ಮಾಜಿ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಮಗನ ಆಸ್ತಿಗೂ ಈಗ ವಕ್ಫ್ ಕಂಟಕ!

ಮಾಜಿ ವಕ್ಫ್​​ ಸಚಿವೆ, ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪುತ್ರನ ಜಮೀನು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲಾಗಿದೆ. ಇದೇ ರೀತಿ ಹಲವು ರೈತರ ಜಮೀನುಗಳು ವಕ್ಫ್ ಆಸ್ತಿ ಎಂದು ನಮೂದಾಗಿರುವುದು ಬಹಿರಂಗಗೊಂಡಿದೆ. ಈ ವಿಚಾರವಾಗಿ ಸರ್ಕಾರ ಮತ್ತು ಬಿಜೆಪಿ ನಡುವೆ ವಾಗ್ಯುದ್ಧ ನಡೆಯುತ್ತಿದೆ.

ಮಾಜಿ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಮಗನ ಆಸ್ತಿಗೂ ಈಗ ವಕ್ಫ್ ಕಂಟಕ!
ಶಶಿಕಲಾ ಜೊಲ್ಲೆ, ಪಹಣಿ ಪತ್ರ
Follow us
Sahadev Mane
| Updated By: ವಿವೇಕ ಬಿರಾದಾರ

Updated on: Oct 31, 2024 | 10:44 AM

ಚಿಕ್ಕೋಡಿ, ಅಕ್ಟೋಬರ್​ 31: ರೈತರ ಪಹಣಿಯಲ್ಲಿ ವಕ್ಫ್ (Waqf)​ ಆಸ್ತಿ ಎಂದು ನಮೂದಿಸಿದ್ದನ್ನು ವಿರೋಧಿಸಿ ರಾಜ್ಯ ಬಿಜೆಪಿ (BJP) ನಾಯಕರು ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದಾರೆ. ಆದರೆ ವಕ್ಫ್​ ಬೋರ್ಡ್​​ ವಕ್ರ ದೃಷ್ಟಿ ಬಿಜೆಪಿ ನಾಯಕರ ಮೇಲೆಯೇ ಬಿದ್ದಿದೆ. ಮಾಜಿ ಹಜ್ ಮತ್ತು ವಕ್ಫ್ ಬೋರ್ಡ್ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಕುಟುಂಬಕ್ಕೆ ವಕ್ಫ್ ಬೋರ್ಡ್ ಶಾಕ್ ನೀಡಿದೆ. ಜೊಲ್ಲೆ (Jolle) ದಂಪತಿಯ ಕಿರಿಯ ಪುತ್ರನಿಗೆ ಸೇರಿದ ಜಮೀನಿನ ಪಹಣಿ ಪತ್ರದಲ್ಲಿ “ವಕ್ಫ್ ಆಸ್ತಿ” ಎಂದು ನಮೂದಿಸಲಾಗಿದೆ.

ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ದಂಪತಿಯ ಕಿರಿಯ ಪುತ್ರ ಬಸವಪ್ರಭು ಜೊಲ್ಲೆ ಅವರಿಗೆ ಸೇರಿದ‌ 2 ಎಕರೆ‌ 13 ಗುಂಟೆ ಜಮೀನಿನ‌ ಪಹಣಿಯಲ್ಲಿ ವಕ್ಫ್ ಆಸ್ತಿ ಅಂತ ಹೆಸರು ಸೇರ್ಪಡೆಯಾಗಿದೆ.

ಚಿಕ್ಕೋಡಿ ‌ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಸರ್ವೆ ನಂಬರ್ 337ರಲ್ಲಿ ಬಸವಪ್ರಭು ಜೊಲ್ಲೆ ಅವರಿಗೆ ಸೇರಿದ 2 ಎಕರೆ 13 ಗುಂಟೆ ಜಮೀನು ಇದೆ. ಈ ಜಮೀನಿನಲ್ಲಿ ಜೊಲ್ಲೆ ಕುಟುಂಬ ತಲ-ತಲಾಂತರಗಳಿಂದ ಉಳಿಮೆ‌ ಮಾಡುತ್ತಾ ಬಂದಿದೆ. ಆದರೆ, 2021ರಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ವಕ್ಫ್​ ಬೋರ್ಡ್​ ಸಚಿವರಾಗಿದ್ದ ಸಮಯದಲ್ಲೇ ತಮ್ಮ ಕಿರಿಯ ಪುತ್ರ ಬಸವಪ್ರಭು ಅವರಿಗೆ ಸೇರಿದ ಜಮೀನು ಪಹಣಿಯಲ್ಲಿ ವಕ್ಫ್​ ಆಸ್ತಿ ಅಂತ ನಮೂದಾಗಿದೆ. ವಕ್ಫ್ ಆಸ್ತಿ ಎಂದು ಉಲ್ಲೇಖಿತ ಪಹಣಿ ಪತ್ರ ನೋಡಿ ಬಸವಪ್ರಭು ಜೊಲ್ಲೆ ದಂಗಾಗಿದ್ದಾರೆ. ಇನ್ನು, ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಈವರೆಗೆ ವಕ್ಫ್ ಬೋರ್ಡ್‌‌ನಿಂದ ಬಸವಪ್ರಭು ಅವರಿಗೆ ಯಾವುದೇ ನೋಟಿಸ್​ ಜಾರಿಯಾಗಿಲ್ಲ.

ಶಶಿಕಲಾ ಜೊಲ್ಲೆ ಅವರು ತಾವು ಸಚಿವೆಯಾಗಿದ್ದ ಸಮಯದಲ್ಲೇ  ತಮ್ಮ ಪುತ್ರನ ಜಮೀನಿನ ಪಹಣಿಯಲ್ಲಿ ವಕ್ಫ್​ ಆಸ್ತಿ ಅಂತ ನಮೂದು ಆಗಿದ್ದು ವಿಪಾರ್ಯಾಸವಾಗಿದೆ. ಅಲ್ಲದೇ, ಇವರ ಅವಧಿಯಲ್ಲಿ ಅನೇಕ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಆಸ್ತಿ ಅಂತ ನಮೂದು ಮಾಡಲಾಗಿದೆ.

ಇದನ್ನೂ ಓದಿ: ಸರ್ಕಾರಿ ಜಾಗ, ರೈತರ ಜಮೀನು ಪಹಣಿಯಲ್ಲಿ ವಕ್ಫ್​ ಹೆಸರು

ಶಶಿಕಲಾ ಜೊಲ್ಲೆ ಅವಧಿಯಲ್ಲಿ ರೈತರ ಪಹಣಿಯಲ್ಲಿ ವಕ್ಫ್​ ಹೆಸರು

ಶಾಸಕಿ ಶಶಿಕಲಾ ಜೊಲ್ಲೆ ಅವರು 2021 ರಿಂದ 2023ವರೆಗೂ ಬಿಜೆಪಿ ಸರ್ಕಾರದಲ್ಲಿ ಹಜ್​ ಮತ್ತು ವಕ್ಫ್​​ ಬೋರ್ಡ್​ ಸಚಿವರಾಗಿದ್ದರು. ಇವರ ಅವಧಿಯಲ್ಲಿ, ಅಂದರೆ 2021ರಲ್ಲಿ ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಕವಲೂರು, ಹೂವಿನಾಳ ಕುಕನೂರು, ಯಲಬುರ್ಗಾ ತಾಲೂಕಿನ ಹಲವು ರೈತರ ಜಮೀನು ಪಹಣಿಯ ಕಾಲಂ 11ರಲ್ಲಿ ವಕ್ಫ್ ಬೋರ್ಡ್​ ಅಂತ ಹೆಸರು ನಮೂದಾಗಿದೆ. ಅದು ಕೂಡ ರೈತರಿಗೆ ನೋಟಿಸ್​ ನೀಡದೆ ಪಹಣಿಯಲ್ಲಿ ವಕ್ಫ್​​ ಆಸ್ತಿ ಅಂತ ನಮೂದಾಗಿದೆ. ಬಳಿಕ, ವಕ್ಫ್​ ಬೋರ್ಡ್ 2023ರಲ್ಲಿ  ಅನೇಕ ರೈತರಿಗೆ ನೋಟಿಸ್ ನೀಡಿದ್ದು, ತಮ್ಮ ಮೂಲ ದಾಖಲೆಗಳನ್ನು ಹಾಜರುಪಡಿಸುವಂತೆ ಹೇಳಿದೆ.

​​ಶಶಿಕಲಾ ಜೊಲ್ಲೆ ಅವಧಿಯಲ್ಲೇ ವಿಜಯಪುರ ರೈತರಿಗೆ ನೋಟಿಸ್​

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್​ ಬಿಡುಗಡೆ ಮಾಡಿದ್ದ ದಾಖಲೆಗಳ ಪ್ರಕಾರ, 2023ರಲ್ಲಿ ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್​​ ಬೋರ್ಡ್​ ನೋಟಿಸ್​ ನೀಡಲಾಗಿತ್ತು.  ವಿಜಯಪುರ ಜಿಲ್ಲೆಯ, ವಿಜಯಪುರ ತಾಲೂಕಿನ ಮೇಲ್ಭಾಗಾಯತ್ ಹಳ್ಳಿಯ ಅಶೋಕ್​, ಗೋವಿಂದ, ಬಿಡನಾಳ ಜಹಮನ್​ ಲಹೋರಿ, ಬಸವರಾಜ, ಉಮಾ, ದಯಾನಂದ್​ ರೋವತ್ತಪ್ಪ ಎಂಬುವರಿಗೆ ಪ್ರತ್ಯೇಕವಾಗಿ ನೋಟಿಸ್​ ಜಾರಿ ಮಾಡಲಾಗಿತ್ತು.

ಕರ್ನಾಟಕ ಸರ್ಕಾರ ನೀಡಿರುವ ನಿರ್ದೇಶನ ಮೇರೆಗೆ ಕರ್ನಾಟಕ ವಕ್ಫ್​ ಬೋರ್ಡ್ 2022ರ ಅಕ್ಟೋಬರ್​ 17 ರಂದು ವಿಜಯಪುರದ ಜಿಲ್ಲೆಯ ರೈತರಿಗೆ ನೋಟಿಸ್​ ನೀಡಿದೆ. “ರೈತರು ತಮ್ಮ ಜಮೀನಿನ ದಾಖಲೆಗಳ ಸಮೇತ​ 2022ರ ಅಕ್ಟೋಬರ್​ 30 ರಂದು ಕರ್ನಾಟಕ ರಾಜ್ಯ ವಕ್ಫ್​ ಮಂಡಳಿ ಮುಂದೆ ಹಾಜರಾಗಬೇಕು. ಗೈರು ಹಾಜರಾದರೂ ವಿಚಾರಣೆ ಮುಂದುವರೆಯಲಿದ್ದು ಮತ್ತು ಆದೇಶ ಹೊರಡಿಸಲಾಗುತ್ತದೆ ಎಂದು ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ”.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ