ಬೆಳಗಾವಿ: ಜಮೀನಿನ ಹಕ್ಕು ಪತ್ರಕ್ಕಾಗಿ 9 ಗ್ರಾಮಗಳ ರೈತರು ನಡೆಸುತ್ತಿದ್ದ ಪ್ರತಿಭಟನೆ ತಾತ್ಕಾಲಿಕ ವಾಪಸ್
ಜಮೀನಿನ ಹಕ್ಕು ಪತ್ರಗಳನ್ನು ನೀಡುವಂತೆ ಆಗ್ರಹಿಸಿ ಬೆಳಗಾವಿಯ ಕಿತ್ತೂರಿನಲ್ಲಿ ಕುಲವಳ್ಳಿ ಸೇರಿದಂತೆ ಒಟ್ಟು ಒಂಬತ್ತು ಗ್ರಾಮಗಳ ರೈತರು ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ನಡುವೆ ಮಧ್ಯಪ್ರವೇಶಿಸಿದ ಇಬ್ಬರು ಸ್ವಾಮೀಜಿಗಳು ರೈತರೊಂದಿಗೆ ಸಂಧಾನ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಶ್ರಮಿಸುವ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.
ಬೆಳಗಾವಿ, ಡಿ.9: ಜಮೀನು ಹಕ್ಕು ಪತ್ರಗಳನ್ನು ನೀಡುವಂತೆ ಆಗ್ರಹಿಸಿ ಜಿಲ್ಲೆಯ (Belagavi) ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಕುಲವಳ್ಳಿ ಸೇರಿ ಒಂಬತ್ತು ಗ್ರಾಮಗಳ ರೈತರು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೇಂದ್ರ ಸ್ವಾಮೀಜಿ ಹಾಗೂ ನಿಚ್ಚಣಕಿ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಯವರು ಸಚಿವರನ್ನು ಭೇಟಿ ಮಾಡಿಸೋ ಜವಾಬ್ದಾರಿ ಹೊತ್ತ ಹಿನ್ನೆಲೆ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೇಂದ್ರ ಸ್ವಾಮೀಜಿ ಹಾಗೂ ನಿಚ್ಚಣಕಿ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಗಳು ರೈತರೊಂದಿಗೆ ಸಂಧಾನ ನಡೆಸಿ ಅವರ ಮನವೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಚಿವರನ್ನು ಭೇಟಿ ಮಾಡಿಸುವ ಜವಾಬ್ದಾರಿಯನ್ನು ಇಬ್ಬರು ಶ್ರೀಗಳು ಹೊತ್ತ ಹಿನ್ನೆಲೆ ಸತ್ಯಾಗ್ರಹವನ್ನು ತಾತ್ಕಾಲಿಕ ವಾಪಸ್ ಪಡೆಯಲು ರೈತರು ತೀರ್ಮಾನಿಸಿದ್ದಾರೆ.
ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಡಿ.13 ರಂದು ಬೆಳಗಾವಿಯಲ್ಲಿ ಪ್ರತಿಭಟನೆ: ಜಯಮೃತ್ಯುಂಜಯ ಸ್ವಾಮೀಜಿ
ಬಂಧಿತ 12 ಜನರಿಗೆ ಜಾಮೀನು ಆದ ಬಳಿಕ ಸಚಿವರು, ಜಿಲ್ಲಾಧಿಕಾರಿ ಅವರ ಭೇಟಿಗೆ ತೀರ್ಮಾನ ಮಾಡಲಾಗುವುದು. ಬಂಧಿತರ ಬಳಿ ಭೂಮಿಗೆ ಸಂಬಂಧಿತ ದಾಖಲು ಪತ್ರಗಳು ಇವೆ. ಜಾಮೀನು ಸಿಕ್ಕ ಬಳಿಕ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಕೆಗೆ ತೀರ್ಮಾನ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ