ಅಥಣಿ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಬರ್ಬರ ಹತ್ಯೆ

ಕಲಬುರಗಿ ಸಂಸದ ಉಮೇಶ್ ಜಾದವ್ ಆಪ್ತ ಗಿರೀಶ್ ಚಕ್ರ ಕೊಲೆ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ಅಂಥದ್ದೇ ಘಟನೆಯೊಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೃತರು ಖೀಳೆಗಾಂವ್ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು.

ಅಥಣಿ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಬರ್ಬರ ಹತ್ಯೆ
ಘಟನಾ ಸ್ಥಳದಲ್ಲಿ ಪೊಲೀಸರು ಹಾಗೂ ಸ್ಥಳೀಯರು ಜಮಾಯಿಸಿರುವುದು ಮತ್ತು ಬಲ ಭಾಗದ ಚಿತ್ರದಲ್ಲಿ ಅಣ್ಣಪ್ಪ ಬಸಪ್ಪ ನಿಂಬಾಳ
Follow us
Sahadev Mane
| Updated By: Ganapathi Sharma

Updated on:Apr 04, 2024 | 9:04 AM

ಬೆಳಗಾವಿ, ಏಪ್ರಿಲ್ 4: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (Laxman Savadi) ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) (Annappa Basappa Nimbala) ಎಂಬವರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಅಣ್ಣಪ್ಪ ಬಸಪ್ಪ ನಿಂಬಾಳರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಣ್ಣಪ್ಪ ಖೀಳೆಗಾಂವ್ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಘಟನೆ ನಡೆದಿದೆ.

ಕೊಲೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಮಾರು ಆರರಿಂದ ಏಳು ಜನರ ಗುಂಪು ಅಣ್ಣಪ್ಪ ಬಸಪ್ಪ ನಿಂಬಾಳ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದೆ ಎಂಬುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿಂಗಳ ಹಿಂದಷ್ಟೇ ಸಂಸದ ಕಲಬುರಗಿಯ ಬಿಜೆಪಿ ಸಂಸದ ಡಾ. ಉಮೇಶ್​ ಜಾಧವ್ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಎಂಬವರನ್ನು ದುಷ್ಕರ್ಮಿಗಳು ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಕೊಲೆ ಮಾಡಿದ್ದರು. ಇದೀಗ ಅಂಥದ್ದೇ ಘಟನೆ ಮರುಕಳಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ಘೋರ ದುರಂತ:ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 am, Thu, 4 April 24

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ