AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರ ಹೆಸರು ಡಿಲೀಟ್​​​​​​​​ ಮಾಡುವಂತೆ ಪತ್ರ: ಹರಿಪ್ರಸಾದ್ ಆರೋಪಕ್ಕೆ ಸ್ಪಷ್ಟನೆ ನೀಡಿದ ಬಿಜೆಪಿ ಶಾಸಕ

ಮತಕಳ್ಳತನದ ಕುರಿತಾಗಿ ಶಾಸಕ ಅಭಯ್ ಪಾಟೀಲ್ ವಿರುದ್ದ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ 2000 ಹೆಚ್ಚು ಮತದಾರರ ಜನರ ಹೆಸರು ಡಿಲೀಟ್ ಮಾಡಲು ಪತ್ರ ನೀಡಿದ್ದಾರೆ. ಪತ್ರ ‌ನೀಡಲು ಇವರು ಯಾರು? ಕಾನೂನು ಮೀರಿ ಶಾಸಕರೇ ಮತ ಡಿಲೀಟ್ ಮಾಡಲು ಪತ್ರ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಇದೀಗ ಶಾಸಕಯ ಅಭಯ್ ಪಾಟೀಲ್ ಸ್ಪಷ್ಟನೆ ನೀಡುವ ಮೂಲಕ ಹರಿಪ್ರಸಾದ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಮತದಾರರ ಹೆಸರು ಡಿಲೀಟ್​​​​​​​​ ಮಾಡುವಂತೆ ಪತ್ರ: ಹರಿಪ್ರಸಾದ್ ಆರೋಪಕ್ಕೆ ಸ್ಪಷ್ಟನೆ ನೀಡಿದ ಬಿಜೆಪಿ ಶಾಸಕ
Hariprasad And Abhya Patil
ಸಹದೇವ್​ ಮಾನೆ
| Edited By: |

Updated on: Sep 25, 2026 | 3:21 PM

Share

ಬೆಂಗಳೂರು, (ಸೆಪ್ಟೆಂಬರ್ 25): ಬೆಳಗಾವಿಯಲ್ಲಿ 2000 ಹೆಚ್ಚು ಮತದಾರರ ಜನರ ಹೆಸರು ಡಿಲೀಟ್ ಮಾಡಲು ಪತ್ರ ನೀಡಿದ್ದಾರೆ. ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಆರೋಪಕ್ಕೆ  ಇದೀಗ ಶಾಸಕಯ ಅಭಯ್ ಪಾಟೀಲ್ ಸ್ಪಷ್ಟನೆ ನೀಡುವ ಮೂಲಕ ಹರಿಪ್ರಸಾದ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅಭಯ್ ಪಾಟೀಲ್, ಬಿ.ಕೆ.ಹರಿಪ್ರಸಾದ್ ಅವರಿಗೆ ಕನ್ನಡ ಓದಲು ಬರುವುದಿಲ್ಲ. ಬಿಎಲ್ 2 ನೀಡಿರುವ ವರದಿ ಪರಿಶೀಲನೆಗೆ ಹೇಳಿದ್ದೇನೆ. ನಾನು ಹೆಸರು ಡಿಲೀಟ್ ಮಾಡಲು ಪತ್ರವನ್ನು ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ಹರಿಪ್ರಸಾದ್​​​ ಮಂತ್ರಿ ಆಗದಿದ್ದಕ್ಕೆ ಡಿಸ್ಟರ್ಬ್ ಆಗಿದ್ದಾರೆ. ಸಿಎಂ ಡಿ.ಕೆ.ಶಿವಕುಮಾರ್ ಅವರದ್ದು ಹೆಚ್ಚು ಪ್ರಚಾರ ಆಗ್ತಿದೆ ನಾನೂ ಪ್ರಚಾರ ಪಡೆಯಬೇಕೆಂದು ಹೀಗೆ ಮಾಡ್ತಿದ್ದಾರೆ. ಈ ಪತ್ರ ನೋಡಿದ್ರೆ ಹುಚ್ಚರು ಯಾರೆಂದು ಗೊತ್ತಾಗುತ್ತೆ. ಪರಿಶೀಲನೆಗೂ, ಡಿಲೀಟ್​ಗೂ ಅರ್ಥ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡುವ ಮೂಲಕ ವ್ಯಂಗ್ಯವಾಡಿದ್ದಾರೆ.

ಇದನ್ನೂ ನೋಡಿ: ಮತದಾರರ ಹೆಸರು ಡಿಲೀಟ್ ಮಾಡಲು ಪತ್ರ: ಬಿಜೆಪಿ ಎಂಎಲ್​​ಎ ವಿರುದ್ಧ ದಾಖಲೆ ಬಿಡುಗಡೆ ಮಾಡಿದ ಬಿಕೆ ಹರಿಪ್ರಸಾದ್

ರಾಹುಲ್ ಗಾಂಧಿ‌ ಇಂತಹವರನ್ನ ಅಧ್ಯಕ್ಷರನ್ನಾಗಿ ಮಾಡಿದ್ದಾರೆ.ಬೋಗಸ್ ಇರುವ ಹೆಸರು ಡಿಲೀಟ್​ ಮಾಡಲು ಹೇಳಿದ್ದೇನೆ. ನನ್ನ ಕ್ಷೇತ್ರದಲ್ಲಿ ಒಂದೇ ಬೂತ್​ನಲ್ಲಿ ಸತ್ತವರ ಹೆಸರಿನಲ್ಲಿ ಎಸ್ಐಆರ್ ಆಗಿದೆ. 2700 ಬಿಎಲ್ಎ 2ಗಳು ಕೊಟ್ಟಿದ್ದ ವರದಿ ರಿಸೀವ್ಡ್ ಕೊಡ್ತಿಲ್ಲ. ಮುಖ್ಯ ಚುನಾವಣಾ ಅಧಿಕಾರಿಯನ್ನು ಖುದ್ದು ಭೇಟಿಯಾಗುತ್ತೇನೆ. ಮುಂದಿನ ವಾರ ದೆಹಲಿಗೆ ಹೋಗಿ ದಾಖಲೆ ಒದಗಿಸುತ್ತೇನೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತೇನೆ. ಹರಿಪ್ರಸಾದ್ ರೀತಿ ಕೆಳಮಟ್ಟಕ್ಕೆ ಹೋಗಲು ನನಗೆ ಆಗಲ್ಲ. ಹರಿಪ್ರಸಾದ್​ ರೀತಿ ನಾನು ಚಿಲ್ಲರೆ ಲೆವೆಲ್​ಗೆ ಹೋಗಲ್ಲ ಇಂಥ ಹೇಳಿಕೆಗೆ ನಾನು ಹೆದರಲ್ಲ. ಓದಲು ಬರದೇ ಬೇಜವಾಬ್ದಾರಿ ಹೇಳಿಕೆ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಕೆ ಹರಿಪ್ರಸಾದ್ ಆರೋಪವೇನು?

ದೇಶಾದ್ಯಂತ ಜಾರಿಯಲ್ಲಿರುವ ವಿಶೇಷ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ(SIR) ಸೇರಿದಂತೆ ಹಲವು ವಿಷಯಗಳಲ್ಲಿ ಭಾರತ ಚುನಾವಣಾ ಆಯೋಗದ(ECI) ಮುಖ್ಯಸ್ಥರು ಹಾಗೂ ಸದಸ್ಯರ ನಡುವೆ ಆಂತರಿಕ ಭಿನ್ನಾಭಿಪ್ರಾಯ ಬಹಿರಂಗವಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಬಿಜೆಪಿ ಶಾಸಕರ ವಿರುದ್ಧ ಗುರುವಾರ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ದಾಖಲೆಗಳನ್ನು ಸಹ ಬಿಡುಗಡೆ ಮಾಡಿದ್ದರು. ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ 2,500 ಮತದಾರರ ಹೆಸರುಗಳನ್ನು ತೆಗೆದುಹಾಕುವಂತೆ ಕೋರಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದರು. ಬಿಜೆಪಿ ಶಾಸಕರು ನೀಡಿರುವ ಎಲ್ಲಾ ಹೆಸರುಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಅವರನ್ನು ಪಾಕಿಸ್ತಾನಿಗಳು ಮತ್ತು ಬಾಂಗ್ಲಾದೇಶಿಗಳು ಎಂದು ಕರೆದಿದ್ದಾರೆ. ಮತದಾರರ ಪಟ್ಟಿಯಿಂದ 2,500 ಜನರ ಹೆಸರುಗಳನ್ನು ತೆಗೆದುಹಾಕಬೇಕು ಎಂದು ಶಾಸಕರೊಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಹೀಗಾಗಿ ಅಭಯ್ ಪಾಟೀಲ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More