ಕಿತ್ತೂರು: ಬಿಜೆಪಿ ಶಾಸಕನ ಹುಟ್ಟುಹಬ್ಬದಲ್ಲಿ ಭಾಗವಹಿಸಿದ ಪೊಲೀಸ್ ಸಿಬ್ಬಂದಿಗೆ ನೊಟೀಸ್ ಜಾರಿ

ಶಾಸಕ ಮಹಾಂತೇಶ್ ದೊಡ್ಡಗೌಡರ್ ಮತ್ತು ಅವರ ಪತ್ನಿಯನ್ನು ಕುರಿಸಿ, ಪೊಲೀಸ್ ಅಧಿಕಾರಿಗಳು ಹೂವಿನ ಮಳೆ ಸುರಿದಿದ್ದಾರೆ.

ಕಿತ್ತೂರು: ಬಿಜೆಪಿ ಶಾಸಕನ ಹುಟ್ಟುಹಬ್ಬದಲ್ಲಿ ಭಾಗವಹಿಸಿದ ಪೊಲೀಸ್ ಸಿಬ್ಬಂದಿಗೆ ನೊಟೀಸ್ ಜಾರಿ
ಹೂವಿನ ಮಳೆ ಸುರಿಸಿದ ಪೊಲೀಸರು
Updated By: guruganesh bhat

Updated on: Sep 04, 2021 | 6:43 PM

ಬೆಳಗಾವಿ: ಕಿತ್ತೂರು ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ್ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿಗಳಿಗೆ ನೊಟೀಸ್ ಜಾರಿಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ . ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ ನೋಟಿಸ್ ಜಾರಿಗೊಳಿಸಿದ್ದಾರೆ. ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಐ ಸಾತೇನಹಳ್ಳಿ, ನೇಸರಗಿ ಠಾಣೆ ಪಿಎಸ್ಐ ವೈ.ಎಸ್.ಶೀಗಿಹಳ್ಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಶಾಸಕ ಮಹಾಂತೇಶ್ ದೊಡ್ಡಗೌಡರ್ ಮತ್ತು ಅವರ ಪತ್ನಿಯನ್ನು ಕುರಿಸಿ, ಪೊಲೀಸ್ ಅಧಿಕಾರಿಗಳು ಹೂವಿನ ಮಳೆ ಸುರಿದಿದ್ದಾರೆ. ಬೈಲಹೊಂಗಲ ಡಿಎಸ್‌ಪಿ ಶಿವಾನಂದ ಕಟಗಿ, ಸಿಪಿಐ ಸಾತೇನಹಳ್ಳಿ, ನೇಸರಗಿ ಪೊಲೀಸ್ ಠಾಣೆ ಪಿಎಸ್ಐ ಶೀಗಿಹಳ್ಳಿ, ಎಸ್‌ಐ ವಿಶ್ವನಾಥ್ ಮಲ್ಲನ್ನವರ್, ಪೇದೆಗಳು ಮತ್ತು ಚಾಲಕರು ಶಾಸಕ ಮಹಾಂತೇಶ್ ದೊಡ್ಡಗೌಡರ್ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದಾರೆ.

ಪೊಲೀಸ್ ಅಧಿಕಾರಿಗಳು ಶಾಸಕರೋರ್ವರ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸುವುದು ಪೊಲೀಸ್ ಇಲಾಖೆಯ ಸೂಚನೆಯನ್ನು ಮುರಿದಂತಾಗಿತ್ತು. ಈ ಹಿನ್ನೆಲೆಯಲ್ಲಿ ಟಿವಿ9 ಸಮಗ್ರ ಸುದ್ದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಕಿತ್ತೂರು ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ್​ ಹುಟ್ಟುಹಬ್ಬದಲ್ಲಿ ಭಾಗವಹಿಸಿದ ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಐ ಸಾತೇನಹಳ್ಳಿ, ನೇಸರಗಿ ಠಾಣೆ ಪಿಎಸ್ಐ ವೈ.ಎಸ್.ಶೀಗಿಹಳ್ಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: 

ಬೆಳಗಾವಿಯಲ್ಲಿ ಬಿಜೆಪಿ ಶಾಸಕನ ಹುಟ್ಟು ಹಬ್ಬದ ವಿಡಿಯೋ ವೈರಲ್; ಹೂವಿನ ಮಳೆ ಸುರಿಸಿದ ಪೊಲೀಸರು

Crop Relief Fund: ಬೆಳೆಹಾನಿಯಾದ 45,586 ರೈತರಿಗೆ 38.64 ಕೋಟಿ ಬೆಳೆ ಪರಿಹಾರ: ಕಂದಾಯ ಸಚಿವ ಆರ್ ಅಶೋಕ್ ಘೋಷಣೆ

(Kittur BJP MLA Mahantesh Doddagoudar birthday viral video Notices issued to police personnel participated)