ಶಾಸನಗಲ್ಲು ನೆಟ್ಟು ಮೇಕೆದಾಟಿನಿಂದ ಬೆಂಗಳೂರಿಗೆ ದಿನಕ್ಕೆ 10 ಕಿಮೀ ಕಾಲ್ನಡಿಗೆ ಮಾಡ್ತೇವೆ: ಕರ್ನಾಟಕ ಕಾಂಗ್ರೆಸ್​ ನಾಯಕರ ಘೋಷಣೆ

ಬೆಳಗಾವಿ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್​ ಜನವರಿ 9 ರಿಂದ 19 ರವರೆಗೆ ಪಾದಯಾತ್ರೆ (Congress Mekedatu Padayatre) ಹಮ್ಮಿಕೊಂಡಿರುವ ಹಿನ್ನೆಲೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೊಷ್ಠಿ ನಡೆಸಿದ್ದಾರೆ. ಸುದೀರ್ಘ ಪಾದಯಾತ್ರೆ ಮೇಕೆದಾಟಿನಿಂದ ಆರಂಭವಾಗಿ ಬೆಂಗಳೂರಿನಲ್ಲಿ ಅಂತ್ಯವಾಗಲಿದೆ. ದಿನಕ್ಕೆ 10 ಕಿ.ಮೀ. ಕಾಲ್ನಡಿಗೆಯಲ್ಲಿ ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ಹೆಜ್ಜೆ ಹಾಕಲಿದ್ದಾರೆ.​ ಕೇವಲ ಕಾಂಗ್ರೆಸ್ ಕಾರ್ಯಕರ್ತರಲ್ಲದೇ ಜನಸಾಮಾನ್ಯರಿಗೂ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಕಾಂಗ್ರೆಸ್​ […]

ಶಾಸನಗಲ್ಲು ನೆಟ್ಟು ಮೇಕೆದಾಟಿನಿಂದ ಬೆಂಗಳೂರಿಗೆ ದಿನಕ್ಕೆ 10 ಕಿಮೀ ಕಾಲ್ನಡಿಗೆ ಮಾಡ್ತೇವೆ: ಕರ್ನಾಟಕ ಕಾಂಗ್ರೆಸ್​ ನಾಯಕರ ಘೋಷಣೆ
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 21, 2021 | 11:59 AM

ಬೆಳಗಾವಿ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್​ ಜನವರಿ 9 ರಿಂದ 19 ರವರೆಗೆ ಪಾದಯಾತ್ರೆ (Congress Mekedatu Padayatre) ಹಮ್ಮಿಕೊಂಡಿರುವ ಹಿನ್ನೆಲೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೊಷ್ಠಿ ನಡೆಸಿದ್ದಾರೆ. ಸುದೀರ್ಘ ಪಾದಯಾತ್ರೆ ಮೇಕೆದಾಟಿನಿಂದ ಆರಂಭವಾಗಿ ಬೆಂಗಳೂರಿನಲ್ಲಿ ಅಂತ್ಯವಾಗಲಿದೆ. ದಿನಕ್ಕೆ 10 ಕಿ.ಮೀ. ಕಾಲ್ನಡಿಗೆಯಲ್ಲಿ ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ಹೆಜ್ಜೆ ಹಾಕಲಿದ್ದಾರೆ.​ ಕೇವಲ ಕಾಂಗ್ರೆಸ್ ಕಾರ್ಯಕರ್ತರಲ್ಲದೇ ಜನಸಾಮಾನ್ಯರಿಗೂ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಕಾಂಗ್ರೆಸ್​ ನಾಯಕರು ಆಹ್ವಾನ ನೀಡಿದ್ದಾರೆ. ಪಾದಯಾತ್ರೆ ಆರಂಭವಾಗುವ ಸ್ಥಳದಲ್ಲಿ ಕಾಂಗ್ರೆಸ್ ನಾಯಕರು ಶಾಸನಗಲ್ಲು (Mekedatu Stone Inscription) ನೆಡಲಿದ್ದಾರೆ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರಿಗೆ ಕಾಂಗ್ರೆಸ್ ನಿಂದ ಟಿಶರ್ಟ್ ನೀಡಲಾಗುವುದು. ಜೊತೆಗೆ ಸರ್ಟಿಫಿಕೇಟ್ ಸಹ ನೀಡಲಾಗುವುದು. ಕೊನೆಯ ದಿನ ಜನವರಿ 19 ರಂದು, ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಆಯಜಿಸಲಾಗಿದ್ದು, ಒಂದು ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್​ ನಾಯಕರು (Karnataka Congress Mekedatu) ತಿಳಿಸಿದ್ದಾರೆ.

ಮೇಕೆದಾಟು ಯೋಜನೆಗೆ ನಾನು ನೀರಾವರಿ ಸಚಿವನಾಗಿದ್ದಾಗ ಅಪ್ರೂವಲ್ ತಂದಿದ್ದೆ-ಡಿ.ಕೆ. ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇಕೆದಾಟು ಯೋಜನೆ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ನಾನು ನೀರಾವರಿ ಸಚಿವನಾಗಿದ್ದಾಗ ಅಪ್ರೂವಲ್ ತಂದಿದ್ದೆ. ಈ ಯೋಜನೆಯಿಂದ 2 ರಾಜ್ಯದ ರೈತರಿಗೆ ಅನುಕೂಲವಾಗುತ್ತೆ. ಬೆಂಗಳೂರಿಗೆ ಕುಡಿಯುವ ನೀರು ಕೂಡ ಪೂರೈಸಬಹುದು. ವಿದ್ಯುತ್ ಉತ್ಪಾದನೆ ಸಹ ಮಾಡಬಹುದಾಗಿದೆ ಎಂದು ಹೇಳಿದರು.

1968ರಲ್ಲೇ ಕಾಂಗ್ರೆಸ್ ಸರ್ಕಾರ ಇದ್ದಾಗ ಈ ಯೋಜನೆ ಬಂತು- ಸಿದ್ದರಾಮಯ್ಯ ಒಂದು ಮೇಕೆ ದಾಟುವಷ್ಟು ಮಾತ್ರ ಜಾಗ ಇದೆ ಆ ನದಿ ಹರಿವಿನಲ್ಲಿ. ಹೀಗಾಗಿ ಇದಕ್ಕೆ ಮೇಕೆದಾಟು ಅಂತಾ ಹೆಸರು ಬಂತು. ಈ ಹಿಂದೆ 1968ರಲ್ಲೇ ಕಾಂಗ್ರೆಸ್ ಸರ್ಕಾರ ಇದ್ದಾಗ ಈ ಯೋಜನೆ ಬಂತು. ಆದರೆ ಕೋರ್ಟ್ ಟ್ರಿಬ್ಯನಲ್ ಆದೇಶದ ಕಾರಣ ಜಾರೊಗೊಳಿಸಲು ಆಗಲಿಲ್ಲ. 2012ರಲ್ಲಿ ನಮ್ಮ ಸರ್ಕಾರ 5912 ಕೋಟಿ ಡಿಪಿಆರ್ ರೆಡಿ ಮಾಡಿ ಕೇಂದ್ರಕ್ಕೆ ಕಳಿಸಿದ್ವಿ. ಬಳಿಕ ಡಿ ಕೆ ಶಿವಕುಮಾರ್ ನೀರಾವರಿ ಸಚಿವರಾದಾಗ 9 ಸಾವಿರ ಕೋಟಿಯ ವಿಸ್ತ್ರತ ಯೋಜನೆ ರೂಪಿಸಿ ಕಳುಹಿಸಿದ್ದರು. ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರು ಸಿಗಲಿದೆ. ಸಮುದ್ರಕ್ಕೆ ಸೇರುವ 66 ಟಿಎಂಸಿ ಪ್ರಮಾಣದಷ್ಟು ನೀರನ್ನು, ಮೇಕೆದಾಟು ಜಲಾಶಯ ನಿರ್ಮಾಣ ಮಾಡಿದರೆ ಸಂಗ್ರಹಿಸಿಡಬಹುದು. ಬಳಿಕ 440 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು. ಬೆಂಗಳೂರಿನಲ್ಲಿ ಶೇಕಡಾ 30 ರಷ್ಟು ಮಂದಿಗೆ ನೀರು ಸರಬರಾಜು ಪೂರ್ಣ ಪ್ರಮಾಣದಲ್ಲಿ ಇಲ್ಲ. ಅದೇ ಈ ಯೋಜನೆ ಜಾರಿಯಾದರೆ ಬೆಂಗಳೂರು, ದೊಡ್ಡಬಳ್ಳಾಪುರ, ಕೋಲಾರಕ್ಕೆ ನೀರು ನೀಡಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿ ಸುದ್ದಿಗೊಷ್ಠಿಯಲ್ಲಿ ತಿಳಿಸಿದರು.

Ex Cm Siddaramaiah, DKS Press meet | ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಸುದ್ದಿಗೋಷ್ಠಿ | Tv9Kannada

Published On - 11:54 am, Tue, 21 December 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ