ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರ; ಭಾಷಾ ವೈಷಮ್ಯದ ಕಿಡಿ ಹೊತ್ತಿಸಲು ಕುತಂತ್ರ

ಮುಂಬೈನಲ್ಲಿ MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಸಭೆ ನಡೆಸಿದ್ದಾರೆ. ಮಹಾರಾಷ್ಟ್ರದ ಗಡಿ ಭಾಗದ 865 ಹಳ್ಳಿಗಳ ಮರಾಠಿ ಭಾಷಿಕರಿಗೆ ಆರೋಗ್ಯ ವಿಮೆ ಯೋಜನೆ ವಿಚಾರವಾಗಿ ಚರ್ಚೆ ನಡೆದಿದ್ದು ಗಡಿ ಭಾಗದಲ್ಲಿ ಭಾಷಾ ವೈಷಮ್ಯದ ಕಿಡಿ ಹೊತ್ತಿಸಲು ಎಂಇಎಸ್, ಮಹಾರಾಷ್ಟ್ರ ಸರ್ಕಾರ ಕುತಂತ್ರ ಮಾಡುತ್ತಿದೆ.

ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರ; ಭಾಷಾ ವೈಷಮ್ಯದ ಕಿಡಿ ಹೊತ್ತಿಸಲು ಕುತಂತ್ರ
MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಸಭೆ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಆಯೇಷಾ ಬಾನು

Updated on:Oct 12, 2023 | 11:02 AM

ಚಿಕ್ಕೋಡಿ, ಅ.12: ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮತ್ತೆ ಕ್ಯಾತೆ ತೆಗೆದಿದೆ (Karnataka Maharashtra Border Issue). ನಾಡದ್ರೋಹಿ MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ವಿವಾದ ತಜ್ಞರ ಸಮಿತಿ ಸಭೆ ನಡೆದಿದೆ. ನಿನ್ನೆ (ಅ.11) ಮುಂಬೈನಲ್ಲಿ MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ (DhairyaSheel Mane) ಸಭೆ ನಡೆಸಿದ್ದಾರೆ. ಮಹಾರಾಷ್ಟ್ರದ ಗಡಿ ಭಾಗದ 865 ಹಳ್ಳಿಗಳ ಮರಾಠಿ ಭಾಷಿಕರಿಗೆ ಆರೋಗ್ಯ ವಿಮೆ ಯೋಜನೆ ವಿಚಾರವಾಗಿ ಚರ್ಚೆ ನಡೆದಿದ್ದು ಗಡಿ ಭಾಗದಲ್ಲಿ ಭಾಷಾ ವೈಷಮ್ಯದ ಕಿಡಿ ಹೊತ್ತಿಸಲು ಎಂಇಎಸ್, ಮಹಾರಾಷ್ಟ್ರ ಸರ್ಕಾರ ಕುತಂತ್ರ ಮಾಡುತ್ತಿದೆ.

ಗಡಿ ಭಾಗದ 865 ಹಳ್ಳಿಗಳ ಮರಾಠಿ ಭಾಷಿಕರಿಗೆ ಆರೋಗ್ಯ ವಿಮೆ ಯೋಜನೆ ಲಾಭ ಪಡೆಯಲು ನಾಡದ್ರೋಹಿ MES ಕಚೇರಿಯ ಪತ್ರ ಅವಶ್ಯಕ. ಯೋಜನೆಯ ಲಾಭ ಪಡೆಯಲು ಮರಾಠಿ ಭಾಷಿಕ ಎಂದು ನಮೂದಿಸಬೇಕು. ಗಡಿ ಪ್ರದೇಶದ ಮರಾಠಿ ಭಾಷಿಕರಿಗಾಗಿ ಗಡಿಭಾಗದಲ್ಲಿ ಪ್ರತ್ಯೇಕ ಕಚೇರಿ ಸ್ಥಾಪನೆಗೂ ನಿರ್ಧಾರ ಮಾಡಲಾಗಿದೆ. ಪ್ರಾದೇಶಿಕ ಆಯುಕ್ತ ಶ್ರೇಣಿಯ ಅಧಿಕಾರಿ ನೇಮಿಸಿ ಕಚೇರಿ ಸ್ಥಾಪನೆಗೆ ನಿರ್ಧರಿಸಲಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಚಂದಗಡ್‌ನಲ್ಲಿ ಕಚೇರಿ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ. ಈ ಮೂಲಕ ಗಡಿ ಭಾಗದಲ್ಲಿ ಭಾಷಾ ವೈಷಮ್ಯದ ಕಿಡಿ ಹೊತ್ತಿಸಲು ಎಂಇಎಸ್, ಮಹಾರಾಷ್ಟ್ರ ಸರ್ಕಾರ ಕುತಂತ್ರ ಮಾಡುತ್ತಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಬಳಿಕ ಗೋವಾ ರಾಜ್ಯದಿಂದ ಗಡಿ ಕ್ಯಾತೆ; ಕಾರವಾರದಲ್ಲಿ ಕೊಂಕಣಿ ಭಾಷೆಗೆ ಆದ್ಯತೆ ಕೊಡಬೇಕೆಂದು ಪ್ರಧಾನಿಗೆ ಪತ್ರ

ಕರ್ನಾಟಕದ 865 ಹಳ್ಳಿಗಳ ಮರಾಠಿ ಭಾಷಿಕರಿಗಾಗಿ ಮಹಾತ್ಮ ಪುಲೆ ಜನಾರೋಗ್ಯ ಯೋಜನೆಯಡಿ ಐದು ಲಕ್ಷ ರೂ‌.ವರೆಗೆ ಆರೋಗ್ಯ ವಿಮೆ ನೀಡಲಾಗುತ್ತಿದೆ. ಮಹಾರಾಷ್ಟ್ರ ಅಷ್ಟೇ ಅಲ್ಲ ಕರ್ನಾಟಕದ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಸೌಲಭ್ಯ ಈ ಯೋಜನೆಯಡಿ ಸಿಗಲಿದೆ. ಯೋಜನೆ ಲಾಭಕ್ಕಾಗಿ ತಾವು ಮರಾಠಿ ಭಾಷಿಕರು ಅಂತಾ ಪ್ರಮಾಣ ಪತ್ರ ನೀಡುವುದು ಅತ್ಯಗತ್ಯ. ಈ ಪ್ರಮಾಣ ಪತ್ರ ಬಳಸಿ 865 ಹಳ್ಳಿಗಳಲ್ಲಿ ಅತಿಹೆಚ್ಚು ಮರಾಠಿ ಭಾಷಿಕರಿದ್ದಾರೆಂದು ಬಿಂಬಿಸಲು ಮಹಾರಾಷ್ಟ್ರ ಪ್ಲ್ಯಾನ್ ಮಾಡಿದೆ. ಇದೇ ದಾಖಲೆಯನ್ನು ಸುಪ್ರೀಂ ಕೋರ್ಟ್​ಗೆ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ಕುತಂತ್ರ ಮಾಡುತ್ತಿದೆ.

ಕರ್ನಾಟಕ ಸರ್ಕಾರದ ನಡೆಗೆ ಸಂಘಟನೆಗಳ ಆಕ್ರೋಶ

ಕರ್ನಾಟಕದ 865 ಹಳ್ಳಿಗಳಲ್ಲಿ ಮರಾಠಿ ಭಾಷಿಕರಿದ್ದಾರೆಂದು ಸುಪ್ರೀಂಕೋರ್ಟ್‌ಗೆ ದಾಖಲೆ ಸಲ್ಲಿಸಲು ಮಹಾರಾಷ್ಟ್ರ ಕುತಂತ್ರ ಮಾಡುತ್ತಿದೆ. ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಸರ್ಕಾರ ಸಭೆ ಮೇಲೆ ಸಭೆ ಮಾಡುತ್ತಿದ್ದರೂ ಕರ್ನಾಟಕ ಸರ್ಕಾರ ಮೌನವಾಗಿದೆ. ಕರ್ನಾಟಕ ಸರ್ಕಾರದ ನಡೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 9:48 am, Thu, 12 October 23

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ