ಬಸ್ ಮೇಲೆ ಕಲ್ಲು ತೂರಿ ಮಸಿ ಬಳಿದ ಎಂಇಎಸ್ ಸಂಘಟನೆ ವಿರುದ್ಧ ಕರ್ನಾಟಕದಲ್ಲಿ ಭುಗಿಲೆದ್ದ ಆಕ್ರೋಶ

ಮಹಾರಾಷ್ಟ್ರದಲ್ಲಿ ಕೆಎಸ್​ಆರ್​ಟಿಸಿ ಬಸ್​​​​​ ಮೇಲೆ ಕಲ್ಲು ತೂರಿ, ಮಸಿ ಬಳಿಯುವತ್ತಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಕರವೇ ನಾರಾಯಣಗೌಡ ಬಣ ಪ್ರತಿಭಟನೆ ಮಾಡುತ್ತಿದೆ.

ಬಸ್ ಮೇಲೆ ಕಲ್ಲು ತೂರಿ ಮಸಿ ಬಳಿದ ಎಂಇಎಸ್ ಸಂಘಟನೆ ವಿರುದ್ಧ ಕರ್ನಾಟಕದಲ್ಲಿ ಭುಗಿಲೆದ್ದ ಆಕ್ರೋಶ
ಕರವೇ ಕಾರ್ಯಕರ್ತರಿಂದ ಪ್ರತಿಭಟನೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 27, 2022 | 3:03 PM

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧ ಮಹಾರಾಷ್ಟ್ರದಲ್ಲಿ ಕೆಎಸ್​ಆರ್​ಟಿಸಿ (KSRTC) ಬಸ್​​​​​ ಮೇಲೆ ಕಲ್ಲು ತೂರಿ, ಮಸಿ ಬಳಿಯುವತ್ತಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಕರವೇ ನಾರಾಯಣಗೌಡ (Karave Narayana Gowda) ಬಣ ಪ್ರತಿಭಟನೆ ಮಾಡುತ್ತಿದೆ. ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದ ಕಾರ್ಯಕರ್ತರು, ಮಹಾಂತೇಶ್ ‌ನಗರ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ‌ಹೆದ್ದಾರಿ ನಾಲ್ಕು ತಡೆದು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಯಲ್ಲೇ ಧರಣಿ ಕುಳಿತು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಗೂಂಡಾವರ್ತನೆ ತೋರಿದ ಮರಾಠಿ ಪುಂಡರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.  ಮಹರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವಿಸ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ಹಿನ್ನಲೆಯಲ್ಲಿ ವಾಹನ ಸವಾರರು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಡಿಸಿಪಿ ರವೀಂದ್ರ ಗಡಾಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಎಂಇಎಸ್ ವಿರುದ್ಧ ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ

ಹಾಗೇ ಎಂಇಎಸ್ ವಿರುದ್ಧ ಮೈಸೂರಿನ ಜಯಚಾಮರಾಜೇಂದ್ರ ವೃತ್ತದಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ಮಾಡುತ್ತಿದ್ದಾರೆ. ವಾಟಾಳ್​ ನಾಗರಾಜ ಮಹಾರಾಷ್ಟ್ರ ಸರ್ಕಾರದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದ್ದಾರೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕರು ಮರಾಠರ ಏಜೆಂಟರಂತೆ ವರ್ತಿಸುತ್ತಿದ್ದಾರೆ

ಬೆಳಗಾವಿ ಸುತ್ತಮುತ್ತಲಿನ ನಮ್ಮ ಶಾಸಕರು ಮರಾಠರ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಬೆಳಗಾವಿ ನಮ್ಮದು ಕರ್ನಾಟಕದ ಒಂದಂಗುಲ ಜಾಗವನ್ನು ಬಿಟ್ಟುಕೊಡುವುದಿಲ್ಲ. ನಮ್ಮ ಬಸ್​​ಗಳಿಗೆ ಮಸಿ ಬಳಿದರೆ ಮಹಾರಾಷ್ಟ್ರದ ಮೇಲೆ ದೊಡ್ಡ ದಾಳಿ ಮಾಡುತ್ತೇವೆ. ಗಡಿಗಳನ್ನು ಬಂದ್ ಮಾಡಿ ಮಹಾರಾಷ್ಟ್ರದವರನ್ನು ಒಳಗೆ ಬರಲು ಬಿಡುವುದಿಲ್ಲ ಎಂದು ವಾಟಾಳ್ ನಾಗರಾಜ್ ಎಂಇಎಸ್ ಸಂಘಟನೆ ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Sun, 27 November 22