ಪುನೀತ್ ರಾಜ್​ಕುಮಾರ್​ ನಿಧನ ಹಿನ್ನೆಲೆ ಬೆಳಗಾವಿಯಲ್ಲಿ ಈ ಬಾರಿ ಸರಳವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Karnataka Rajyotsava 2021: ಬೆಳಗಾವಿಯ ಪ್ರಮುಖ ಬೀದಿಗಳು ಮಾತ್ರ ಕನ್ನಡ ಬಾವುಟ ಮತ್ತು ಹೂಗಳಿಂದ ಅಲಂಕಾರಗೊಂಡಿವೆ. ಚನ್ನಮ್ಮ ವೃತ್ತವನ್ನು ಹೂವು, ಬಾಳೆ ಗಿಡಗಳಿಂದ ಅಲಂಕರಿಸಲಾಗಿದೆ.

ಪುನೀತ್ ರಾಜ್​ಕುಮಾರ್​ ನಿಧನ ಹಿನ್ನೆಲೆ ಬೆಳಗಾವಿಯಲ್ಲಿ ಈ ಬಾರಿ ಸರಳವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ
ಪುನೀತ್ ರಾಜ್​ಕುಮಾರ್​ ನಿಧನ ಹಿನ್ನೆಲೆ ಬೆಳಗಾವಿಯಲ್ಲಿ ಈ ಬಾರಿ ಸರಳವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 01, 2021 | 10:14 AM

ಬೆಳಗಾವಿ: ನಟ ಪುನೀತ್ ರಾಜ್​ಕುಮಾರ್ ನಿಧನ ಹಿನ್ನೆಲೆ ಬೆಳಗಾವಿಯಲ್ಲಿ ಈ ಬಾರಿ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಚನ್ನಮ್ಮ ವೃತ್ತದಲ್ಲಿ ಪವರ್‌ ಸ್ಟಾರ್ ಪುನೀತ್ ರಾಜ್​ಕುಮಾರ್ ಭಾವಚಿತ್ರ ಇಟ್ಟು ವೇದಿಕೆ ನಿರ್ಮಾಣ ಮಾಡಲಾಗಿದೆ. ಪುನೀತ್ ರಾಜ್​ಕುಮಾರ್ ವೇದಿಕೆ ನಿರ್ಮಿಸಿ ಪುನೀತ್‌ಗೆ ಕನ್ನಡಪರ ಹೋರಾಟಗಾರರು ವಿಶೇಷ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಪುನೀತ್ ಭಾವಚಿತ್ರಕ್ಕೆ ಕೈ ಮುಗಿದು ಸಾರ್ವಜನಿಕರು ಸೇಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಬೆಳಗಾವಿಯ ಪ್ರಮುಖ ಬೀದಿಗಳು ಮಾತ್ರ ಕನ್ನಡ ಬಾವುಟ ಮತ್ತು ಹೂಗಳಿಂದ ಅಲಂಕಾರಗೊಂಡಿವೆ. ಚನ್ನಮ್ಮ ವೃತ್ತವನ್ನು ಹೂವು, ಬಾಳೆ ಗಿಡಗಳಿಂದ ಅಲಂಕರಿಸಲಾಗಿದೆ.

ಕುಂದಾನಗರಿ ಬೆಳಗಾವಿಯಲ್ಲಿ ರಾಜ್ಯೋತ್ಸವ ಆಚರಣೆ ಗತ್ತೆ ಬೇರೆ ರೀತಿ ಇರುತ್ತದೆ. ರಾಜ್ಯದಲ್ಲಿ ನಡೆಯುವ ಆಚರಣೆ ಒಂದು ಕಡೆಯಾದರೆ ಬೆಳಗಾವಿಯಲ್ಲಿ ನಡೆಯುವ ರಾಜ್ಯೋತ್ಸವ ವಿಭಿನ್ನ ಮತ್ತು ವಿಶೇಷವಾಗಿರುತ್ತದೆ. ಕಳೆದ 66 ವರ್ಷದಿಂದ ಬೆಳಗಾವಿಯಲ್ಲಿ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಎಂಇಎಸ್ ಪುಂಡರ ದಬ್ಬಾಳಿಕೆ ನಡುವೆಯೂ ಕನ್ನಡಿಗರು ಕುಗ್ಗದೆ ಕೆಚ್ಚೆದೆಯಿಂದ ರಾಜ್ಯೋತ್ಸವವನ್ನು ಆಚರಿಸುತ್ತಿದ್ದರು. ಸಾಕಷ್ಟು ಬಾರಿ ನಾಡದ್ರೋಹಿಗಳು ರಾಜ್ಯೋತ್ಸವ ಆಚರಣೆ ವೇಳೆ ಅಡ್ಡಿಪಡಿಸುವ ಕೆಲಸ ಮಾಡಿದರು ನಮ್ಮವರು ನಾಡದ್ರೋಹಿಗಳಿಗೆ ತಕ್ಕ ಉತ್ತರ ನೀಡಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿದ್ದಾರೆ. ಆದರೆ ಇಪ್ಪತ್ತು ವರ್ಷಗಳ ಈಚೇಗೆ ಬಹಳ ಅದ್ದೂರಿಯಾಗಿ ಮನೆ ಮನೆಗಳಲ್ಲೂ, ಬೀದಿ ಬೀದಿಗಳಲ್ಲೂ ರಾಜ್ಯೋತ್ಸವ ಆಚರಣೆ ಆರಂಭ ಆಯಿತು‌.‌

ಇದೇ ಮೊದಲ ಬಾರಿ ಬೆಳಗಾವಿಯಲ್ಲಿ ಸರಳ ರಾಜ್ಯೋತ್ಸವ ಕೊರೊನಾ ಸೋಂಕಿನ ಭೀತಿಯ ನಡುವೆಯೂ ಗಡಿನಾಡು, ಕುಂದಾನಗರಿ ಬೆಳಗಾವಿ ಕನ್ನಡ ಹಬ್ಬವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಸರಳ ಆಚರಣೆ ನಡುವೆಯೂ ಬೆಳಗಾವಿ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಎಲ್ಲಿ ನೋಡಿದ್ದಲ್ಲಿ ಕನ್ನಡದ ರಂಗು ಹಳದಿ, ಕೆಂಪು ಬಣ್ಣ, ಕನ್ನಡದ ಬಾವುಟಗಳು ಸಂಭ್ರಮಕ್ಕೆ ಇಂಬು ನೀಡುತ್ತಿವೆ. ಈ ಬಾರಿಯ ಕೊರೊನಾ ಸೋಂಕು ಹಾಗೂ ಕನ್ನಡ ಚಲನಚಿತ್ರ ನಟ ಪುನೀತ್ ರಾಜ್​ಕುಮಾರ್​ ಅವರ ನಿಧನದಿಂದ ಅತ್ಯಂತ ಸರಳವಾಗಿ ಆಚರಣೆ ಮಾಡಲು ವಿವಿಧ ಕನ್ನಡ ಪರ ಸಂಘಟನೆಗಳು ನಿರ್ಧಾರ ತೆಗೆದುಕೊಂಡಿದ್ದವು. ಈ ಹಿನ್ನೆಲೆ ಇಂದು ಸರಳವಾಗಿ ರಾಜ್ಯೋತ್ಸವ ಆಚರಣೆ ಮಾಡುತ್ತಿದ್ದರೂ ಪ್ರಮುಖ ಬೀದಿಗಳಲ್ಲಿ ಸಿಂಗರಿಸಲಾಗಿದೆ.

kannada rajyotsava

ಪುನೀತ್ ರಾಜಕುಮಾರ್ ಭಾವಚಿತ್ರ ಇಟ್ಟು ವೇದಿಕೆ ನಿರ್ಮಾಣ

ಕರ್ನಾಟಕದ ರಾಜ್ಯೋತ್ಸವವನ್ನ ಕನ್ನಡದ ಹಬ್ಬವನ್ನಾಗಿ ಆಚರಿಸುವ ಬೆಳಗಾವಿ ಜಿಲ್ಲೆಯಲ್ಲಿ ಲಕ್ಷಾಂತರ ಕನ್ನಡದ ಅಭಿಮಾನಿಗಳು ಕನ್ನಡ ತೇರನ್ನು ಎಳೆಯುವ ಮೂಲಕ ತಮ್ಮ ಸ್ವಾಭಿಮಾನವನ್ನು ತೋರಿಸಿ ಇಡೀ ರಾಜ್ಯದ ಗಮನ ಸೆಳೆಯುತ್ತಾರೆ. ಕರ್ನಾಟಕದ ರಾಜ್ಯೋತ್ಸವದ ಅಂಗವಾಗಿ ಸಂಗೊಳ್ಳಿ ರಾಯಣ್ಣ ವೃತ್ತ, ರಾಣಿ ಚನ್ನಮ್ಮ ವೃತ್ತ, ಧರ್ಮವೀರ ಸಂಭಾಜಿ ವೃತ್ತ ಸೇರಿದಂತೆ ನಗರದ ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಜ್ಯೋತ್ಸವದ ಧ್ವಜಾರೋಹಣ

kannada rajyotsava in belagavi

ಕರ್ನಾಟಕ ರಾಜ್ಯೋತ್ಸವ ಆಚರಣೆ

ಪ್ರತಿ ವರ್ಷ ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಬೆಳಗಾವಿ ಜಿಲ್ಲಾಡಳಿತದಿಂದ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ. ಈ ಬಾರಿ ಕೂಡ ಸರಳವಾಗಿ ರಾಜ್ಯೋತ್ಸವವನ್ನು ಜಿಲ್ಲಾಡಳಿತ ಆಯೋಜನೆ ಮಾಡಿದ್ದು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಧ್ವಜಾರೋಹಣ ನೆರವೇರಿಸಿದರು. ಇತ್ತ ಚನ್ನಮ್ಮ ವೃತ್ತದಲ್ಲಿ ನೂರಾರು ಕನ್ನಡಿಗರು ಸೇರಿ ರಾಜ್ಯೋತ್ಸವ ಆಚರಣೆ ಮಾಡಿದರು.

ವರದಿ: ಸಹದೇವ ಮಾನೆ

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ 2021: ಪ್ರತಿ ಬಾರಿ ಕೇಳುವಾಗಲೂ ಕನ್ನಡಿಗರಿಗೆ ರೋಮಾಂಚನ ನೀಡುವ ಅದ್ಭುತ ಚಿತ್ರಗೀತೆಗಳಿವು

Karnataka Rajyotsava 2021: ಕನ್ನಡಕ್ಕಿದೆ ಪ್ರಾದೇಶಿಕತೆಯ ಛಾಪು; ಆಯಾ ಸ್ಥಳ, ಜನಾಂಗಕ್ಕೆ ಅನುಗುಣವಾಗಿ ಬದಲಾಗುತ್ತದೆ ಆಡುನುಡಿ

Published On - 9:48 am, Mon, 1 November 21

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು