ಸತೀಶ್ ಜಾರಕಿಹೊಳಿ ಮಗ ರಾಹುಲ್‌ ರಾಜಕೀಯಕ್ಕೆ: ಯುವ ಕಾಂಗ್ರೆಸ್ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

ಒಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಜತೆ ಮುಸುಕಿನ ಗುದ್ದಾಟ ನಡೆಸುತ್ತಿರುವ ಸಚಿವ ಸತೀಶ್ ಜಾರಕಿಹೊಳಿ, ಈಗಾಗಲೇ ಲೋಕಸಭೆ ಚುನಾವಣೆ ಮೂಲಕ ಮಗಳನ್ನು ರಾಜಕೀಯಕ್ಕೆ ಕರೆ ತಂದಿದ್ದಾರೆ. ಇದೀಗ ಮಗ ರಾಹುಲ್ ಜಾರಕಿಹೊಳಿಯನ್ನು ಕೂಡ ರಾಜಕೀಯದ ಅಖಾಡಕ್ಕೆ ಸೆಳೆದಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಸತೀಶ್ ಜಾರಕಿಹೊಳಿ ಮಗ ರಾಹುಲ್‌ ರಾಜಕೀಯಕ್ಕೆ: ಯುವ ಕಾಂಗ್ರೆಸ್ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
ರಾಹುಲ್‌ ಜಾರಕಿಹೊಳಿ
Image Credit source: Facebook
Edited By:

Updated on: Feb 07, 2025 | 11:00 PM

ಬೆಳಗಾವಿ, ಫೆಬ್ರವರಿ 7: ಲೋಕಸಭೆ ಚುನಾವಣೆ ಮೂಲಕ ಮಗಳು ಪ್ರಿಯಾಂಕಾ ಜಾರಕಿಹೊಳಿಯನ್ನು ರಾಜಕೀಯ ಪ್ರವೇಶಿಸುವಂತೆ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಇದೀಗ ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಪುತ್ರ ರಾಹುಲ್‌ ಜಾರಕಿಹೊಳಿ ರಾಜ್ಯ ಯುವ ಕಾಂಗ್ರೆಸ್ ಘಟಕಕ್ಕೆ ಪ್ರಧಾನ ಕಾರ್ಯದರ್ಶಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್‌ ಜಾರಕಿಹೊಳಿ ಆಯ್ಕೆಯಾದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಗೋಕಾಕ್​ನ ಬಸವೇಶ್ವರ ವೃತ್ತದಲ್ಲಿ ಸಂಭ್ರಮಾಚರಣೆ ನಡೆದಿದೆ. ರಾಹುಲ್ ಜಾರಕಿಹೊಳಿ‌ ಬೆಂಬಲಿಗರು ಪಟಾಕಿ ಸಿಡಿಸಿ‌‌ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ, ಸತೀಶ್ ಜಾರಕಿಹೊಳಿ‌, ರಾಹುಲ್ ಜಾರಕಿಹೊಳಿ‌ ಪರ ಘೋಷಣೆ ಮೊಳಗಿದೆ.

ಈ ಬೆಳವಣಿಗೆಯೊಂದಿಗೆ ರಾಹುಲ್ ಜಾರಕಿಹೊಳಿ‌ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದಂತಾಗಿದೆ. ಈಗಾಗಲೇ ಮಗಳನ್ನು ಸಂಸದೆ ಮಾಡಿರುವ ಸತೀಶ್ ಜಾರಕಿಹೊಳಿ‌ ಈಗ ಮಗನ ರಾಜಕೀಯ ಭವಿಷ್ಯ ರೂಪಿಸಲು ಸತೀಶ್ ಮಾಸ್ಟರ್​ಪ್ಲ್ಯಾನ್ ಮಾಡಿದ್ದಾರೆ. ಆರಂಭಿಕವಾಗಿ ಮಗನಿಗೆ ಪಕ್ಷ ಸಂಘಟನೆ ಜವಾಬ್ದಾರಿ ನೀಡುವಂತೆ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಹೆಚ್ಚಾದ ಮುಸುಕಿನ ಗುದ್ದಾಟ: ಕುಂಭ ಮೇಳದಲ್ಲೂ ಪ್ರತಿಧ್ವನಿಸಿತು ‘ಮುಂದಿನ ಸಿಎಂ’ ಕೂಗು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ