AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಳಗಾವಿಯಲ್ಲಿ ವರುಣನ ಅವಾಂತರ, ಮನೆ ಗೋಡೆ ಕುಸಿದು 15 ವರ್ಷದ ಬಾಲಕ ಸಾವು

ರಾಜ್ಯದ ಕರಾವಳಿ ಪ್ರದೇಶದಲ್ಲಿ ಜುಲೈನಲ್ಲಿ ವಿಪರೀತ ಮಳೆಯಾಗಿದೆ. ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆಯ ಗೋಡೆಯ ಒಂದು ಭಾಗ ಕುಸಿದು 15 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.

Karnataka Rains: ಬೆಳಗಾವಿಯಲ್ಲಿ ವರುಣನ ಅವಾಂತರ, ಮನೆ ಗೋಡೆ ಕುಸಿದು 15 ವರ್ಷದ ಬಾಲಕ ಸಾವು
ಬೆಳಗಾವಿಯಲ್ಲಿ ವರುಣನ ಅವಾಂತರ
Follow us
TV9 Web
| Updated By: ಆಯೇಷಾ ಬಾನು

Updated on:Jul 15, 2022 | 8:26 PM

ಬೆಳಗಾವಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆಯ ಗೋಡೆಯ ಒಂದು ಭಾಗ ಕುಸಿದು 15 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚುಂಚುನವಾಡ ಗ್ರಾಮದಲ್ಲಿ ಘಟನೆ ನಡೆದಿದ್ದು ಮೃತ ಬಾಲಕನನ್ನು ಅನಂತು ಪಾಶೆಟ್ಟು (15) ಎಂದು ಗುರುತಿಸಲಾಗಿದೆ.

ರಾಜ್ಯದಲ್ಲಿ ವರುಣನ ಆರ್ಭಟ

ರಾಜ್ಯದ ಕರಾವಳಿ ಪ್ರದೇಶದಲ್ಲಿ ಜುಲೈನಲ್ಲಿ ವಿಪರೀತ ಮಳೆಯಾಗಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ, ತಮಿಳುನಾಡು, ಕರಾವಳಿ ಕರ್ನಾಟಕ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮಳೆಯಿಂದ ಮನೆ, ಬೆಳೆ ಹಾನಿಯಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾಸಗಿ ರೆಸಾರ್ಟ್ನಲ್ಲಿ ಜಿಲ್ಲಾಡಳಿತಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮನೆಗಳಿಗೆ ತುರ್ತು ಪರಿಹಾರ 10 ಸಾವಿರ ರೂ. ನೀಡಿ, ನಂತರ ಮನೆಗಳ ನಿರ್ಮಾಣ ಕೂಡಲೇ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ರಸ್ತೆ, ಸೇತುವೆ ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯ ದುರಸ್ತಿಗೆ ಆದ್ಯತೆ ನೀಡಬೇಕು. ಮಹಾರಾಷ್ಟ್ರದ ಕೋಯ್ನಾ ಜಲಾಶಯದ ನೀರಿನ ಮಟ್ಟದ ಬಗ್ಗೆ ನಿಗಾ ವಹಿಸಲು ಅಲ್ಲಿನ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಬೇಕು. ಜಲಾಶಯಗಳಿಂದ ನೀರು ಹೊರಬಿಡುವ ಮುನ್ನ ಗ್ರಾಮಗಳಿಗೆ ಎಚ್ಚರಿಕೆ ನೀಡಿ ಜೀವ ಹಾನಿ ಅಥವಾ ಮನೆಗಳಿಗೆ ತೊಂದರೆಯಾಗದಂತೆ ಮುನ್ನಚ್ಚರಿಕೆ ವಹಿಸಿ. ಜನರ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

ಎನ್ ಡಿಆರ್ ಎಫ್ ಮಾರ್ಗಸೂಚಿಗಳ ಪ್ರಕಾರ ಹಾನಿಗೊಳಗಾಗಿರುವ ಮನೆಗಳ ನಿರ್ಮಾಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ಗಂಭೀರವಾಗಿ ಪರಿಗಣಿಸಿ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಒದಗಿಸಬೇಕು. ಬೆಳೆ ಹಾನಿ, ರಸ್ತೆ ದುರಸ್ತಿ, ಮನೆಗಳ ಹಾನಿ ಬಗ್ಗೆ ಸಮೀಕ್ಷೆ ಸರಿಯಾಗಿ ಆಗಬೇಕು. ಜಿಲ್ಲೆಗಳಲ್ಲಿ ಮುಂದಿನ 5-6 ದಿನಗಳಲ್ಲಿ ಆಗುವ ಮಳೆ ಮುನ್ಸೂಚನೆಯನ್ನು ಗಮನಿಸಬೇಕು. ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಸನ್ನದ್ಧರಾಗಬೇಕು ಎಂದರು.

Published On - 6:20 pm, Fri, 15 July 22

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ