ಬೆಳಗಾವಿ ಅ.21: ಚಳಿಗಾಲದ ಅಧಿವೇಶನಕ್ಕೆ (Winter Session) ದಿನಾಂಕ ನಿಗದಿಯಾಗಿದೆ. ಬೆಳಗಾವಿಯ (Belagavi) ಸುವರ್ಣ ಸೌಧದಲ್ಲಿ (Suvarna Soudha) ಡಿಸೆಂಬರ್ 4ರಿಂದ 15ರವರೆಗೆ ಅಧಿವೇಶ ನಡೆಯಲಿದೆ. ಈಗಾಗಲೇ ಜಿಲ್ಲಾಡಳಿತಕ್ಕೆ ತಯಾರಿ ಮಾಡಲು ಸೂಚನೆ ನೀಡಿದ್ದೇವೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಬಾರಿ ಅಧಿವೇಶನ ಅದ್ಧೂರಿಯಾಗಿ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ 4 ರಿಂದ 15ರವರಗೆ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಈ ಹಿಂದೆ ನವೆಂಬರ್ ಕೊನೇ ವಾರದಲ್ಲಿ ಅಧಿವೇಶನ ಆರಂಭವಿಸಿ, ಬೆಂಗಳೂರಲ್ಲಿ 10 ದಿನ ಹಾಗೂ ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನ ಕಲಾಪ ನಡೆಸುವ ಬಗ್ಗೆ ಚಿಂತನೆ ಇತ್ತು.
ಇದನ್ನೂ ಓದಿ: 2023-24ನೇ ಸಾಲಿನ ಬಜೆಟ್ ಅಧಿವೇಶನಕ್ಕೆ ಖರ್ಚಾಗಿದ್ದು ಬರೊಬ್ಬರಿ 95 ಲಕ್ಷ ರೂ. !
ಆದರೆ ಪೂರ್ಣ ಪ್ರಮಾಣದಲ್ಲಿ ಬೆಳಗಾವಿಯಲ್ಲೇ ಚಳಿಗಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ನವೆಂಬರ್ ನಲ್ಲಿ ದೀಪಾವಳಿ ರಜೆ, ಕನಕ ಜಯಂತಿ ಇರುವುದರಿಂದ ಅಧಿವೇಶನ ನಡೆಸಲು 10 ದಿನಗಳು ಸಿಗಲ್ಲ. ಈ ಎಲ್ಲಾ ಕಾರಣಗಳಿಂದ ಡಿಸೆಂಬರ್ 4 ರಿಂದ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿನಿಕ್
Published On - 12:49 pm, Sat, 21 October 23