ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಬಿಜೆಪಿಯದ್ದು, ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ

ಕುಂದಾನಗರಿಯಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯದ್ದು ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದಿದ್ದಾರೆ.

ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಬಿಜೆಪಿಯದ್ದು, ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
Follow us
TV9 Web
| Updated By: ಆಯೇಷಾ ಬಾನು

Updated on:Dec 16, 2021 | 11:39 AM

ಬೆಳಗಾವಿ: ಕುಂದಾನಗರಿಯಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಪ್ರತಿಪಕ್ಷವಾದ ಕಾಂಗ್ರೆಸ್ ಭಾರೀ ಪ್ರತಿಭಟನೆ, ರ್ಯಾಲಿ​ ನಡೆಸುತ್ತಿದ್ದು ಅಧಿವೇಶನಕ್ಕೆ (belagavi legislative winter session) ಕಾವೇರಿಸಿದೆ. ಪ್ರತಿಭಟನೆಯ ಭರದಲ್ಲಿ ಇಂದು ಕಾಂಗ್ರೆಸ್​ ಪಕ್ಷದ ಎಲ್ಲಾ ಶಾಸಕರೂ ಸೇರಿದಂತೆ ಸಾವಿರಾರು ಮಂದಿ ಒಗ್ಗೂಡಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ರ್ಯಾಲಿ ಆರಂಭಕ್ಕೂ ಮುನ್ನ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (kpcc president dk shivakumar) ಅವರು ಆಡಳಿತಾರೂಢ ಬಿಜೆಪಿ (Karnataka BJP) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯದ್ದು ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದವರು ಪ್ರತಿ ಹಂತದಲ್ಲಿಯೂ ಲಂಚ ಪಡೆಯುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಕೂಡ ಕಮಿಷನ್ ಪಡೆಯುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ಪ್ರಧಾನಿ ಮೋದಿ ನಮ್ಮ ಸರ್ಕಾರದ ವಿರುದ್ಧ 10 ಪರ್ಸೆಂಟ್ ಸರ್ಕಾರ ಆರೋಪಿಸಿದ್ದರು. ಹೀಗಾಗಿ ಕಮಿಷನ್ ಆರೋಪದ ಬಗ್ಗೆ ತನಿಖೆಯಾಗಬೇಕು. ನಮ್ಮ ಸರ್ಕಾರದಿಂದ ಈವರೆಗಿನ ಆರೋಪದ ಬಗ್ಗೆಯೂ ತನಿಖೆ ಆಗಲಿ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ರೈತರಿಗೆ ಮಳೆ, ನೆರೆ ಹಾನಿಯ ಪರಿಹಾರ ಹಣವನ್ನು ಕೊಟ್ಟಿಲ್ಲ. ರಾಜ್ಯ ಸರ್ಕಾರ ಯಾವುದೇ ರಂಗದಲ್ಲೂ ಸಹಾಯ ಮಾಡಿಲ್ಲ. ಇದು ಬಿಜೆಪಿ ಸರ್ಕಾರವಲ್ಲ, ಸಂಯುಕ್ತ ಸರ್ಕಾರ. ಇದು 40 ಪರ್ಸೆಂಟ್ ಸರ್ಕಾರ, ರಾಜ್ಯಕ್ಕೇ ಈ ಸರ್ಕಾರ ಕಳಂಕ ಎಂದಿದ್ದಾರೆ.

ಬೆಳಗಾವಿಯಲ್ಲಿ ನಾವು ಮಲಗಲು ಬಂದಿಲ್ಲ, ಒಗ್ಗೂಡಿ ರ್ಯಾಲಿ ಹೋಗ್ತಿದ್ದೀವಿ: ನಮ್ಮ ಎಲ್ಲಾ ಶಾಸಕರು ಒಗ್ಗೂಡಿ ರ್ಯಾಲಿ ಹೋಗ್ತಿದ್ದೀವಿ. ಬೆಳಗಾವಿಯಲ್ಲಿ ನಾವು ಮಲಗಲು ಬಂದಿಲ್ಲ. ಹೋರಾಟ ಮಾಡಲು ಬೆಳಗಾವಿಗೆ ಬಂದಿದ್ದೇವೆ. ಈ ಸರ್ಕಾರವನ್ನ ಜನರೇ ಕಿತ್ತು ಒಗೆಯಬೇಕು ಎಂದು ಅವರು ಕರೆಯಿತ್ತರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಇವತ್ತಿನ ರ್ಯಾಲಿ ಕುರಿತು ಮಾಹಿತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾಧ್ಯಕ್ಷ‌ ವಿನಯ್ ನಾವದಗಟ್ಟಿ ಕಡೆಯಿಂದ ಮಾಹಿತಿ ಪಡೆದರು. ಯಾರೆಲ್ಲಾ ಶಾಸಕರಿಗೆ ಹೇಳಿದ್ದೀರಿ, ಯಾವ ರೀತಿ ರ್ಯಾಲಿ ಹೊರಡಲು ವ್ಯವಸ್ಥೆ ಮಾಡಿದ್ದೀರಿ ಎಂದು ಡಿಕೆಶಿ ಪ್ರತಿಯೊಂದು ಮಾಹಿತಿ ಕೇಳಿಪಡೆದರು.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಱಲಿ ನಡೆಸುತ್ತಿದ್ದು, ಬೆಳಗಾವಿ ನಗರ, ರಾಷ್ಟ್ರೀಯ ಹೆದ್ದಾರಿ 4 ಬೆಳಗಾವಿಯ ಸುವರ್ಣಸೌಧದ ಬಳಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಪ್ರತಿ ವೃತ್ತದಲ್ಲಿಯೂ ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿಭಟನಾರ್ಥ ಟ್ರ್ಯಾಕ್ಟರ್ ವಾಹನವೇರಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಸೇರಿದಂತೆ ಹಲವು ನಾಯಕರಿಂದ ಜಾಥಾ ಆರಂಭವಾಗಿದೆ.

ಬೆಳಗಾವಿಯಲ್ಲಿ ಕರ್ಬಾಟಕ ಕಾಂಗ್ರೆಸ್​ ದೊಡ್ಡ ಮಟ್ಟದ ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದರೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿಲ್ಲ.

Congress Tractor Rally: ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಖಂಡಿಸಿ ಕಾಂಗ್ರೆಸ್​ ಟ್ರ್ಯಾಕ್ಟರ್ ಱಲಿ | TV9 Kannada

Published On - 10:12 am, Thu, 16 December 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ