Karnataka MLC Election: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 8ನೇ ಬಾರಿಗೆ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು

ಪಶ್ಚಿಮ ಶಿಕ್ಷಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಸವರಾಜ್ ಹೊರಟ್ಟಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. 8ನೇ ಬಾರಿಗೆ ಗೆಲುವು ತನ್ನದಾಗಿಸಿಕೊಂಡ ಬಸವರಾಜ್ ಹೊರಟ್ಟಿ ಅವರ ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

Karnataka MLC Election: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 8ನೇ ಬಾರಿಗೆ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು
ಬಸವರಾಜ ಹೊರಟ್ಟಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 15, 2022 | 12:56 PM

ಬೆಳಗಾವಿ: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ 8ನೇ ಬಾರಿಗೆ ಬಸವರಾಜ ಹೊರಟ್ಟಿ (Basavaraj Horatti) ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಗೆದ್ದು ಬೀಗಿದ ಬಸವರಾಜ ಹೊರಟ್ಟಿ ಗೆಲುವಿನ ನಗು ಬೀರಿದ್ದಾರೆ. ಬಸವರಾಜ ಹೊರಟ್ಟಿಯ ದಿಗ್ವಿಜಯದಿಂದ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಬಸವರಾಜ್ ಗುರಿಕಾರ, ಜೆಡಿಎಸ್‌ ಪಕ್ಷದ ಅಭ್ಯರ್ಥಿ ಶ್ರೀಶೈಲ ಗಿಡದಿನ್ನಿಗೆ ಮುಖಭಂಗವಾಗಿದೆ.

ಪಶ್ಚಿಮ ಶಿಕ್ಷಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಸವರಾಜ್ ಹೊರಟ್ಟಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. 8ನೇ ಬಾರಿಗೆ ಗೆಲುವು ತನ್ನದಾಗಿಸಿಕೊಂಡ ಬಸವರಾಜ್ ಹೊರಟ್ಟಿ ಅವರ ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಬಸವರಾಜ ಹೊರಟ್ಟಿ ಗೆದ್ದ ಹಿನ್ನೆಲೆಯಲ್ಲಿ ಬಸವರಾಜ್ ಹೊರಟ್ಟಿ ಅಭಿಮಾನಿಗಳಿಂದ ಬೆಳಗಾವಿಯಲ್ಲಿ ವಿಜಯೋತ್ಸವ ನಡೆಸಲಾಗುತ್ತಿದೆ. ಮತ ಎಣಿಕೆ ಕೇಂದ್ರದ ಹೊರಗಡೆ ವಿಜಯೋತ್ಸವ ನಡೆಯುತ್ತಿದೆ. ಬಸವರಾಜ ಹೊರಟ್ಟಿ ಅವರ ಭಾವಚಿತ್ರ ಹಿಡಿದು, ಅವರ ಪರ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ
Image
ಬೆಳಗಾವಿ ಮತಗಟ್ಟೆ ಪೆಟ್ಟಿಗೆಯಲ್ಲಿ ಹೆಚ್ಚುವರಿ 5 ಮತ ಪತ್ರ ಪತ್ತೆ! ಕೌಂಟಿಂಗ್​ಗೆ ತಡೆಯೊಡ್ಡುವ ಬೆದರಿಕೆ ಹಾಕಿದ ಪಕ್ಷೇತರ ಅಭ್ಯರ್ಥಿ
Image
ಮಾತಿನ ಭರದಲ್ಲಿ ‘ಯಾವನ್ರೀ ಅವನು ಡಿಸಿ?’ ಅಂದುಬಿಟ್ಟರು ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ
Image
ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಮತ್ತು ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರ ಲಾಂಛನ ಬಳಸಿದ ಹಿನ್ನಲೆ ಬಸವರಾಜ ಹೊರಟ್ಟಿ ವಿರುದ್ಧ ನೋಟಿಸ್​ ಜಾರಿ
Image
ಟಿಕೆಟ್​ಗಾಗಿ ಹೊರಟ್ಟಿ ಮತ್ತು ಲಿಂಬಿಕಾಯಿ ನಡುವೆ ಪೈಪೋಟಿ |ಯಾರಿಗೆ ಒಲಿಯಲಿದೆ ಹುಬ್ಬಳ್ಳಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಟಿಕೆಟ್

ಇದನ್ನೂ ಓದಿ: ಇಂದು ಪರಿಷತ್​ನ 4 ಕ್ಷೇತ್ರಗಳ ಚುನಾವಣಾ ಫಲಿತಾಂಶ: 3 ಪಕ್ಷಗಳ 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ವಾಯುವ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 1400 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ವಾಯವ್ಯ ಪದವೀಧರ ಮತಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ ಗೊಂದಲ ಮುಂದುವರಿದಿದೆ. ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಮತಪೆಟ್ಟಿಗೆಯಲ್ಲಿ ಹೆಚ್ಚುವರಿ 5 ಮತ ಪತ್ರ ಪತ್ತೆಯಾಗಿದ್ದು, ಗೊಂದಲ ಸೃಷ್ಟಿಯಾಗಿದೆ. ಇಳಕಲ್ ಪಟ್ಟಣದ ಮತಗಟ್ಟೆ 101(ಎ) ಪೆಟ್ಟಿಗೆಯಲ್ಲಿ 171 ಮತ ಇರಬೇಕಿತ್ತು. ಆದರೆ 5 ಮತ ಪತ್ರ ಹೆಚ್ಚಿದೆ. ಹೆಚ್ಚುವರಿ 5 ಮತ ಪತ್ರ ಬಂದಿದ್ದಕ್ಕೆ ಪಕ್ಷೇತರ ಅಭ್ಯರ್ಥಿ ಎನ್​ಬಿ ಬನ್ನೂರು ಆಕ್ರೋಶ ವ್ಯಕ್ತಪಡಿಸಿದ್ದು, ಗೊಂದಲ ನಿವಾರಿಸದಿದ್ದರೆ ಕೌಂಟಿಂಗ್​ಗೆ ನಾವು ತಡೆ ಒಡ್ಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Wed, 15 June 22

ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು