ಡಿಸೆಂಬರ್​ 9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ

ಕರ್ನಾಟಕದ ಚಳಿಗಾಲದ ಅಧಿವೇಶನವು ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ಮುಡಾ ಹಗರಣ, ವಕ್ಫ್ ಆಸ್ತಿ ವಿವಾದ, ಮತ್ತು ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳು ಮುಖ್ಯ ಚರ್ಚಾ ವಿಷಯಗಳಾಗುವ ಸಾಧ್ಯತೆ ಇದೆ. ವಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಆರೋಪಗಳನ್ನು ಮಾಡುವ ನಿರೀಕ್ಷೆಯಿದೆ.

ಡಿಸೆಂಬರ್​ 9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ
ಸುವರ್ಣ ವಿಧಾನಸೌಧ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Nov 19, 2024 | 1:46 PM

ಬೆಳಗಾವಿ, ನವೆಂಬರ್​ 19: ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ (Karnataka Winter session) ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (Suvarna Soudha) ಡಿಸೆಂಬರ್​ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಅವರು ಅಧಿವೇಶನ ಕರೆದಿದ್ದಾರೆ. ಡಿಸೆಂಬರ್​ 9 ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ.

ಇತ್ತೀಚಿಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾಸಭಾಧ್ಯಕ್ಷ ಯು.ಟಿ ಖಾದರ್​ ಮತ್ತು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ಅಲ್ಲದೆ, ಅಧಿವೇಶನ ನಡೆಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡುವಂತೆ ಸೂಚನೆ ನೀಡಿದ್ದರು.

ಈ ಬಾರಿಯ ಚಳಿಗಾಲ ಅಧಿವೇಶನ ಬಿಸಿ ಬಿಸಿ ಚರ್ಚೆ, ವಾಕ್ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ರೈತರ ನಿದ್ದೆಗೆಡಿಸಿರುವ ವಕ್ಫ್ ಆಸ್ತಿ ವಿವಾದ ಚರ್ಚೆಗೆ ಪ್ರಮುಖ ಬಿಂದುಗಳಾಗಬಹದು. ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಚಾಟಿ ಬೀಸಲು ವಿಪಕ್ಷಗಳು ತಯಾರಿ ನಡೆಸಿವೆ. ಹಾಗೇ ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳಾದ ಮೂಲಭೂತ ಸೌಕರ್ಯದ ವಿಚಾರಕ್ಕೆ ಈ ಬಾರಿಯಾದರೂ ಪರಿಹಾರ ಸಿಗುತ್ತಾ ಕಾದು ನೋಡಬೇಕಿದೆ.

ಇದನ್ನೂ ಓದಿ: ಗಾಂಧೀಜಿ ಬೆಳಗಾವಿ ಸಭೆಗೆ 100 ವರ್ಷ, ಜಂಟಿ ಅಧಿವೇಶನಕ್ಕೆ ಒಬಾಮಾಗೆ ಆಹ್ವಾನ: ಹೆಚ್​ಕೆ ಪಾಟೀಲ್​

ಚಳಿಗಾಲದ ಅಧಿವೇಶನದ ಜೊತೆಗೆ ಡಿಸೆಂಬರ್​ 26 ಮತ್ತು 27 ರಂದು ಬೆಳಗಾವಿಯಲ್ಲೇ ಕಾಂಗ್ರೆಸ್​ ಅಧಿವೇಶನ ನೆಡಸಲು ಪಕ್ಷ ತೀರ್ಮಾನಿಸಿದೆ. 1924 ಡಿಸೆಂಬರ್​ 26 ಮತ್ತು 27 ರಂದು ಬೆಳಗಾವಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್​ ಅಧಿವೇಶನ ಉದ್ದೇಶಿಸಿ ಮಹಾತ್ಮಾ ಗಾಂಧೀಜಿ ಮಾತನಾಡಿದ್ದರು. ಈ ಕಾರ್ಯಕ್ರಮಕ್ಕೆ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಈ ಬಾರಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಅಧಿವೇಶನ ನೆಡೆಸಲು ನಿರ್ಧರಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:41 pm, Tue, 19 November 24

ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್ ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್
ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್ ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್
ಪಿಎಂ ಮೋದಿ ಹಂಚಿಕೊಂಡ ಬ್ರೆಜಿಲ್​ನ ಜಿ-20 ಶೃಂಗಸಭೆಯ ಮೊದಲ ದಿನದ ಝಲಕ್
ಪಿಎಂ ಮೋದಿ ಹಂಚಿಕೊಂಡ ಬ್ರೆಜಿಲ್​ನ ಜಿ-20 ಶೃಂಗಸಭೆಯ ಮೊದಲ ದಿನದ ಝಲಕ್
ಕೇವಲ ಒಂದು ಆರೋಪದಲ್ಲಿ ಬಿಜೆಪಿಗೆ ಕ್ಲೀನ್ ಚಿಟ್ ಸಿಕ್ಕಿದೆ: ಪರಮೇಶ್ವರ್
ಕೇವಲ ಒಂದು ಆರೋಪದಲ್ಲಿ ಬಿಜೆಪಿಗೆ ಕ್ಲೀನ್ ಚಿಟ್ ಸಿಕ್ಕಿದೆ: ಪರಮೇಶ್ವರ್
ಉಡುಪಿ ಜಿಲ್ಲೆ ಪೀತೆಬೈಲ್ ಅರಣ್ಯಪ್ರದೇಶದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ
ಉಡುಪಿ ಜಿಲ್ಲೆ ಪೀತೆಬೈಲ್ ಅರಣ್ಯಪ್ರದೇಶದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ
ಇಟಲಿ ಪ್ರಧಾನಿ ಮೆಲೋನಿಯನ್ನು ಭೇಟಿಯಾದ ಪ್ರಧಾನಿ ಮೋದಿ
ಇಟಲಿ ಪ್ರಧಾನಿ ಮೆಲೋನಿಯನ್ನು ಭೇಟಿಯಾದ ಪ್ರಧಾನಿ ಮೋದಿ
ಸಚಿವ ಸ್ಥಾನಕ್ಕೆ ಬೇಡಿಕೆಯಲ್ಲ, ನನ್ನ ಹಕ್ಕು ಎಂದ ಶಾಸಕ ನರೇಂದ್ರಸ್ವಾಮಿ
ಸಚಿವ ಸ್ಥಾನಕ್ಕೆ ಬೇಡಿಕೆಯಲ್ಲ, ನನ್ನ ಹಕ್ಕು ಎಂದ ಶಾಸಕ ನರೇಂದ್ರಸ್ವಾಮಿ
‘ಹೆಂಗ್ ಮಾತಾಡ್ತಾಳೋ ಯಪ್ಪಾ’; ಶೋಭಾ ಕೂಗಾಟ ನೋಡಿ ಹನುಮಂತ ಸೈಲೆಂಟ್
‘ಹೆಂಗ್ ಮಾತಾಡ್ತಾಳೋ ಯಪ್ಪಾ’; ಶೋಭಾ ಕೂಗಾಟ ನೋಡಿ ಹನುಮಂತ ಸೈಲೆಂಟ್
ಪತ್ನಿ ಗರ್ಭವತಿಯಾಗಿದ್ದಾಗ ಮನೆಗೆ ಅಡಿಪಾಯ ಹಾಕಬಹುದಾ? ವಿಡಿಯೋ ನೋಡಿ
ಪತ್ನಿ ಗರ್ಭವತಿಯಾಗಿದ್ದಾಗ ಮನೆಗೆ ಅಡಿಪಾಯ ಹಾಕಬಹುದಾ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ಆರ್ಥಿಕ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ಆರ್ಥಿಕ ಯೋಗವಿದೆ
ರಜೆ ಮುಗಿಸಿ ಬೆಂಗಳೂರಿನತ್ತ ಜನ: ನೆಲಮಂಗಲ ಬಳಿ ಫುಲ್ ಟ್ರಾಫಿಕ್ ಜಾಮ್
ರಜೆ ಮುಗಿಸಿ ಬೆಂಗಳೂರಿನತ್ತ ಜನ: ನೆಲಮಂಗಲ ಬಳಿ ಫುಲ್ ಟ್ರಾಫಿಕ್ ಜಾಮ್