ಬೆಳಗಾವಿಯಲ್ಲಿ ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ! ಲಾಠಿ ಹಿಡಿದು ಧರಣಿ ನಿರತರನ್ನು ಚದುರಿಸಿದ ಪೊಲೀಸರು

| Updated By: sandhya thejappa

Updated on: Dec 19, 2021 | 2:08 PM

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರತಿಕೃತಿ ದಹಿಸಿ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದರು. ಕರವೇ ಶಿವರಾಮೇಗೌಡ ಬಣ ಜಿಲ್ಲಾಧ್ಯಕ್ಷ ವಾಜೀದ್ ಸೇರಿ 20ಕ್ಕೂ ಅಧಿಕ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆಪಡೆದಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ! ಲಾಠಿ ಹಿಡಿದು ಧರಣಿ ನಿರತರನ್ನು ಚದುರಿಸಿದ ಪೊಲೀಸರು
ಕರವೇ ಕಾರ್ಯಕರ್ತರಿಂದ ಪ್ರತಿಭಟನೆ
Follow us on

ಬೆಳಗಾವಿ: ಜಿಲ್ಲೆಯಲ್ಲಿ ಎಂಇಎಸ್ ಪುಂಡರ ಗಲಾಟೆ ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಿರನವಾಡಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ. ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದನ್ನು ಖಂಡಿಸಿ ಕರವೇ ಕಾರ್ಯಕರ್ತರು ಮೆರವಣಿಗೆ ಹೊರಟಿದ್ದರು. ಈ ವೇಳೆ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆಯುವುದನ್ನು ವಿರೋಧಿಸಿದ ಹೋರಾಟಗಾರರು, ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ. ಲಾಠಿ ಹಿಡಿದು ಪೊಲೀಸರು ಧರಣಿ ನಿರತರನ್ನು ಚದುರಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರತಿಕೃತಿ ದಹಿಸಿ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದರು. ಕರವೇ ಶಿವರಾಮೇಗೌಡ ಬಣ ಜಿಲ್ಲಾಧ್ಯಕ್ಷ ವಾಜೀದ್ ಸೇರಿ 20ಕ್ಕೂ ಅಧಿಕ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆಪಡೆದಿದ್ದಾರೆ. ಧರಣಿ ನಿರತರನ್ನು 2 ಸರ್ಕಾರಿ ಬಸ್​ಗಳಲ್ಲಿ ತುಂಬಿಸಿ ಪೊಲೀಸರು ಕರೆದೊಯ್ದಿದ್ದಾರೆ.

ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ
ಹಾನಿಯಾಗಿದ್ದ ರಾಯಣ್ಣ ಪುತ್ಥಳಿಯನ್ನು ಸರಿಪಡಿಸಿ ಸ್ಥಳೀಯರು‌ ಮರುಪ್ರತಿಷ್ಠಾಪನೆ ಮಾಡಿದ್ದಾರೆ. ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ ಮುಖಂಡರು ಪೂಜೆ ಸಲ್ಲಿಸಲಿದ್ದಾರೆ. ಜೈ ಜೈ ರಾಯಣ್ಣ, ಜೈ ಜೈ ಚನ್ನಮ್ಮ ಅಂತಾ ಘೋಷಣೆ ಕೂಗಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಸದ್ಯ ಬೆಳಗಾವಿಯಲ್ಲಿ ಪ್ರತಿಭಟನೆ ಕಿಚ್ಚು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಒಂದು ಕಡೆ ಪೊಲೀಸರು  ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದರೆ, ಇನ್ನೊಂದು ಕಡೆ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದಾರೆ.

ಇನ್ನು ಬೆಂಗಳೂರಿನಲ್ಲೂ ಎಂಇಎಸ್​ ಪುಂಡಾಟಿಕೆ ಖಂಡಿಸಿ ಕನ್ನಡ ಸಂಘಟನೆಗಳು ಧರಣಿ ನಡೆಸಿವೆ. ಬಾಳಾ ಠಾಕ್ರೆ ಫೋಟೋಗೆ ಬೆಂಕಿಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಾಂಬೆ ರಕ್ಷಣಾ ವೇದಿಕೆ ಅಧ್ಯಕ್ಷರ ನೇತೃತ್ವದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್​ ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದಾರೆ. ನ್ಯಾಯ ಸಿಗುವ ತನಕ ಹೋರಾಟ ಮಾಡುತ್ತೇವೆ. ಸರ್ಕಾರ ಕಿವಿ‌ಕೊಡಲಿಲ್ಲ ಅಂದರೆ ಬೆಳಗಾವಿಗೆ ಹೋಗುತ್ತೇವೆ. ಸೋಮವಾರವರೆಗೆ ಸಮಯ ನೀಡುತ್ತೇವೆ. ಎಂಇಎಸ್ ಪುಂಡರು ತಮ್ಮ ಉದ್ಧಟನ ಬಿಡ್ಲಿಲ್ಲ ಅಂದರೆ, ಬುಧವಾರ ಪಾದಯಾತ್ರೆ ಮೂಲಕ ಬೆಳಗಾವಿ ಚಲೋ ಮಾಡುತ್ತೇವೆ ಅಂತ ಕನ್ನಡ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಇದನ್ನೂ ಓದಿ

ಬೆಂಗಳೂರು ನೈಸ್ ರಸ್ತೆಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ 5 ಕುಖ್ಯಾತ ದರೋಡೆಕೋರರ ಬಂಧನ

Health Tips : ಬಿಡುವಿನ ವೇಳೆಯಲ್ಲಿ ಪಾದಗಳಿಗೆ ಬಿಸಿ ನೀರಿನ ಸ್ನಾನ ಮಾಡಿಸಿ: ನಿಮ್ಮ ಒತ್ತಡ ನಿವಾರಣೆಗೂ ಒಳಿತು

Published On - 12:08 pm, Sun, 19 December 21