ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಬೆಳಗಾವಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆಗೆ ಬರುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಗಾವಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಬೆಳಗಾವಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಬೆಳಗಾವಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ Image Credit source: ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Dec 01, 2022 | 12:46 PM

ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ದಶಕಗಳ ಗಡಿ ವಿವಾದ (Karnataka-Maharashtra border dispute)ದ ಕೇಂದ್ರಬಿಂದುವಾಗಿರುವ ಬೆಳಗಾವಿ ಜಿಲ್ಲೆಯಾದ್ಯಂತ ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣವು ಸುಪ್ರೀಂ ಕೋರ್ಟ್‌ (Supreme Court)ನಲ್ಲಿ ವಿಚಾರಣೆಗೆ ಬರುತ್ತಿರುವ ಹಿನ್ನೆಲೆ ಪೊಲೀಸರು ಬಿಗಿ ಭದ್ರತೆ (Police Security)ಯನ್ನು ಕೈಗೊಂಡಿದ್ದಾರೆ. ನಗರ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ 21 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸುವುದರ ಜೊತೆಗೆ ಹೆಚ್ಚುವರಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವಾರ ನಡೆದ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ನಾವು ನಿರ್ಧರಿಸಿದ್ದೇವೆ” ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಗಡಿ ವಿವಾದದ ಬಗ್ಗೆ ಎರಡೂ ರಾಜ್ಯಗಳಲ್ಲಿ ಬಸ್ಸುಗಳು ಮತ್ತು ವಾಹನಗಳಿಗೆ ಹಾನಿ ಮಾಡುವುದು ಅಥವಾ ಮಸಿ ಬಳಿಯುವಂತಹ ಕೆಲವು ಘಟನೆಗಳು ನಡೆಯುತ್ತಲೇ ಇವೆ.

ಇದನ್ನೂ ಓದಿ: ಚಿತ್ರದುರ್ಗ: ಮುರುಘಾ ಮಠದಲ್ಲಿದ್ದ 22 ಮಕ್ಕಳು ನಾಪತ್ತೆ, ಈ ಮಕ್ಕಳು ಮಠದ ಪಾಲಾಗಿದ್ದು ಹೇಗೆಂಬುದೇ ಪ್ರಶ್ನೆ

ಗಡಿ ಭಾಗದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ಪೊಲೀಸರು ಮಂಗಳವಾರ ನಿಪ್ಪಾಣಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಶಾಂತಿ, ಸೌಹಾರ್ದತೆಗೆ ಭಂಗ ತರುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡುವ ಅಂಶಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ಹೊಡೆದರು, ಠಾಣೆಗೆ ಕರೆದೊಯ್ದ ಡಿಸಿಪಿ ಬೂಟಗಾಲಿಂದ ಒದ್ದರು ಎಂದ ವಿದ್ಯಾರ್ಥಿ

ಮಹಾರಾಷ್ಟ್ರದ ಯಾವುದೇ ನಾಯಕರ ಖಾಸಗಿ ಭೇಟಿಗಳನ್ನು ರಾಜ್ಯ ಪೊಲೀಸರು ತಡೆಯುವುದಿಲ್ಲ, ಆದರೆ ಶಾಂತಿ ಕದಡುವ ಯಾವುದೇ ಪ್ರಯತ್ನಗಳಿದ್ದರೆ ಕ್ರಮ ಕೈಗೊಳ್ಳುತ್ತಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನ್ಯಾಯಾಲಯದ ಮೊಕದ್ದಮೆ, ಮಹಾರಾಷ್ಟ್ರ ಸಚಿವರ ಸಂಭವನೀಯ ಭೇಟಿ ಮತ್ತು ಡಿಸೆಂಬರ್ 19 ರಿಂದ ಬೆಳಗಾವಿಯಲ್ಲಿ ಮುಂಬರುವ ವಿಧಾನಸಭೆ ಅಧಿವೇಶನದ ಹಿನ್ನೆಲೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Thu, 1 December 22

ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ಮಂಜಣ್ಣನ ಮಟನ್ ಪ್ರೀತಿಗೆ ಮನೆಯವರಿಂದ ವಿರೋಧ
ಮಂಜಣ್ಣನ ಮಟನ್ ಪ್ರೀತಿಗೆ ಮನೆಯವರಿಂದ ವಿರೋಧ
ಒಬ್ಬ ಭಯೋತ್ಪಾದಕನ ಹಾಗೆ ರವಿಯವರನ್ನು ನಡೆಸಿಕೊಂಡಿದ್ದಾರೆ: ವಿಜಯೇಂದ್ರ
ಒಬ್ಬ ಭಯೋತ್ಪಾದಕನ ಹಾಗೆ ರವಿಯವರನ್ನು ನಡೆಸಿಕೊಂಡಿದ್ದಾರೆ: ವಿಜಯೇಂದ್ರ
ಬಿಡುಗಡೆ ಬಳಿಕ ಸಿಟಿ ರವಿ ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಡುಗಡೆ ಬಳಿಕ ಸಿಟಿ ರವಿ ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ
ಮೀರತ್‌ನಲ್ಲಿ ಪ್ರದೀಪ್ ಮಿಶ್ರಾ ಕಥಾ ಕಾರ್ಯಕ್ರಮದಲ್ಲಿ ಕಾಲ್ತುಳಿತ
ಮೀರತ್‌ನಲ್ಲಿ ಪ್ರದೀಪ್ ಮಿಶ್ರಾ ಕಥಾ ಕಾರ್ಯಕ್ರಮದಲ್ಲಿ ಕಾಲ್ತುಳಿತ
ರವಿಯವರ ಚಿಕ್ಕಮಗಳೂರು ಮನೆಬಳಿ ಕಾರ್ಯಕರ್ತರ ಸಂಭ್ರಮಾಚರಣೆ 
ರವಿಯವರ ಚಿಕ್ಕಮಗಳೂರು ಮನೆಬಳಿ ಕಾರ್ಯಕರ್ತರ ಸಂಭ್ರಮಾಚರಣೆ 
ಪಾಯಿಂಟ್ ಬ್ಲ್ಯಾಂಕ್ ರೇಂಜಲ್ಲಿ ಶೂಟ್ ಮಾಡುವಂತೆ ಹೇಳಿದ್ದು ನಿಜ: ಪ್ರಸಾದ್
ಪಾಯಿಂಟ್ ಬ್ಲ್ಯಾಂಕ್ ರೇಂಜಲ್ಲಿ ಶೂಟ್ ಮಾಡುವಂತೆ ಹೇಳಿದ್ದು ನಿಜ: ಪ್ರಸಾದ್
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಟಿ ರವಿ ಪ್ರಕರಣ ವಿಚಾರಣೆ ಆರಂಭ
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಟಿ ರವಿ ಪ್ರಕರಣ ವಿಚಾರಣೆ ಆರಂಭ
ಬಸ್​ನೊಳಗೆ ಕಿರುಕುಳ ನೀಡಿದ ಕುಡುಕನಿಗೆ 26 ಬಾರಿ ಕೆನ್ನೆಗೆ ಬಾರಿಸಿದ ಮಹಿಳೆ
ಬಸ್​ನೊಳಗೆ ಕಿರುಕುಳ ನೀಡಿದ ಕುಡುಕನಿಗೆ 26 ಬಾರಿ ಕೆನ್ನೆಗೆ ಬಾರಿಸಿದ ಮಹಿಳೆ
ರವಿ ಮನೆಯಲ್ಲಿ ಪ್ರಾಣೇಶ್ ಜೊತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು
ರವಿ ಮನೆಯಲ್ಲಿ ಪ್ರಾಣೇಶ್ ಜೊತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು