AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ, ಮೂರು ವರ್ಷದ ಮಗು ಹತ್ಯೆ

ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಎರಡು ಕುಟುಂಬಗಳ ಗಲಾಟೆ ನಡುವೆ ಮೂರು ವರ್ಷದ ಮಗುವನ್ನ ಹತ್ಯೆ ಮಾಡಿದ ಧಾರುಣ ಘಟನೆ ನಡೆದಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ, ಮೂರು ವರ್ಷದ ಮಗು ಹತ್ಯೆ
ಮೃತ ಬಾಲಕಿ
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 27, 2024 | 7:07 PM

Share

ಬೆಳಗಾವಿ, ಏ.27: ಎರಡು ಕುಟುಂಬಗಳ ಗಲಾಟೆ ನಡುವೆ ಮೂರು ವರ್ಷದ ಮಗುವನ್ನ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ. ಎದೆ ಮೇಲೆ‌ ಕಾಲಿಟ್ಟು ಬಾಲಕಿ ಶ್ರೀನಿಧಿ ಕಾಳಾಪಾಟೀಲ್(3) ಅವರನ್ನು ಹತ್ಯೆಗೈಯಲಾಗಿದೆ. ಹಣಕಾಸಿನ ವಿಚಾರಕ್ಕೆ ನಡೆದ ಜಗಳದ ವೇಳೆ ಜ್ಯೋತಿಬಾ ಬಾಬರ್‌ ಎಂಬಾತ ಮಗುವಿನ ಮೇಲೆ ಕಾಲಿಟ್ಟು ಕೊಂದಿದ್ದಾನೆ. ಈ ಕುರಿತು ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಬಸ್ ನಿರ್ವಾಹಕನ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು ದಾಖಲು

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರಿನಲ್ಲಿ ಕರ್ತವ್ಯ ನಿರತ ಸಾರಿಗೆ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆದಿದ್ದು, ಮೂವರ ವಿರುದ್ದ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಕಲಘಟಗಿ ಘಟಕಕ್ಕೆ ಸೇರಿದ ಬಸ್ ನಿರ್ವಾಹಕ ಸಂಗಪ್ಪ ಅವರ ಮೇಲೆ ಹಲ್ಲೆ ಮಾಡಲಾಗಿದೆ.

ಇದನ್ನೂ ಓದಿ:ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿದ ತಾಯಿ, ಉಡುಪಿಯಲ್ಲಿ ಮಹಿಳಾ ಪೇದೆ ಆತ್ಮಹತ್ಯೆ

ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ಇದಾಗಿದ್ದು, ಬಸ್ಸಿನಲ್ಲಿ ಜಾಗ ಇಲ್ಲದ್ದರಿಂದ “ಬಸ್ಸಿನಲ್ಲಿ ಜಾಗ ಇಲ್ಲ, ಇನ್ನೊಂದು ಬಸ್ಸಿನಲ್ಲಿ ಬನ್ನಿ” ಎಂದಿದ್ದಾರೆ. ಆಗ ಅವರಲ್ಲಿದ್ದ ಮೂರು ಜನರು ನಿರ್ವಾಹಕರಿಗೆ “ಬಸ್ಸು ಏನು ನಿಮ್ಮ ಅಪ್ಪಂದಾ..? ಎಂದು ಹಲ್ಲೆ ಮಾಡಿದ್ದಾರೆ. ಇನ್ನು ಹಲ್ಲೆಯಿಂದ ಗಾಯಗೊಂಡಿರುವ ನಿರ್ವಾಹಕ ಸಂಗಪ್ಪನಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ನವಲಗುಂದ ಪೊಲೀಸ್ ಠಾಣೆಯಲ್ಲಿ‌ ಮೂವರ ಮೇಲೆ ದೂರು ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Sat, 27 April 24

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ