AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ತೀರದಲ್ಲಿ ನೀರಿಗಾಗಿ ಹಾಹಾಕಾರ; ಜೀವವನ್ನೂ ಲೆಕ್ಕಿಸದೇ ಮೆಟ್ಟಲಿಲ್ಲದ ಬಾವಿಗಳಿದು ನೀರು ತುಂಬುತ್ತಿರೋ ಮಹಿಳೆಯರು

ಕೃಷ್ಣಾ ನದಿ ತೀರದಲ್ಲಿ ಭೀಕರ ಬರ ಎದುರಾಗಿದೆ. ಕುಡಿಯುವ ನೀರಿಗಾಗಿ ಜನ ಪರಿತಪ್ಪಿಸುತ್ತಿದ್ದು, ಕಿಮೀ ಗಟ್ಟಲೆ ನಡೆದುಕೊಂಡು ಹೋಗಿ ನೀರು ತರುವ ಸ್ಥಿತಿ ಇದೆ. ಅದರಲ್ಲೂ ತೋಟದ ಮನೆಗಳಲ್ಲಿ ಹನಿ ನೀರಿಗೂ ಹಾಹಾಕಾರ ಶುರುವಾಗಿದ್ದು, ಬಾವಿ ನೀರಿನ ಮೇಲೆ ಅವಲಂಬನೆಯಾಗಿದ್ದಾರೆ. ಗ್ರಾಮದ ಮಹಿಳೆಯರು ಜೀವ ಲೆಕ್ಕಿಸದೇ ಬಾವಿಗಿಳಿದು ನೀರು ತರುವ ದೃಶ್ಯ ಎದೆ ಝಲ್ ಅನಿಸುತ್ತದೆ. ಅಷ್ಟಕ್ಕೂ ಹೇಗಿದೆ ಕೃಷ್ಣಾ ನದಿ ತಟದ ಗ್ರಾಮಗಳಲ್ಲಿ ನೀರಿಗಾಗಿ ಜನರ ಸ್ಥಿತಿ ಅಂತೀರಾ? ಈ ಸ್ಟೋರಿ ಓದಿ.

ಕೃಷ್ಣಾ ತೀರದಲ್ಲಿ ನೀರಿಗಾಗಿ ಹಾಹಾಕಾರ; ಜೀವವನ್ನೂ ಲೆಕ್ಕಿಸದೇ ಮೆಟ್ಟಲಿಲ್ಲದ ಬಾವಿಗಳಿದು ನೀರು ತುಂಬುತ್ತಿರೋ ಮಹಿಳೆಯರು
ಅಥಣಿ ತಾಲೂಕಿನಲ್ಲಿ ನೀರಿಗಾಗಿ ಹಾಹಾಕಾರ
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 16, 2024 | 7:07 PM

Share

ಬೆಳಗಾವಿ, ಏ.16: ಜಿಲ್ಲೆಯ ಅಥಣಿ(Athani)ತಾಲೂಕಿನ ಅರಟಾಳ್ ಗ್ರಾಮದ ಮಹಾಲಿಂಗರಾಯ ತೋಟದ ಕಾಲೋನಿಯಲ್ಲಿ ಸುಮಾರು ಮುನ್ನೂರಕ್ಕೂ ಅಧಿಕ ಮನೆಗಳಿದ್ದು, ಇದೀಗ ಹನಿ ನೀರಿಗೂ ಆ ಎಲ್ಲ ಕುಟುಂಬಗಳು ಪರಿತಪ್ಪಿಸುತ್ತಿವೆ. ಗಂಡಸರೆಲ್ಲರೂ ಕೆಲಸಕ್ಕೆ ಹೋದರೆ, ಮನೆಯಲ್ಲಿರುವ ಮಹಿಳೆಯರು ಇಡೀ ದಿನ ನೀರು ತುಂಬುವ ಕೆಲಸ ಮಾಡಬೇಕು. ಹೌದು, ಎರಡ್ಮೂರು ಕಿಮೀ ನಡೆದುಕೊಂಡು ಹೋಗಿ, ಜೀವವನ್ನ ಲೆಕ್ಕಿಸದೇ ಇಪ್ಪತ್ತು ಅಡಿ ಮೆಟ್ಟಿಲಿಲ್ಲದ ಬಾವಿಗೆ ಇಳಿದು ನೀರು ತುಂಬಿಕೊಂಡು ಬರಬೇಕು.

ಇನ್ನು ಜೀವ ಜಲಕ್ಕಾಗಿ ನಿತ್ಯವೂ ಈ ಗ್ರಾಮದ ಜನರು ಪರಿತಪ್ಪಿಸುತ್ತಿದ್ದಾರೆ. ಸಾಕಷ್ಟು ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಊರ ಪಕ್ಕದ ಕೆರೆ ತುಂಬಿಸುವಂತೆ ಮನವಿ ಮಾಡಿದರೂ ಪ್ರಯೋಜನ ಆಗುತ್ತಿಲ್ಲ. ಈ ಗ್ರಾಮದಿಂದ ಹತ್ತು ಕಿಮೀ ದೂರದಲ್ಲಿ ಕೃಷ್ಣಾ ನದಿ ಇದ್ದು, ಅಲ್ಲಿಂದ ನೀರು ತಂದು ತುಂಬಿಸುವ ಕೆಲಸ ಮಾಡುತ್ತಿಲ್ಲ. ಇದರಿಂದ ಬೆಸಿಗೆ ಬಂದರೆ ಸಾಕು ಮಹಿಳೆಯರು ನೀರು ತರುವುದನ್ನೇ ಕೆಲಸ ಮಾಡಿಕೊಳ್ಳುತ್ತಾರೆ. ಸ್ವಲ್ಪ ಯಾಮಾರಿದರೂ ಜೀವ ಹೋಗುವ ಸ್ಥಿತಿ ಇದ್ದರೂ,  ಅನಿವಾರ್ಯವಾಗಿ ಬಾವಿಗಿಳಿದು ನೀರು ತುಂಬುತ್ತಾರೆ. ಈ ಕುರಿತ ಅಧಿಕಾರಿಗಳಿಗೆ ಹೇಳಿ ಸುಸ್ತಾಗಿರುವ ಗ್ರಾಮಸ್ಥರು, ನೀರು ಸಿಗದಿದ್ದಕ್ಕೆ ಊರು ಬಿಟ್ಟು ಹೋಗುವ ಸ್ಥಿತಿ ಇದೆ, ಕಡೆ ಪಕ್ಷ ಟ್ಯಾಂಕರ್ ನೀರಿನ ವ್ಯವಸ್ಥೆ ಆದರೂ ಮಾಡಿಸಿ ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಅನುದಾನ ಬಿಡುಗಡೆ ಮಾಡದ ಕಾಂಗ್ರೆಸ್ ಸರ್ಕಾರ; ಯಾದಗಿರಿ ನಗರದಲ್ಲಿ ನೀರಿಗಾಗಿ ಹಾಹಾಕಾರ

ಸದ್ಯ ದಿನೇ ದಿನೇ ಬಿಸಿಲಿನ ಬೇಗೆ ಹೆಚ್ಚುತ್ತಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿದೆ. ಬೋರ್​ವೆಲ್​ಗಳು ಬತ್ತುತ್ತಿವೆ. ಇತ್ತ ಕೆರೆಯಲ್ಲಿ ನೀರು ಖಾಲಿಯಾಗಿ ಜನ ಊರು ಬಿಡುವ ಸ್ಥಿತಿ ಕೂಡ ನಿರ್ಮಾಣವಾಗಿದೆ. ಚುನಾವಣೆಯಲ್ಲಿ ಬಿಜಿ ಇರುವ ಅಧಿಕಾರಿಗಳು ಜನರ ನೀರಿನ ಸಮಸ್ಯೆಯನ್ನ ಬಗೆ ಹರಿಸುವ ಕೆಲಸ ಮಾಡಲಿ. ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್ ನೀರು ಕೊಡಿ ಎಂದು ಜಿಲ್ಲಾಧಿಕಾರಿ ಹೇಳಿದರೂ ಅಧಿಕಾರಿಗಳು ಮಾತ್ರ ಡೋಂಟ್ ಕೆರ್ ಅಂತಿದ್ದು, ಇನ್ನಾದರೂ ಈ ಗ್ರಾಮದ ಜನರಿಗೆ ನೀರು ಕೊಡಲಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು