DK Shivakumar: ಕಾಂಗ್ರೆಸ್ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ? ನಾಳೆ ಸಿಗಲಿದೆ ಉತ್ತರ

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ​​ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಚಾರವಾಗಿ ಶುಕ್ರವಾರ ಮಾಹಿತಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ‘ಟಿವಿ9’ಗೆ ಮಾಹಿತಿ ನೀಡಿದರು.

Follow us
Ganapathi Sharma
|

Updated on:Mar 16, 2023 | 7:07 PM

ಬೆಳಗಾವಿ: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ​​ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಚಾರವಾಗಿ ಶುಕ್ರವಾರ ಮಾಹಿತಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬೆಳಗಾವಿಯಲ್ಲಿ ‘ಟಿವಿ9’ಗೆ ಮಾಹಿತಿ ನೀಡಿದರು. ಮೊದಲ ಪಟ್ಟಿ ಬಿಡುಗಡೆ ವಿಚಾರವಾಗಿ ಚರ್ಚಿಸಲು ಇಂದು (ಮಾರ್ಚ್ 16) ಸಂಜೆಯೇ ದೆಹಲಿಗೆ ಹೋಗಬೇಕಿತ್ತು. ಆದರೆ ಕಾರ್ಯಕ್ರಮಗಳಿರುವ ಕಾರಣ ಶುಕ್ರವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದೇನೆ. ನಾಳೆ ಕಾಂಗ್ರೆಸ್​ ಕೇಂದ್ರ ಚುನಾವಣಾ ಸಮಿತಿ ಸಭೆ (CEC) ಸಭೆ ಇದೆ. ಅದು ಮುಗಿದ ಬಳಿಕ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಅವರು ತಿಳಿಸಿದರು. ಮಾರ್ಚ್​​ 21ರಂದು ರಾಹುಲ್ ಗಾಂಧಿ ಬೆಳಗಾವಿಗೆ ಭೇಟಿ ನೀಡಲಿದ್ದಾರೆ ಎಂದೂ ಅವರು ಹೇಳಿದರು. ನಾಳೆ (ಮಾರ್ಚ್ 17) ಕಾಂಗ್ರೆಸ್​ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಟಿಕೆಟ್​ ಆಕಾಂಕ್ಷಿಗಳ ಚಿತ್ತ ಇದೀಗ ದೆಹಲಿಯತ್ತ ನೆಟ್ಟಿದೆ.

ಕಾಂಗ್ರೆಸ್‌ನ 135 ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆಯೇ (ಮಾ.17) ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ಈಗಾಗಲೇ ತಿಳಿಸಿದ್ದವು. ಇದಕ್ಕೆ ಪೂರಕವೆಂಬತೆ ಎಂಬಂತೆ ಸ್ಕ್ರೀನಿಂಗ್ ಕಮಿಟಿಯಿಂದ ಹೈಕಮಾಂಡ್‌ಗೆ ಕಳುಹಿಸಲಾಗಿರುವ ಅಭ್ಯರ್ಥಿಗಳ ಪಟ್ಟಿ ಟಿವಿ9ಗೆ ಲಭ್ಯವಾಗಿದ್ದು, ಈಗಾಗಲೇ ಪ್ರಕಟಿಸಲಾಗಿದೆ (ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ).

ಭಾರತ್ ಜೋಡೋ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ ಮಾರ್ಚ್ 21ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಗಾವಿಯಿಂದಲೇ ಚುನಾವಣೆಗೆ ಕಹಳೆ ಊದಲಿದ್ದಾರೆ. ರಾಹುಲ್ ಗಾಂಧಿ ಯುವಕರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಘೋಷಣೆ ಮಾಡಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಹಲವು ಜಿಲ್ಲೆಗಳ ನಾಯಕರ ಜತೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: Karnataka Polls: ಅಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಅಸಮಾಧಾನ; ರಾಜ್ಯ ಸರ್ಕಾರದ ವಿರುದ್ಧ ಗರಂ

ಅದೇ ದಿನ ಇತ್ತೀಚಿಗೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.

ಜೆಡಿಎಸ್ – ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ

ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುರುವಾರ ಮಂಡ್ಯದಲ್ಲಿ ಘರ್ಷಣೆ ನಡೆದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದ ಪೊಲೀಸರ ಜತೆಗೂ ಕಾಂಗ್ರೆಸ್ ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದ್ದಾರೆ. ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಮಧ್ಯ ಪ್ರವೇಶಿಸಿದ ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ನರೇಂದ್ರಸ್ವಾಮಿ, ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ ಎಂದು ಪೊಲೀಸರಿಗೆ ತಾಕೀತು ಮಾಡಿದ್ದಾರೆ.

ಇನ್ನಷ್ಟು ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:51 pm, Thu, 16 March 23

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ