ಬೆಳಗಾವಿ: ಕಿತ್ತೂರು ಉತ್ಸವದ 225ನೇ ಬೆಳ್ಳಿ ಹಬ್ಬದ ಮಹೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 23, 24ರಂದು ಚೆನ್ನಮ್ಮನ ಕಿತ್ತೂರು ಉತ್ಸವ ನಡೆಯಲಿದೆ ಎಂದು ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಜಿ. ಹಿರೇಮಠ ಹೇಳಿಕೆ ನೀಡಿದ್ದಾರೆ. ಕೊವಿಡ್ ಮಾರ್ಗಸೂಚಿ ಅನುಸರಿಸಿ ಕಿತ್ತೂರು ಉತ್ಸವ ಆಚರಣೆ ಮಾಡಲಾಗುತ್ತದೆ. ಕಿತ್ತೂರು ಉತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯಿಂದ ಸ್ಮರಣ ಸಂಚಿಕೆ ಬಿಡುಗಡೆ ಆಗಲಿದೆ ಎಂದು ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಜಿ. ಹಿರೇಮಠ ಮಾಹಿತಿ ನೀಡಿದ್ದಾರೆ.
ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ ಆಗಮಿಸಲಿದ್ದಾರೆ. ವಿಚಾರ ಸಂಕಿರಣ, ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೊವಿಡ್ ಹಿನ್ನೆಲೆ ಈ ಬಾರಿ ಕಿತ್ತೂರು ಉತ್ಸವದಲ್ಲಿ ಕುಸ್ತಿ ಪಂದ್ಯಾವಳಿ ಇಲ್ಲ. ಕಿತ್ತೂರು ಉತ್ಸವ ಜಿಲ್ಲಾ ಮಟ್ಟದ ಉತ್ಸವ ಆಗಿದೆ. ಇದು ರಾಜ್ಯ ಮಟ್ಟದ ಉತ್ಸವ ಆಗಬೇಕಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಉತ್ಸವಕ್ಕಾಗಿ ಹೆಚ್ಚಿನ ಅನುದಾನ ನೀಡಬೇಕೆಂದು ಮನವಿ ಮಾಡುತ್ತೇವೆ. ಸದ್ಯ ಒಂದು ಕೋಟಿ ಅನುದಾನದಲ್ಲಿ ಕಿತ್ತೂರು ಉತ್ಸವ ಆಚರಿಸಲಾಗುತ್ತಿದೆ ಎಂದು ಬೆಳಗಾವಿಯಲ್ಲಿ ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಇದನ್ನೂ ಓದಿ: ಪ್ರವಾಸಿಗರ ಗಮನಕ್ಕೆ: ಮೈಸೂರು ಮೃಗಾಲಯಕ್ಕೆ ಹೆಚ್ಚಿನ ಜನ ಬರುವ ನಿರೀಕ್ಷೆ; ಹೀಗಾಗಿ ನಾಳೆ ವಾರದ ರಜೆ ಇಲ್ಲ