ಡಿಸೆಂಬರ್​ 9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ

ಕರ್ನಾಟಕದ ಚಳಿಗಾಲದ ಅಧಿವೇಶನವು ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ಮುಡಾ ಹಗರಣ, ವಕ್ಫ್ ಆಸ್ತಿ ವಿವಾದ, ಮತ್ತು ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳು ಮುಖ್ಯ ಚರ್ಚಾ ವಿಷಯಗಳಾಗುವ ಸಾಧ್ಯತೆ ಇದೆ. ವಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಆರೋಪಗಳನ್ನು ಮಾಡುವ ನಿರೀಕ್ಷೆಯಿದೆ.

ಡಿಸೆಂಬರ್​ 9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ
ಸುವರ್ಣ ವಿಧಾನಸೌಧ
Edited By: ವಿವೇಕ ಬಿರಾದಾರ

Updated on: Nov 20, 2024 | 2:05 PM

ಬೆಳಗಾವಿ, ನವೆಂಬರ್​ 19: ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ (Karnataka Winter session) ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (Suvarna Soudha) ಡಿಸೆಂಬರ್​ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಅವರು ಅಧಿವೇಶನ ಕರೆದಿದ್ದಾರೆ. ಡಿಸೆಂಬರ್​ 9 ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ.

ಇತ್ತೀಚಿಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾಸಭಾಧ್ಯಕ್ಷ ಯು.ಟಿ ಖಾದರ್​ ಮತ್ತು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ಅಲ್ಲದೆ, ಅಧಿವೇಶನ ನಡೆಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡುವಂತೆ ಸೂಚನೆ ನೀಡಿದ್ದರು.

ಈ ಬಾರಿಯ ಚಳಿಗಾಲ ಅಧಿವೇಶನ ಬಿಸಿ ಬಿಸಿ ಚರ್ಚೆ, ವಾಕ್ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ರೈತರ ನಿದ್ದೆಗೆಡಿಸಿರುವ ವಕ್ಫ್ ಆಸ್ತಿ ವಿವಾದ ಚರ್ಚೆಗೆ ಪ್ರಮುಖ ಬಿಂದುಗಳಾಗಬಹದು. ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಚಾಟಿ ಬೀಸಲು ವಿಪಕ್ಷಗಳು ತಯಾರಿ ನಡೆಸಿವೆ.
ಹಾಗೇ ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳಾದ ಮೂಲಭೂತ ಸೌಕರ್ಯದ ವಿಚಾರಕ್ಕೆ ಈ ಬಾರಿಯಾದರೂ ಪರಿಹಾರ ಸಿಗುತ್ತಾ ಕಾದು ನೋಡಬೇಕಿದೆ.

ಇದನ್ನೂ ಓದಿ: ಗಾಂಧೀಜಿ ಬೆಳಗಾವಿ ಸಭೆಗೆ 100 ವರ್ಷ, ಜಂಟಿ ಅಧಿವೇಶನಕ್ಕೆ ಒಬಾಮಾಗೆ ಆಹ್ವಾನ: ಹೆಚ್​ಕೆ ಪಾಟೀಲ್​

ಚಳಿಗಾಲದ ಅಧಿವೇಶನದ ಜೊತೆಗೆ ಡಿಸೆಂಬರ್​ 26 ಮತ್ತು 27 ರಂದು ಬೆಳಗಾವಿಯಲ್ಲೇ ಕಾಂಗ್ರೆಸ್​ ಅಧಿವೇಶನ ನೆಡಸಲು ಪಕ್ಷ ತೀರ್ಮಾನಿಸಿದೆ. 1924 ಡಿಸೆಂಬರ್​ 26 ಮತ್ತು 27 ರಂದು ಬೆಳಗಾವಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್​ ಅಧಿವೇಶನ ಉದ್ದೇಶಿಸಿ ಮಹಾತ್ಮಾ ಗಾಂಧೀಜಿ ಮಾತನಾಡಿದ್ದರು. ಈ ಕಾರ್ಯಕ್ರಮಕ್ಕೆ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಈ ಬಾರಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಅಧಿವೇಶನ ನೆಡೆಸಲು ನಿರ್ಧರಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:41 pm, Tue, 19 November 24

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us