಡಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ನಾಡ ಹಬ್ಬ ಆಚರಣೆಗೆ ಇಡೀ ರಾಜ್ಯ ಸಿದ್ಧವಾಗಿದೆ. ಬೆಳಗಾವಿಯಲ್ಲಿ ಇಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಣೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಚನ್ನಮ್ಮ ವೃತ್ತ ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ನಗರದ ಪ್ರತಿಯೊಂದು ಬೀದಿಯಲ್ಲಿ ಕನ್ನಡದ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ಕನ್ನಡದ ಕಂಪುಮೊಳಗುತ್ತಿದೆ.

ಬೆಳಗಾವಿಯಲ್ಲಿ ಇಂದು ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆ ಚನ್ನಮ್ಮ ವೃತ್ತ ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ನಗರದ ಪ್ರತಿಯೊಂದು ಬೀದಿಯಲ್ಲಿ ಕನ್ನಡದ ಬಾವುಟಗಳು ರಾರಾಜಿಸುತ್ತಿವೆ. ಇದೇ ಮೊದಲ ಬಾರಿಗೆ ಚನ್ನಮ್ಮ ವೃತ್ತದಲ್ಲಿ ಎಲ್‌ಇಡಿ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಹತ್ತು ಗಂಟೆಗೆ ರಾಜ್ಯೋತ್ಸವ ಮೆರವಣಿಗೆ ಆರಂಭವಾಗಲಿದೆ. ಸಂಜೆ ವರೆಗೂ ಮೆರವಣಿಗೆಯಲ್ಲಿ ಐದು ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಬೃಹತ್ ಮೆರವಣಿಗೆಯಲ್ಲಿ ನೂರಕ್ಕೂ ಅಧಿಕ ರೂಪಕಗಳು ಭಾಗಿಯಾಗಲಿವೆ. ಚನ್ನಮ್ಮ ವೃತ್ತದಿಂದ ಶನಿವಾರ ಕೂಟದ ವರೆಗೆ ಮೆರವಣಿಗೆ ನಡೆಯಲಿದೆ. ಉತ್ತರ ಕರ್ನಾಟಕ ಹಲವು ಜಿಲ್ಲೆಗಳ ಯುವಕರು ಭಾಗಿಯಾಗಲಿದ್ದಾರೆ.  ಮೆರವಣಿಗೆ ವೀಕ್ಷಿಸಲು ಜಿಲ್ಲಾಡಳಿತ ಗ್ಯಾಲರಿ ನಿರ್ಮಾಣ ಮಾಡಿದೆ.

ಇದನ್ನೂ ಓದಿ: MES ಕರಾಳ ದಿನಾಚರಣೆ: ನಿಷೇಧದ ನಡುವೆಯೂ ಉದ್ಧವ್ ಠಾಕ್ರೆ ಶಿವಸೇನೆ ಬಣದಿಂದ ಬೆಳಗಾವಿ ಚಲೋ ಕರೆ

ಇನ್ನು ಮತ್ತೊಂದೆಡೆ ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ MES ಕರಾಳ ದಿನ ಆಚರಣೆ ಮಾಡಲು ಮುಂದಾಗಿದೆ.  ಕರಾಳದಿನ ಆಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಮಹಾರಾಷ್ಟ್ರದ ಮೂವರು ಸಚಿವರು ಹಾಗೂ ಓರ್ವ ಸಂಸದನಿಗೆ ಬೆಳಗಾವಿ ಗಡಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಮಹಾರಾಷ್ಟ್ರ ನಾಯಕರನ್ನ ತಡೆಯಲು 18 ಚೆಕ್​ಪೋಸ್ಟ್​​ಗಳ ನಿರ್ಮಾಣ ಮಾಡಲಾಗಿದೆ. ಕರಾಳ ದಿನ ಆಚರಣೆ ಹೆಸರಿನಲ್ಲಿ ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಸಿದ್ದರಾಮಪ್ಪ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಸುತ್ತಮುತ್ತ ಫುಲ್ ಅಲರ್ಟ್

ಬೆಳಗಾವಿ ಪೊಲೀಸ್ ಕಮಿಷನರ್​​ ಸಿದ್ದರಾಮಪ್ಪ ನೇತೃತ್ವದಲ್ಲಿ ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಇಬ್ಬರು ಡಿಸಿಪಿ, 12 ಡಿವೈಎಸ್‌ಪಿ, 120ಕ್ಕೂ ಹೆಚ್ಚು ಇನ್ಸ್​ಪೆಕ್ಟರ್ಸ್​, 300 ಪಿಎಸ್‌ಐ, 2000 ಪಿಸಿ, 500 ಹೋಮ್​ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ. ಬೆಳಗಾವಿ ನಗರದ ಹಲವೆಡೆ 300 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ